ಹುಬ್ಬಳ್ಳಿಯ ಈದ್ಗಾ‌ ಮೈದಾನದಲ್ಲಿ ಮೂರು ದಿನಗಳ ಗಣೇಶೋತ್ಸವ ಆಚರಣೆಗೆ ಅವಕಾಶ

posted in: ರಾಜ್ಯ | 0

ಹುಬ್ಬಳ್ಳಿ: ಹುಬ್ಬಳ್ಳಿ ಈದ್ಗಾ‌ ಮೈದಾನದಲ್ಲಿ ಮೂರು ದಿನಗಳ ಕಾಲ ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆಗೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ (HDMC) ಅವಕಾಶ ನೀಡಿದೆ.
ಈ ಕುರಿತು ಮಾತನಾಡಿದ ಹುಬ್ಬಳ್ಳಿ-ಧಾರವಾಡ ಪಾಲಿಕೆ ಮೇಯರ್ ಈರೇಶ್ ಅಂಚಟಗೇರಿ ಗಣೇಶ ಪ್ರತಿಷ್ಠಾಪನೆಗೆ ಒಟ್ಟು ಆರು ಸಂಘಟನೆಗಳು ಮನವಿ ಮಾಡಿದ್ದವು. ಸಂಘಟನೆಗಳ ಮನವಿ ಪರಿಶೀಲನೆಗಾಗಿ ಸಮಿತಿಯನ್ನು ರಚಿಸಲಾಗಿತ್ತು. ಸಮಿತಿ ಗಣೇಶ ಪ್ರತಿಷ್ಠಾಪನೆಗೆ ಅವಕಾಶ ನೀಡುವಂತೆ ವರದಿ ನೀಡಿತ್ತು. ಹೀಗಾಗಿ ಆರು ಸಂಘಟನೆಗಳ ಪೈಕಿ ಒಂದು ಸಂಘಟನೆಗೆ ಅವಕಾಶ ನೀಡಲಾಗುತ್ತದೆ ಎಂದರು.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಆರು ಸಂಘಟನೆಗಳಲ್ಲಿ ಯಾರಿಗೆ ಕೊಡಬೇಕು ಎಂಬುದನ್ನು ಮೇಯರ್‌ ಅವರ ವಿವೇಚನೆಗೆ ಬಿಡಲಾಗಿದೆ. ಮಂಗಳವಾರ ಬೆಳಿಗ್ಗೆ ಸದನ ಸಮಿತಿ ಸಭೆ ಕರೆದು ಆರು ಸಂಘಟನೆಗಳಲ್ಲಿ ಯಾವ ಒಂದು ಸಮಿತಿಗೆ ಕೊಡಬೇಕು ಎಂದು ನಿರ್ಧರಿಸಲಾಗುತ್ತದೆ ಎಂದು ತಿಳಿಸಿದರು.
ಅಲ್ಲದೆ, ಎಲ್ಲ ಗಣೇಶೋತ್ಸವ ಸಮಿತಿಗೆ ಅನ್ವಯವಾಗುವ ನಿಯಮಾವಳಿಗಳು ಹಾಗೂ ಮಾನದಂಡಗಳು ಈದ್ಗಾ ಮೈದಾನದ ಗಣೇಶೋತ್ಸವ ಸಮಿತಿಗೆ ಅನ್ವಯವಾಗುತ್ತದೆ ಎಂದು ತಿಳಿಸಿದರು.

ಇದಕ್ಕೂ ಮೊದಲು ಸೋಮವಾರ ಸಂಜೆ 5 ಗಂಟೆಗೆ ಸದನ ಸಮಿತಿಯು ಮೇಯರ್ ಈರೇಶ ಅಂಚಟಗೇರಿ ಅವರಿಗೆ ವರದಿ ಸಲ್ಲಿಸಿದ ಬಳಿಕ, ಪ್ರವಾಸಿ ಮಂದಿರದಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ನೇತೃತ್ವದಲ್ಲಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಭೆ ನಡೆಸಲಾಯಿತು. ಸಭೆಯಲ್ಲಿ ಮೇಯರ್ ಈರೇಶ ಅಂಚಟಗೇರಿ, ಶಾಸಕರಾದ ಅರವಿಂದ ಬೆಲ್ಲದ, ಅಮೃತ ದೇಸಾಯಿ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಎಡಿಜಿಪಿ ಅಲೋಕ​ಕುಮಾರ, ಪಾಲಿಕೆ ಆಯುಕ್ತ ಡಾ. ಗೋಪಾಲಕೃಷ್ಣ ಬಿ. ಮೊದಲಾದವರಿದ್ದರು.

ಇಂದಿನ ಪ್ರಮುಖ ಸುದ್ದಿ :-   ಮಾಜಿ ಸಚಿವ ಜಬ್ಬಾರ್ ಖಾನ್ ಹೊನ್ನಳ್ಳಿ ನಿಧನ

 

 

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

4 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ

advertisement