ಮುರುಘಾ ಶರಣರ ವಿರುದ್ಧ ಆರೋಪ; ಸಂಪೂರ್ಣ ಹೊಣೆ ತನಿಖಾಧಿಕಾರಿಗೆ, ಯಾವುದೇ ಒತ್ತಡವಿಲ್ಲ: ಎಡಿಜಿಪಿ ಅಲೋಕಕುಮಾರ್

ಹುಬ್ಬಳ್ಳಿ: ಚತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ದಾಖಲಾದ ಪೋಕ್ಸೊ ಪ್ರಕರಣದ ಕುರಿತು ಎಲ್ಲ ವಿಧದಲ್ಲೂ ತನಿಖೆ ನಡೆಯುತ್ತಿದೆ.ಸಂಪೂರ್ಣ ತನಿಖೆ ಹೊಣೆಯನ್ನು ಪ್ರಕರಣದ ತನಿಖಾಧಿಕಾರಿಗೆ ನೀಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಯಾರಿಂದಲೂ ಒತ್ತಡ ಬಂದಿಲ್ಲ’ ಎಂದು ಅಪರಾಧ ಮತ್ತು ಕಾನೂನು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ಹೇಳಿದರು.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪ್ರಕರಣಕ್ಕೆ ಸಂಬಂಧಿಸಿ ಮಕ್ಕಳನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಅವರ ಪೋಷಕರನ್ನು ಸಹ ಸಂಪರ್ಕಿಸಿ, ಮಾಹಿತಿ ಸಂಗ್ರಹಿಸಲು ಮುಂದಾಗಿದ್ದೇವೆ. ಫೋಕ್ಸೊ ಕಾಯ್ದೆಯಡಿಯ ತನಿಖೆ ಮುಂದುವರಿದಿದೆ. ತನಿಖಾ ಹಂತದಲ್ಲಿ ಯಾವುದೇ ಮಾಹಿತಿ ನೀಡಲಾಗದು ಎಂದು ಹೇಳಿದರು.
ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚಿನ ಅದ್ದೂರಿತನ ಇರುತ್ತದೆ. ಆಚರಣೆಗೆ ಧಕ್ಕೆ ಬರಬಾರದೆಂದು ಕೆಲ ಜಿಲ್ಲೆಗಳಲ್ಲಿ ಪ್ರವಾಸ ಮಾಡುತ್ತಿದ್ದೇನೆ. ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಬಂದೋಬಸ್ಟ್‌ ನೀಡಲಾಗುತ್ತದೆ. ಕಿಡಿಗೇಡಿಗಳಿಗೆ ಈಗಾಗಲೇ ಎಚ್ಚರಿಕೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement