ಪ್ರಮುಖ ಯಾತ್ರಾ ಸ್ಥಳ ಪ್ರಯಾಗ್‌ರಾಜ್‌ ತ್ರಿವೇಣಿ ಸಂಗಮದಲ್ಲಿ ದೋಣಿಯಲ್ಲಿ ಮಾಂಸ ಬೇಯಿಸುತ್ತ ಹುಕ್ಕಾ ಸೇದುತ್ತ ಪಾರ್ಟಿ ಮಾಡಿದ ಗುಂಪು: ವೀಕ್ಷಿಸಿ

ಲಕ್ನೋ: ಉತ್ತರ ಪ್ರದೇಶದ ಪ್ರಮುಖ ಯಾತ್ರಾ ಸ್ಥಳ ಪ್ರಯಾಗ್‌ರಾಜ್‌ನ ಗಂಗಾ ನದಿಯ ಮಧ್ಯದಲ್ಲಿ ದೋಣಿಯಲ್ಲಿ ಕೋಳಿ ಮಾಂಸವನ್ನು ಬೇಯಿಸುತ್ತಿದ್ದು, ಪುರುಷರ ಗುಂಪೊಂದು ಹುಕ್ಕಾ ಪೈಪ್ ಅನ್ನು ಸೇದುತ್ತಿರುವ ದೃಶ್ಯದ ವೀಡಿಯೊ ಇದೀಗ ವ್ಯಾಪಕವಾಗಿ ಹರಿದಾಡುತ್ತಿದೆ.
ಈ ಘಟನೆಯು ಪ್ರಯಾಗರಾಜ್‌ನ ದಾರಗಂಜ್‌ನಲ್ಲಿರುವ ನಾಗವಾಸುಕಿ ಮಂದಿರದ ಸಮೀಪದಲ್ಲಿ ನಡೆದಿದೆ ಎಂದು ಹೇಳಲಾಗಿದೆ.

ಹಿಂದೂಗಳ ಪ್ರಮುಖ ಯಾತ್ರಾ ಕೇಂದ್ರವೆಂದು ನಂಬಲಾಗಿದೆ. ನಗರ ಠಾಣೆ ಪೊಲೀಸರು ತಂಡ ರಚಿಸಿ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ಅವರ ವಿರುದ್ಧವೂ ಪೊಲೀಸ್ ಪ್ರಕರಣ ದಾಖಲಿಸಲಾಗುವುದು ಎಂದು ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೋಟ್‌ನಲ್ಲಿ ಆನಂದಿಸುತ್ತಿರುವವರನ್ನು ಗುರುತಿಸಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ಎಸ್‌ಎಸ್‌ಪಿ ಶೈಲೇಶ್ ಕುಮಾರ್ ಪಾಂಡೆ ತಿಳಿಸಿದ್ದಾರೆ.

ಕಳೆದ ವಾರ ಗಂಗಾ ಮತ್ತು ಯಮುನಾ ನದಿಗಳಲ್ಲಿ ನೀರಿನ ಮಟ್ಟ ಹೆಚ್ಚಾದಾಗ ಪ್ರಯಾಗರಾಜ್‌ನ ಹಲವಾರು ತಗ್ಗು ಪ್ರದೇಶಗಳು ಮುಳುಗಡೆಯಾಗಿದ್ದವು. ರಾಜಾಪುರ, ಬಘರಾ, ದಾರಗಂಜ್ ಮತ್ತು ಇತರ ಹಲವಾರು ಸ್ಥಳಗಳಲ್ಲಿ ತಗ್ಗು ಪ್ರದೇಶದ ಕಾಲೋನಿಗಳಲ್ಲಿ ನೀರು ಸಂಗ್ರಹವಾಗಿದೆ.
ನಗರದಲ್ಲಿ ಪ್ರವಾಹದಂತಹ ಪರಿಸ್ಥಿತಿಯ ನಡುವೆ ಆಡಳಿತವು ಯಾವುದೇ ದೋಣಿ ವಿಹಾರಕ್ಕೆ ನಿರ್ಬಂಧಗಳನ್ನು ವಿಧಿಸಿದೆ

ಪ್ರಮುಖ ಸುದ್ದಿ :-   ನೀವು ಅಮಾಯಕರಲ್ಲ : ಬಾಬಾ ರಾಮದೇವ, ಆಚಾರ್ಯ ಬಾಲಕೃಷ್ಣಗೆ ಸುಪ್ರೀಂ ಕೋರ್ಟ್‌ ಮತ್ತೆ ತರಾಟೆ

3 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement