ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ತಾಯಿ ನಿಧನ

ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ತಾಯಿ ಪಾವೊಲಾ ಮೈನೋ ಅವರು ಆಗಸ್ಟ್ 27, ಶನಿವಾರ ಇಟಲಿಯ ತಮ್ಮ ಮನೆಯಲ್ಲಿ ನಿಧನರಾದರು.
ಅಂತ್ಯಕ್ರಿಯೆಯು ಮಂಗಳವಾರ, ಆಗಸ್ಟ್ 30 ರಂದು ನಡೆಯಿತು. ಈ ಬಗ್ಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಟ್ವೀಟ್ ಮಾಡಿದ್ದಾರೆ.

“ಶ್ರೀಮತಿ ಸೋನಿಯಾ ಗಾಂಧಿಯವರ ತಾಯಿ, ಶ್ರೀಮತಿ ಪಾವೊಲಾ ಮೈನೋ ಅವರು 27ನೇ ಆಗಸ್ಟ್ 2022 ರಂದು ಶನಿವಾರ ಇಟಲಿಯಲ್ಲಿರುವ ಅವರ ಮನೆಯಲ್ಲಿ ನಿಧನರಾದರು. ನಿನ್ನೆ ಅಂತ್ಯಕ್ರಿಯೆ ನಡೆಯಿತು,” ಎಂದು ರಮೇಶ್ ಟ್ವಿಟರ್‌ನಲ್ಲಿ ತಿಳಿಸಿದ್ದಾರೆ.

ಸೋನಿಯಾ ಗಾಂಧಿ ಅವರ ತಾಯಿ 90ರ ವಯಸ್ಸಿನಲ್ಲಿದ್ದರು. ಕಾಂಗ್ರೆಸ್ ಮುಖ್ಯಸ್ಥರು ಆಗಸ್ಟ್ 23 ರಂದು ಅನಾರೋಗ್ಯದಿಂದ ಬಳಲುತ್ತಿರುವ ತಾಯಿಯನ್ನು ಭೇಟಿ ಮಾಡಲು ತೆರಳಿದ್ದರು. ಸೋನಿಯಾ ಗಾಂಧಿ, ಅವರ ಪುತ್ರ ರಾಹುಲ್ ಗಾಂಧಿ ಮತ್ತು ಪುತ್ರಿ ಪ್ರಿಯಾಂಕಾ ಗಾಂಧಿ ವಾದ್ರಾ ಈಗಾಗಲೇ ಇಟಲಿಯಲ್ಲಿದ್ದು, ಅವರ ಊರಿಗೆ ಭೇಟಿ ನೀಡಿದ್ದಾರೆ.

ಪ್ರಮುಖ ಸುದ್ದಿ :-   ವೀಡಿಯೊ..| ಗ್ರಾಮದ ಪದ್ಧತಿ ಉಲ್ಲಂಘಿಸಿ ಮದುವೆ ; ದಂಪತಿಯನ್ನು ನೊಗಕ್ಕೆ ಕಟ್ಟಿ, ಕೋಲಿನಿಂದ ಹೊಡೆದು ಹೊಲ ಉಳುಮೆ ಮಾಡಿಸಿದ ಗುಂಪು

2 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement