ಭಾರೀ ಮಳೆಗೆ ನದಿಗಳಾಗಿ ಮಾರ್ಪಟ್ಟ ಬೆಂಗಳೂರಿನ ರಸ್ತೆಗಳು | ವೀಕ್ಷಿಸಿ

ಬೆಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರಿನ ಕೆಲವೆಡೆ ಭಾರೀ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಹಲವೆಡೆ ಮರಗಳು ಧರೆಗುರುಳಿದೆ.ರಸ್ತೆಗಳು ನದಿಯಾಗಿ ಮಾರ್ಪಟ್ಟಿವೆ.
ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಜಲಾವೃತವಾಗಿರುವ ರಸ್ತೆಯಲ್ಲಿ ವಾಹನಗಳು ಸಿಲುಕಿಕೊಂಡಿದ್ದು, ಪಾದಚಾರಿಗಳು ನಡೆಯಲು ಪ್ರಯಾಸಪಡುತ್ತಿರುವುದನ್ನು ವೀಡಿಯೊ ತೋರಿಸುತ್ತದೆ. ಕೆಲವು ಪ್ರದೇಶಗಳಲ್ಲಿ ಸಿಕ್ಕಿಬಿದ್ದ ನಾಗರಿಕರನ್ನು ದೋಣಿಗಳ ಸಹಾಯದಿಂದ ಸ್ಥಳಾಂತರಿಸಲಾಯಿತು.

ಇಕೋಸ್ಪೇಸ್ ಟೆಕ್ ಪಾರ್ಕ್‌ನಲ್ಲಿ ಜಲಾವೃತಗೊಂಡ ರಸ್ತೆ ಮತ್ತು ಅದರ ಮೂಲಕ ಸಂಚರಿಸಲು ಜನರು ಹೆಣಗಾಡುತ್ತಿರುವ ವೀಡಿಯೊದೊಂದಿಗೆ ಬಳಕೆದಾರರು ಟ್ವಿಟರ್‌ನಲ್ಲಿ “ಮೂರು ಕಿಮೀಗಳನ್ನು ಕ್ರಮಿಸಲು ಮೂರು ಗಂಟೆಗಳನ್ನು ತೆಗೆದುಕೊಳ್ಳಬೇಕಾಯಿತು” ಎಂದು ಬರೆದಿದ್ದಾರೆ.

ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದೆ. ಸೋಮವಾರ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಮನಗರ ಸೇರಿದಂತೆ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದರು. ಸಂತ್ರಸ್ತರ ಸಮಸ್ಯೆಗಳನ್ನು ಆಲಿಸಿದ ಮುಖ್ಯಮಂತ್ರಿಗಳು ಪರಿಹಾರದ ಭರವಸೆ ನೀಡಿದ್ದಾರೆ.
ಜೂನ್ 1 ರಿಂದ, ಕರ್ನಾಟಕವು 820 ಮಿಮೀ ಮಳೆಯನ್ನು ಪಡೆದಿದೆ, ಇದು 27 ಜಿಲ್ಲೆಗಳು ಮತ್ತು 187 ಹಳ್ಳಿಗಳ ಮೇಲೆ ಪರಿಣಾಮ ಬೀರಿದೆ.

ಪ್ರಮುಖ ಸುದ್ದಿ :-   ಕರ್ನಾಟಕದ ಈ ಪ್ರದೇಶಗಳೂ ಸೇರಿ ದಕ್ಷಿಣ ಭಾರತದಲ್ಲಿ ಭಾರೀ ಮಳೆ ಮುನ್ಸೂಚನೆ

4 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement