ಬೆಂಗಳೂರಿನ ಚಾಮರಾಜಪೇಟೆ ಮೈದಾನದಲ್ಲಿ ಯಥಾಸ್ಥಿತಿ ಕಾಪಾಡಲು ಸುಪ್ರೀಂಕೋರ್ಟ್‌ ಆದೇಶ : ಗಣೇಶೋತ್ಸವ ಆಚರಣೆಗೆ ಅವಕಾಶ ಇಲ್ಲ

posted in: ರಾಜ್ಯ | 0

ನವದೆಹಲಿ : ಬೆಂಗಳೂರಿನ ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವ ಆಚರಣೆ ಕುರಿತಾಗಿನ ವಿವಾದ ಬೆನ್ನಲ್ಲೇ, ಸುಪ್ರೀಂಕೋರ್ಟ್​ ಯಥಾಸ್ಥಿತಿಗೆ ಆದೇಶಿಸಿದೆ.
ಸುದೀರ್ಘ ಎರಡು ಗಂಟೆಗಳ ವಾದ ಪ್ರತಿವಾದನವನ್ನು ಆಲಿಸಿದ ತ್ರಿಸದಸ್ಯ ಪೀಠ, ಎರಡೂ ಬದಿಯ ಕಕ್ಷಿದಾರರಿಗೆ ಸದ್ಯ ಯಥಾಸ್ಥಿತಿ ಕಾಯ್ದುಕೊಳ್ಳಲು ಆದೇಶಿಸಿತು. ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಲಿಲ್ಲ.
ನ್ಯಾಯಮೂರ್ತಿಗಳಾದ ಇಂದಿರಾ ಬ್ಯಾನರ್ಜಿ, ಎಎಸ್ ಓಕಾ ಮತ್ತು ಎಂಎಂ ಸುಂದ್ರೇಶ್ ಅವರ ಪೀಠವು ಈ ವಿಷಯವನ್ನು ಅರ್ಹತೆಯ ಮೇಲೆ ನಿರ್ಧರಿಸಲು ಪ್ರಕರಣವನ್ನು ಹೈಕೋರ್ಟ್‌ನ ಏಕ-ಪೀಠಕ್ಕೆ ಹಿಂತಿರುಗಿಸಿತು. ಹಾಗೂ ಹೈಕೋರ್ಟ್‌ ಏಕಸದಸ್ಯ ಪೀಠದಲ್ಲಿ ವಿಚಾರಣೆ ಮುಂದುವರಿಯಲಿ. ಅಲ್ಲಿಯವರೆಗೆ ಯಥಾಸ್ಥಿತಿ ಕಾಪಾಡಿಕೊಳ್ಳುವಂತೆ ಆದೇಶಿಸಿತು.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ವಿಚಾರಣೆ ಆರಂಭದಲ್ಲಿ ಪ್ರಕರಣದ ವಿಚಾರಣೆ ನಡೆಸಿದ ದ್ವಿಸದಸ್ಯ ಪೀಠವು ಯಾವುದೇ ಯಥಾಸ್ಥಿತಿಗೆ ಆದೇಶ ನೀಡದೆ ಪ್ರಕರಣವನ್ನು 3 ನ್ಯಾಯಾಧೀಶರ ಪೀಠಕ್ಕೆ ವರ್ಗಾಯಿಸಿತು. ಪೀಠದ ಇಬ್ಬರು ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ಸುಧಾಂಶು ಧುಲಿಯಾ ಅವರ ಅಭಿಪ್ರಾಯದಲ್ಲಿ ಭಿನ್ನತೆ ಇದಕ್ಕೆ ಕಾರಣ ಇದನ್ನು ಸುಪ್ರೀಂಕೋರ್ಟಿನ ತ್ರಿಸದಸ್ಯ ಪೀಠಕ್ಕೆ ವರ್ಗಾಯಿಸಲಾಯಿತು.
ಇದು ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಯುಯು ಲಲಿತ್ ಅವರ ಮುಂದೆ ಮಧ್ಯಾಹ್ನ 3.45 ಕ್ಕೆ ತುರ್ತು ಪ್ರಸ್ತಾಪಕ್ಕೆ ಕಾರಣವಾಯಿತು. ನಂತರ ಸಿಜೆಐ ಅವರು ತಕ್ಷಣದ ಪ್ರಕರಣದ ವಿಚಾರಣೆಗೆ ಮೂವರು ನ್ಯಾಯಮೂರ್ತಿಗಳ ಪೀಠವನ್ನು ರಚಿಸಿದರು. ತ್ರಿಸದಸ್ಯ ಪೀಠದ ಮುಂದೆ ವಕ್ಫ್‌ ಬೋರ್ಡ್‌ ಪರವಾಗಿ ಹಿರಿಯ ವಕೀಲ ಕಪಿಲ್‌ ಸಿಬಲ್‌ ವಾದ ಮಂಡಿಸಿದರು. ಸರ್ಕಾರ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಿದರು. ನಂತರ ತ್ರಿ ಸದಸ್ಯ ಪೀಠ ಯಥಾಸ್ಥಿತಿ ಕಾಪಾಡುವಂತೆ ಸೂಚಿಸಿತು. ಹಾಗೂ ವಿಚಾರಣೆಗಾಗಿ ವಿಷಯವನ್ನು ಕರ್ನಾಟಕ ಹೈಕೋರ್ಟ್‌ನ ಏಕ ಸದಸ್ಯ ಪೀಠಕ್ಕೆ ಹಿಂತುರಿಗಿಸಿತು.
ಕರ್ನಾಟಕ ಹೈಕೋರ್ಟ್‌ನ ಏಕ ಸದಸ್ಯ ಪೀಠವು ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿ ನೀಡಿರಲಿಲ್ಲ. ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಆದೇಶ ನೀಡಿತ್ತು. ಆದರೆ, ಮರುದಿನವೇ ಹೈಕೋರ್ಟ್‌ ವಿಭಾಗೀಯ ಪೀಠವು ಯಾರು ಯಾವ ಆಚರಣೆಯನ್ನಾದರೂ ಮಾಡಬಹುದು ಎಂದು ತೀರ್ಪು ನೀಡಿತು. ಇದನ್ನು ವಕ್ಫ್​ ಬೋರ್ಡ್​ ಸುಪ್ರೀಂಕೋರ್ಟಿನಲ್ಲಿ ಪ್ರಶ್ನಿಸಿತ್ತು.

ಇಂದಿನ ಪ್ರಮುಖ ಸುದ್ದಿ :-   ದಸರಾ ಮೆರವಣಿಗೆ ವೇಳೆ ಪಾರಂಪರಿಕ ಮದರಸಾದಲ್ಲಿ ಪೂಜೆ, 9 ಜನರ ವಿರುದ್ಧ ಪ್ರಕರಣ ದಾಖಲು

 

 

 

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

/ 5. ಒಟ್ಟು ವೋಟುಗಳು

ನಿಮ್ಮ ಕಾಮೆಂಟ್ ಬರೆಯಿರಿ

advertisement