ಮುರುಘಾ ಶರಣರ ವಿರುದ್ಧ ಪೋಕ್ಸೋ ಪ್ರಕರಣ: ತನಿಖೆ ನಂತರ ಸತ್ಯಾಂಶ ತಿಳಿಯಲಿದೆ ಎಂದ ಸಿಎಂ

ಬೆಂಗಳೂರು : ಮುರುಘಾಮಠದ ಶಿವಮೂರ್ತಿ ಶರಣರ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣದ ಕುರಿತಾಗಿನ ಸತ್ಯಾಂಶ ಏನು ಎಂಬುದು ತನಿಖೆ ಬಳಿಕ ಹೊರಬಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಈ ಕುರಿತು ಮಾಧ್ಯಮದವರ ಜೊತೆ ಮಾತನಾಡಿದ ಅವರು, ಈ ಪ್ರಕರಣದ ತನಿಖೆ ಮಾಡಲು ಪೊಲೀಸರು ಸಂಪೂರ್ಣ ಸ್ವತಂತ್ರರಾಗಿದ್ದಾರೆ. ಪೊಲೀಸರು ಈ ಬಗ್ಗೆ ತನಿಖೆ ನಡೆಸಲಿದ್ದು, ಆ ಬಳಿಕ ಸತ್ಯಾಂಶ ಏನೆಂಬುದು ಹೊರಬರಲಿದೆ ಎಂದು ತಿಳಿಸಿದ್ದಾರೆ.

ಚಿತ್ರದುರ್ಗ ಮುರುಘಾಮಠದ ಶಿವಮೂರ್ತಿ ಶರಣರ ವಿರುದ್ಧ ಪೋಕ್ಸೋ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಇದರ ಜೊತೆಯಲ್ಲಿ ಚಿತ್ರದುರ್ಗದಲ್ಲಿ ಅಪಹರಣ ಪ್ರಕರಣವೂ ದಾಖಲಾಗಿದೆ. ಇದು ಮಹತ್ವದ ಪ್ರಕರಣವಾಗಿದ್ದು ಪೊಲೀಸರು ಈ ಎರಡೂ ಪ್ರಕರಣಗಳ ತನಿಖೆ ಮಾಡುತ್ತಿದ್ದಾರೆ. ತನಿಖೆ ಹಿತದೃಷ್ಟಿಯಿಂದ ಈ ಸಂದರ್ಭದಲ್ಲಿ ಹೆಚ್ಚಿಗೆ ಏನನ್ನೂ ಹೇಳಲು ಆಗುವುದಿಲ್ಲ. ತನಿಖೆ ಬಳಿಕ ಸತ್ಯಾಂಶ ಏನು ಎಂಬುದು ಹೊರಬಲಿದೆ ಎಂದು ಹೇಳಿದ್ದಾರೆ.
ಮುರುಘಾಮಠದ ಶಿವಮೂರ್ತಿ ಶ್ರೀಗಳ ವಿರುದ್ಧ ಪೋಕ್ಸೋ ಪ್ರಕರಣ ಸಂಬಂಧ ಇಬ್ಬರು ಬಾಲಕಿಯರನ್ನು ಮೈಸೂರಿನಿಂದ ಚಿತ್ರದುರ್ಗಕ್ಕೆ ಶಿಫ್ಟ್ ಮಡಲಾಗಿದೆ. ಪೊಲೀಸರ ಭದ್ರತೆಯಲ್ಲಿ ಇಂದು, ಭಾನುವಾರ ಮುಂಜಾನೆ 4 ಗಂಟೆ ಸುಮಾರಿಗೆ ಇಬ್ಬರು ಬಾಲಕಿಯರನ್ನು ಮೈಸೂರಿನಿಂದ ಚಿತ್ರದುರ್ಗಕ್ಕೆ ಶಿಫ್ಟ್ ಮಾಡಲಾಗಿದೆ. ಸದ್ಯ ಇಬ್ಬರು ಬಾಲಕಿಯರು ಬಾಲ ಭವನದಲ್ಲಿದ್ದಾರೆ. ಇಂದು ಜಡ್ಜ್ ಎದುರು ಹೇಳಿಕೆ ನೀಡುವ ಸಾಧ್ಯತೆ ಇದೆ. ನಂತರ ಬಾಲಕಿಯರಿಗೆ ವೈದ್ಯಕೀಯ ಪರೀಕ್ಷೆ ನಡೆಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಪ್ರಮುಖ ಸುದ್ದಿ :-   ಮತಗಟ್ಟೆ ಬಳಿ ಮಹಿಳೆಗೆ ಹೃದಯಾಘಾತ ; ತಕ್ಷಣವೇ ಸಿಪಿಆರ್‌ ಮಾಡಿ ಜೀವ ಉಳಿಸಿದ ಮತದಾನ ಮಾಡಲು ಬಂದಿದ್ದ ವೈದ್ಯ

3.7 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement