ಯಕ್ಷಗಾನ ಅಕಾಡೆಮಿ ವಾರ್ಷಿಕ ಪ್ರಶಸ್ತಿ ಪ್ರಕಟ: ಗಣೇಶ ಕೊಲೆಕಾಡಿಗೆ ‘ಪಾರ್ತಿಸುಬ್ಬ ಪ್ರಶಸ್ತಿ’, ಪುತ್ತಿಗೆ ರಘುರಾಮ ಹೊಳ್ಳ, ಉಮೇಶ ಭಟ್‌ ಬಾಡ, ಕೆ.ಪಿ.ಹೆಗಡೆ, ಪಟ್ಲರಿಗೆ ಗೌರವ ಪ್ರಶಸ್ತಿ- ಪೂರ್ಣ ಪಟ್ಟಿ ಇಲ್ಲಿದೆ

ಬೆಂಗಳೂರು: ಕರ್ನಾಟಕ ಯಕ್ಷಗಾನ ಅಕಾಡೆಮಿಯ 2022ನೇ ಸಾಲಿನ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ. ‘ಪಾರ್ತಿಸುಬ್ಬ ಪ್ರಶಸ್ತಿ’ಗೆ ಪ್ರಸಂಗಕರ್ತ ಹಾಗೂ ಯಕ್ಷಗಾನ ಗುರು ಗಣೇಶ ಕೊಲೆಕಾಡಿ ಅವರು ಆಯ್ಕೆಯಾಗಿದ್ದಾರೆ. ‘ಪಾರ್ತಿಸುಬ್ಬ ಪ್ರಶಸ್ತಿ’ಯು ₹ 1 ಲಕ್ಷ ನಗದು ಒಳಗೊಂಡಿದೆ.
ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅಕಾಡೆಮಿ ಅಧ್ಯಕ್ಷ ಜಿ.ಎಲ್. ಹೆಗಡೆ ಅವರು ಪ್ರಶಸ್ತಿ ಪಟ್ಟಿಯನ್ನು ಬಿಡುಗಡೆ ಮಾಡಿದರು.
2022ನೇ ಸಾಲಿನ ‘ಗೌರವ ಪ್ರಶಸ್ತಿ’ಗೆ ತೆಂಕುತಿಟ್ಟಿನ ಯಕ್ಷಗಾನ ಭಾಗವತ ಪುತ್ತಿಗೆ ರಘುರಾಮ ಹೊಳ್ಳ (ಮಂಗಳೂರು), ತೆಂಕುತಿಟ್ಟು ಭಾಗವತ ಪಟ್ಲ ಸತೀಶ್ ಶೆಟ್ಟಿ (ಮಂಗಳೂರು), ಮೂಡಲಪಾಯ ಯಕ್ಷಗಾನ ಭಾಗವತ ಹಾಗೂ ಕಲಾವಿದ ಭಾಗವತ ಚಂದಯ್ಯ (ತುಮಕೂರು), ಭಾಗವತ ಹಾಗೂ ಬಡಗುತಿಟ್ಟು ಪಾರಂಪರಿಕ ಯಕ್ಷಗಾನ ಕಲಾವಿದ ಭಾಗವತ ಉಮೇಶ ಭಟ್ ಬಾಡ (ಉತ್ತರ ಕನ್ನಡ) ಮತ್ತು ಭಾಗವತ ಹಾಗೂ ಬಡಗುತಿಟ್ಟು ಯಕ್ಷಗಾನ ಕಲಾವಿದ ಕೆ.ಪಿ. ಹೆಗಡೆ (ಉಡುಪಿ) ಆಯ್ಕೆಯಾಗಿದ್ದಾರೆ. ಈ ಪ್ರಶಸ್ತಿ ತಲಾ ₹ 50 ಸಾವಿರ ನಗದು ಒಳಗೊಂಡಿದೆ.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

‘ಯಕ್ಷಸಿರಿ ವಾರ್ಷಿಕ ಪ್ರಶಸ್ತಿ’ಗೆ ಯಕ್ಷಗಾನ ಕ್ಷೇತ್ರದ 10 ಜನ ಸಾಧಕರನ್ನು ಆಯ್ಕೆ ಮಾಡಲಾಗಿದ್ದು, ‘ಕರ್ಕಿ ಹಿರಿಯ ಪರಮಯ್ಯ ಹಾಸ್ಯಗಾರ ಪ್ರಶಸ್ತಿ’ಗೆ ಪಾರಂಪರಿಕ ಯಕ್ಷಗಾನ ಕಲಾವಿದ ಹುಕ್ಕಲಮಕ್ಕಿ ಕಮಲಾಕರ ಹೆಗಡೆ (ಉತ್ತರ ಕನ್ನಡ) ಭಾಜನರಾಗಿದ್ದಾರೆ. ಈ ಪ್ರಶಸ್ತಿಗಳು ತಲಾ ₹ 25 ಸಾವಿರ ನಗದು ಒಳಗೊಂಡಿವೆ. 2021ನೇ ಸಾಲಿನ ಪುಸ್ತಕ ಬಹುಮಾನಕ್ಕೆ ಮಂಗಳೂರಿನ ಪೊಳಲಿ ನಿತ್ಯಾನಂದ ಕಾರಂತ ಅವರ ‘ಯಕ್ಷಗಾನ ಪ್ರಸಂಗ ಸಂಪುಟ’, ಬೆಳಗಾವಿಯ ಎಲ್‌.ಎಸ್. ಶಾಸ್ತ್ರಿ ಅವರ ‘ಯಕ್ಷಗಾನ ನಕ್ಷತ್ರಗಳು’ ಹಾಗೂ ಬೆಂಗಳೂರಿನ ವಿದ್ಯಾರಶ್ಮಿ ಪೆಲತ್ತಡ್ಕ ಅವರ ‘ಯಕ್ಷಗಾನ ಲೀಲಾವಳಿ’ ಕೃತಿಗಳು ಆಯ್ಕೆಯಾಗಿವೆ. ಈ ಬಹುಮಾನವು ತಲಾ ₹ 25 ಸಾವಿರ ನಗದು ಒಳಗೊಂಡಿವೆ.
ಅಕಾಡೆಮಿಯ ವಾರ್ಷಿಕ ಪ್ರಶಸ್ತಿಗಳ ಪ್ರದಾನ ಸಮಾರಂಭವು ಸೆಪ್ಟೆಂಬರ್ ತಿಂಗಳ ಎರಡು ಅಥವಾ ಮೂರನೇ ವಾರದಲ್ಲಿ ಉಡುಪಿಯ ಕಮಲಶಿಲೆಯಲ್ಲಿ ನಡೆಯಲಿದೆ. ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನೀಲಕುಮಾರ್ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಜಿ.ಎಲ್. ಹೆಗಡೆ ತಿಳಿಸಿದರು.

ಓದಿರಿ :-   ಸಂಘರ್ಷಕ್ಕೆ ಮಿಲಿಟರಿ ಪರಿಹಾರವಲ್ಲ, ಮಾತುಕತೆ-ರಾಜತಾಂತ್ರಿಕತೆಯೇ ಬೇಕು : ಉಕ್ರೇನ್‌ನ ಅಧ್ಯಕ್ಷ ಝೆಲೆನ್ಸ್‌ಕೈಗೆ ಪ್ರಧಾನಿ ಮೋದಿ ಸಲಹೆ

‘ಯಕ್ಷಸಿರಿ ವಾರ್ಷಿಕ ಪ್ರಶಸ್ತಿ’ಗೆ ಆಯ್ಕೆಯಾದವರ ಪಟ್ಟಿ

ಕೋಲ್ಯಾರು ರಾಜು ಶೆಟ್ಟಿ; ಹೊರನಾಡು ಕನ್ನಡಿಗ; ಯಕ್ಷಗಾನ ಕಲಾವಿದ
ಕೃಷ್ಣ ಗಾಣಿಗ ಕೋಡಿ; ಉಡುಪಿ; ಬಡಗತಿಟ್ಟು ಯಕ್ಷಗಾನ ಕಲಾವಿದ
ಕೃಷ್ಣನಾಯ್ಕ ಜಿ. ಬೇಡ್ಕಣಿ; ಉತ್ತರ ಕನ್ನಡ; ಬಡಾಬಡಗು ಯಕ್ಷಗಾನ ಕಲಾವಿದ
ಶುಭಾನಂದ ಶೆಟ್ಟಿ; ಕಾಸರಗೋಡು; ತೆಂಕುತಿಟ್ಟು ಯಕ್ಷಗಾನ ಕಲಾವಿದ
ಬಾಲಕೃಷ್ಣ ನಾಯಕ್; ಉಡುಪಿ; ಬಡಗುತಿಟ್ಟು ಯಕ್ಷಗಾನ ಪ್ರಸಾಧನ ಕಲಾವಿದ
ಕವ್ವಾಳೆ ಗಣಪತಿ ಭಾಗವತ; ಉತ್ತರ ಕನ್ನಡ; ಬಡಾಬಡಗು ಯಕ್ಷಗಾನ ಕಲಾವಿದ
ಎಸ್‌.ಪಿ. ಅಪ್ಪಯ್ಯ; ಬೆಂಗಳೂರು; ಮೂಡಲಾಪಯ ಯಕ್ಷಗಾನ ಕಲಾವಿದ
ಡಿ. ಭೀಮಯ್ಯ; ತುಮಕೂರು; ಮೂಡಲಾಪಯ ಯಕ್ಷಗಾನ ಕಲಾವಿದ
ಕೊಲ್ಲೂರು ಕೊಗ್ಗ ಆಚಾರ್ಯ; ಉಡುಪಿ; ಬಡಗುತಿಟ್ಟು ಯಕ್ಷಗಾನ ಹಿಮ್ಮೇಳ ಕಲಾವಿದ
ಅಜಿತಕುಮಾರ್ ಜೈನ್; ಉಡುಪಿ; ತೆಂಕುತಿಟ್ಟು ಯಕ್ಷಗಾನ ಕಲಾವಿದ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

3.8 / 5. ಒಟ್ಟು ವೋಟುಗಳು 6

ಓದಿರಿ :-   ರೈಲ್ವೆ ಇಲಾಖೆಯು ಉದ್ಯೋಗ ಅವಕಾಶ: 3115 ಅಪ್ರೆಂಟಿಸ್‌ಗಳ ಹುದ್ದೆಗಳಿಗೆ ಅರ್ಜಿ ಆಹ್ವಾನ

ನಿಮ್ಮ ಕಾಮೆಂಟ್ ಬರೆಯಿರಿ

advertisement