ಬೆಂಗಳೂರಿನ ಶಾಲಾ-ಕಾಲೇಜುಗಳಿಗೆ ಮಂಗಳವಾರ ರಜೆ ಘೋಷಣೆ

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರಿನಾದ್ಯಂತ ಶಾಲಾ ಕಾಲೇಜುಗಳಿಗೆ ಮಂಗಳವಾರ (ಆಗಸ್ಟ್‌ 30) ರಜೆ ಘೋಷಿಸಲಾಗಿದೆ. ವಾಹನ ಸಂಚಾರಕ್ಕೂ ತೊಂದರೆಯಾಗಿರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಬೆಂಗಳೂರು ನಗರ ಹಾಗೂ ಜಿಲ್ಲಾದ್ಯಂತ ಶಾಲಾ, ಕಾಲೇಜುಗಳಿಗೆ ಜಿಲ್ಲಾಧಿಕಾರಿ ಮಂಗಳವಾರ ರಜೆ ಘೋಷಿಸಿದ್ದಾರೆ. ಬೆಂಗಳೂರಲ್ಲಿ ಭಾರೀ ರಾಜ್ಯದಲ್ಲಿ ವರುಣನ ಅಬ್ಬರ ಜೋರಾಗಿದೆ. ಬೆಂಗಳೂರಿನ ರಸ್ತೆಗಳು ಕೆರೆಯಂತಾಗಿವೆ. ಹಲವು ಕಡೆ ಮನೆಗಳಿಗೆ ನೀರು ನುಗ್ಗಿದ್ದು ಜನ ಜೀವನ ಅಸ್ತವ್ಯಸ್ತವಾಗಿದೆ.ಮಳೆಯಿಂದ ಜನರು ರಸ್ತೆಯಲ್ಲಿ ನಡೆದಾಡುವುದಕ್ಕೂ ಕಷ್ಟಪಡುವಂತಾಗಿದೆ.

 

4 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ತದಡಿ ಬಂದರಿನಲ್ಲಿ ದುರಂತ: ಬೋಟ್ ಸ್ವಚ್ಛಗೊಳಿಸುವಾಗ ಉಸಿರುಗಟ್ಟಿ ಮೂವರು ಮೀನುಗಾರರು ಸಾವು

ನಿಮ್ಮ ಕಾಮೆಂಟ್ ಬರೆಯಿರಿ

advertisement