ನನ್ನ ಮೇಲೆ ಆಧಾರ ರಹಿತ ಆರೋಪ; ಮಾನನಷ್ಟ ಮೊಕದ್ದಮೆ ಹಾಕ್ತೇನೆ-ಸಚಿವ ಬಿ.ಸಿ.ನಾಗೇಶ

posted in: ರಾಜ್ಯ | 0

ಬೆಂಗಳೂರು: ಆಧಾರರಹಿತ ಸುಳ್ಳು ಆರೋಪಗಳನ್ನು ಮಾಡಿದವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ ಎಂದು ಶಿಕ್ಷಣ ಸಚಿವ ಸಚಿವರಾದ ಬಿ.ಸಿ.ನಾಗೇಶ ಹೇಳಿದ್ದಾರೆ.
ಸೋಮವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ದುರುದ್ದೇಶ ಹಾಗೂ ವೈಯಕ್ತಿಕ ತೇಜೋವಧೆ ಮಾಡುವ ಉದ್ದೇಶದಿಂದ ಆಧಾರರಹಿತ ಆರೋಪಗಳನ್ನು ನನ್ನ ವಿರುದ್ಧ ಮಾಡಲಾಗಿದೆ. ಶಿಕ್ಷಣ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಆರೋಪ ಮಾಡಲಾಗಿದೆ. ಆದರೆ, ಈ ಕುರಿತು ನಮ್ಮ ಕಚೇರಿಗೆ ಯಾವುದೇ ದೂರುಗಳನ್ನು ನೀಡಿಲ್ಲ. ಆಯುಕ್ತರ ಕಚೇರಿಗೂ ಯಾವುದೇ ದೂರು ನೀಡಿಲ್ಲ. ಸಾಕ್ಷ್ಯಾಧಾರಗಳ ಸಮೇತ ದೂರು ನೀಡಿದರೆ ಈ ಬಗ್ಗೆ ಸಂಬಂಧಿಸಿದವರ ವಿರುದ್ಧ ಸೂಕ್ತ ವಿಚಾರಣೆ ನಡೆಸಿ ಕ್ರಮ ಕೈಗೊಳ್ಳಲಾಗುತ್ತದೆ. ನಮ್ಮ ಕಚೇರಿಗೆ ದೂರು ನೀಡಲಾಗದಿದ್ದರೆ ತನಿಖಾ ಸಂಸ್ಥೆಗಳು, ನ್ಯಾಯಾಲಯಗಳಿಗೂ ದೂರು ನೀಡಬಹುದು. ಆದರೆ, ಆಧಾರ ರಹಿತ ಆರೋಪ ಮಾಡುವುದು ಬೇಜವಾಬ್ದಾರಿತನದ ಪರಮಾವಧಿ’ ಎಂದು ಸಚಿವರು ಹೇಳಿದರು.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಶಾಲೆಗಳ ಪ್ರಥಮ ಮಾನ್ಯತೆ ಮತ್ತು ಮಾನ್ಯತೆ ನವೀಕರಣ ಪ್ರಕ್ರಿಯೆಯನ್ನು ಪಾರದರ್ಶಕ ಹಾಗೂ ತ್ವರಿತಗೊಳಿಸಲು ಆನ್‌ಲೈನ್ ವ್ಯವಸ್ಥೆ ಕಲ್ಪಿಸಲಾಗಿದೆ. ಅರ್ಜಿ ಸಲ್ಲಿಸುವ ಶಾಲೆಗಳಿಗೆ ತ್ರಿಸದಸ್ಯ ಸಮಿತಿ ಭೇಟಿ ನೀಡಿದಾಗ ಶಾಲೆಯ ಪ್ರತಿನಿಧಿಗಳು ಸ್ಥಳದಲ್ಲಿದ್ದು, ಶಾಲೆಯಲ್ಲಿನ ಮೂಲಸೌಕರ್ಯಗಳ ವಿವರಗಳನ್ನು ನೀಡಬೇಕುಎಂದು ಸಚಿವರು ತಿಳಿಸಿದರು.
ಹೊಸ ಶಾಲೆಗಳ ಆರಂಭಕ್ಕೆ ಸಂಬಂಧಿಸಿದಂತೆ ಲೋಕೋಪಯೋಗಿ ಇಲಾಖೆ ಮತ್ತು ಅಗ್ನಿಶಾಮಕ ಇಲಾಖೆಯಿಂದ ಪ್ರಮಾಣಪತ್ರ ಪಡೆಯಲು ವಿಳಂಬವಾಗುತ್ತಿದೆ ಎಂದು ಶಿಕ್ಷಣ ಸಂಸ್ಥೆಗಳು ಮನವಿ ಸಲ್ಲಿಸಿದ್ದವು. ಹಿನ್ನೆಲೆಯಲ್ಲಿ ಈ ಸಾಲಿನಲ್ಲಿ ಹೊಸ ಶಾಲೆ ನೋಂದಣಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಒಟ್ಟು ಎಂಟು ಬಾರಿ ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ’ ಎಂದರು.

ಇಂದಿನ ಪ್ರಮುಖ ಸುದ್ದಿ :-   ರಾಹುಲ್​ ಗಾಂಧಿ ಮನವಿಗೆ ಸಿಎಂ ಬೊಮ್ಮಾಯಿ ಸ್ಪಂದನೆ: ಗಾಯಗೊಂಡಿದ್ದ ಆನೆ ಮರಿಗೆ ಸೂಕ್ತ ಚಿಕಿತ್ಸೆ

ಇಲಾಖೆಯಿಂದ ಅನುಮತಿ, ಮಾನ್ಯತೆಯನ್ನು ಪಡೆದುಕೊಳ್ಳದೇ ನಿಯಮಬಾಹಿರವಾಗಿ ಹೊಸದಾಗಿ ಆರಂಭಿಸಲಾಗಿರುವ ಶಾಲೆಗಳ ಕುರಿತು ಶಿಕ್ಷಣ ಇಲಾಖೆಯಿಂದ ಪರಿಶೀಲನೆ ನಡೆದಿದೆ. ನಿಯಮ ಪಾಲಿಸದ ಶಾಲೆಗಳಲ್ಲಿ ಕಲಿಯುವ ಮಕ್ಕಳಿಗೆ ಗ್ರಾಮೀಣ ವಿದ್ಯಾಭ್ಯಾಸ ಪ್ರಮಾಣಪತ್ರ, ಕನ್ನಡ ಮಾಧ್ಯಮ ಪ್ರಮಾಣಪತ್ರ, ವ್ಯಾಸಂಗ ಪ್ರಮಾಣಪತ್ರ ಸೇರಿದಂತೆ ಇನ್ನಿತರ ಪ್ರಮಾಣಪತ್ರಗಳನ್ನು ಪಡೆಯಲು ಭವಿಷ್ಯದಲ್ಲಿ ತೊಂದರೆಯಾಗಬಾರದು ಎಂಬ ಸದುದ್ದೇಶದಿಂದ ಈ ಪರಿಶೀಲನೆ ಪ್ರಕ್ರಿಯೆ ನಡೆಸಲಾಗುತ್ತಿದೆ. ಮಕ್ಕಳ ಭವಿಷ್ಯಕ್ಕಾಗಿ ಕೈಗೊಳ್ಳಲಾದ ಸರ್ಕಾರದ ಈ ಕ್ರಮವನ್ನು ಸಹಿಸದ ಕೆಲವು ಶಿಕ್ಷಣ ವಿರೋಧಿ ಶಕ್ತಿಗಳು ಈ ಸುಳ್ಳು ಆರೋಪ ಮಾಡುತ್ತಿರಬಹುದು. ಇದರಲ್ಲಿ ಬ್ಲ್ಯಾಕ್‌ಮೇಲ್ ತಂತ್ರವೂ ಅಡಗಿರಬಹುದು.’ ಎಂದು ಅವರು ಹೇಳಿದರು.
ವೈಯಕ್ತಿಕವಾಗಿ ಹಾಗೂ ಶಿಕ್ಷಣ ಇಲಾಖೆಯ ವಿರುದ್ಧ ಆರೋಪ ಮಾಡಿರುವ ವ್ಯಕ್ತಿಯಿಂದ ಮಾಡಿರುವ ಆರೋಪಗಳ ಕುರಿತಂತೆ ದಾಖಲೆಗಳನ್ನು ಪಡೆದು, ವಿಚಾರಣೆ ನಡೆಸಿ ಕ್ರಮ ಕೈಗೊಳ್ಳಲು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರಿಗೆ ನಿರ್ದೇಶನ ನೀಡಲಾಗಿದೆ ಎಂದು ಸಚಿವ ನಾಗೇಶ್ ತಿಳಿಸಿದರು.

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

ಇಂದಿನ ಪ್ರಮುಖ ಸುದ್ದಿ :-   ಟಿಪ್ಪು ಎಕ್ಸ್ ಪ್ರೆಸ್’ ರೈಲು ಹೆಸರು ಬದಲಿಸಿ ‘ಒಡೆಯರ್ ಎಕ್ಸ್‌ಪ್ರೆಸ್’ ಎಂದು ಮರುನಾಮಕರಣ

/ 5. ಒಟ್ಟು ವೋಟುಗಳು

ನಿಮ್ಮ ಕಾಮೆಂಟ್ ಬರೆಯಿರಿ

advertisement