ತಡರಾತ್ರಿ ನಡೆದ ವಿಚಾರಣೆಯಲ್ಲಿ ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶ ಪೂಜೆಗೆ ಅನುಮತಿ ನೀಡಿದ್ದ ಆದೇಶ ಎತ್ತಿ ಹಿಡಿದ ಹೈಕೋರ್ಟ್

ಧಾರವಾಡ: ಗಣೇಶ ಚತುರ್ಥಿಯಂದು ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿಗಳನ್ನು ಇರಿಸಲು ಮತ್ತು ಸಾಂಸ್ಕೃತಿಕ ಚಟುವಟಿಕೆಗಳನ್ನು ನಡೆಸಲು ಕರ್ನಾಟಕ ಹೈಕೋರ್ಟ್ ತನ್ನ ಹಿಂದಿನ ಆದೇಶವನ್ನು ಪರಿಷ್ಕರಿಸಲು ನಿರಾಕರಿಸಿದೆ. ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಹೈಕೋರ್ಟ್‌ ಗ್ರೀನ್‌ ಸಿಗ್ನಲ್‌ ನೀಡಿದೆ. ಮೈದಾನದ ಜಮೀನು ವಿವಾದದಲ್ಲಿಲ್ಲ ಎಂದು ಹೈಕೋರ್ಟ್ ಹೇಳಿದೆ.
ಬೆಂಗಳೂರು ಬಳಿಯ ಈದ್ಗಾ ನಿವೇಶನಕ್ಕೆ ಸಂಬಂಧಿಸಿದ ಇದೇ ರೀತಿಯ ಮನವಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಯಥಾಸ್ಥಿತಿಗೆ ನಿರ್ದೇಶಿಸಿದ ನಂತರ ಹುಬ್ಬಳ್ಳಿ ಈದ್ಗಾ ಮೈದಾನದ ವಿಚಾರದಲ್ಲಿ ನೀಡಿದ್ದ ಹಿಂದಿನ ಆದೇಶವನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸಲಾಯಿತು.
ವಾದ-ಪ್ರತಿವಾದಗಳನ್ನು ಆಲಿಸಿದ ಹೈಕೋರ್ಟ್, ಹುಬ್ಬಳ್ಳಿಯ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ನಲ್ಲಿ ವಿವಾದದಲ್ಲಿರುವ ಬೆಂಗಳೂರಿನ ಈದ್ಗಾ ಮೈದಾನದ ಪ್ರಕರಣದ ವಾಸ್ತವಾಂಶಕ್ಕಿಂತ ಭಿನ್ನವಾಗಿದೆ ಎಂದು ಅಭಿಪ್ರಾಯಪಟ್ಟಿದೆ. ಅಂಜುಮಾನ್‌ ಸಂಸ್ಥೆ ಸಲ್ಲಿಸಿದ್ದ ಪುನರ್‌ ಪರಿಶೀಲನಾ ಅರ್ಜಿಯನ್ನು ಹೈಕೋರ್ಟ್‌ ಏಕಸದಸ್ಯ ಪೀಠ ವಜಾಗೊಳಿಸಿದೆ. ಇದೇ ಮೊದಲ ಬಾರಿಗೆ ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ನಡೆಯಲಿದೆ.

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಅದರಂತೆಯೇ ಹುಬ್ಬಳ್ಳಿಯ ಈದ್ಗಾ ಮೈದಾನಕ್ಕೂ ಅದನ್ನು ಪರಿಗಣಿಸಿ ತೀರ್ಪು ನೀಡಿ ಎಂದು ಅರ್ಜಿದಾರರು ಮತ್ತೆ ಹೈಕೋರ್ಟ್‌ಗೆ ಸಲ್ಲಿಸಿದ ಅರ್ಜಿ ವಿಚಾರಣೆಯನ್ನು ನ್ಯಾ.ಅಶೋಕ್ ಎಸ್ ಕಿಣಗಿ ಅವರ ಏಕಸದಸ್ಯ ಪೀಠದಲ್ಲಿ ರಾತ್ರಿ 10 ಗಂಟೆಗೆ ತುರ್ತು ವಿಚಾರಣೆ ನಡೆಸಿ ರಾತ್ರಿ 11:30ಕ್ಕೆ ಆದೇಶ ಪ್ರಕಟಿಸಿತು. ವಾದ ವಿವಾದ ಆಲಿಸಿ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಹೈಕೋರ್ಟ್ ಸಮ್ಮತಿ ನೀಡಿದೆ.
ಬೆಂಗಳೂರಿನ ಜಮೀನಿನ ಮಾಲೀಕತ್ವದ ಬಗ್ಗೆ ಸುಪ್ರೀಂ ಕೋರ್ಟ್‌ನಲ್ಲಿ ಗಂಭೀರ ಪ್ರಶ್ನೆಗಳನ್ನು ಎತ್ತಲಾಗಿದೆ.ಆದರೆ, ಹುಬ್ಬಳ್ಳಿಯಲ್ಲಿ ಜಮೀನಿನ ಮಾಲೀಕತ್ವದ ಬಗ್ಗೆ ಯಾವುದೇ ತಕರಾರು ಇಲ್ಲ ಎಂದು ಪೀಠವು ಗಮನಿಸಿದೆ.
ಈ ಹಿಂದಿನ ತೀರ್ಪುಗಳ ಪ್ರಕಾರ ಆಸ್ತಿಯು ಸರ್ಕಾರದ ಒಡೆತನದಲ್ಲಿದೆ ಮತ್ತು ಅರ್ಜಿದಾರರು ಆಸ್ತಿಯನ್ನು ಎರಡು ಸಂದರ್ಭಗಳಲ್ಲಿ ಬಳಸಲು ಗುತ್ತಿಗೆಗೆ ತೆಗೆದುಕೊಂಡಿದ್ದಾರೆ ಎಂಬುದು ಸ್ಪಷ್ಟವಾಗಿದೆ. ಈ ಆಸ್ತಿಯ ಮೇಲೆ ಸರ್ಕಾರಕ್ಕೆ ಹಕ್ಕಿದೆ” ಎಂದು ಹೈಕೋರ್ಟ್ ತನ್ನ ತಡ ರಾತ್ರಿ ಆದೇಶದಲ್ಲಿ ಹೇಳಿದೆ. , ಅಂಜುಮನ್‌ ಸಂಸ್ಥೆಯ ಅರ್ಜಿಯನ್ನು ವಜಾಗೊಳಿಸಿದೆ.

ಪ್ರಮುಖ ಸುದ್ದಿ :-   ವೀಡಿಯೊ..| ಕುಮಟಾ : ಅಘನಾಶಿನಿ ನದಿಗೆ ಅಡ್ಡವಾಗಿ ನಿರ್ಮಾಣವಾಗುತ್ತಿದ್ದ ಸೇತುವೆಯ ಸ್ಲ್ಯಾಬ್‌ ಕುಸಿತ

ಎರಡೂ ಪ್ರಕರಣಗಳೂ ಪ್ರತ್ಯೇಕ
ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆ ವಿಚಾರಕ್ಕೆ ಸಂಬಂಧಿಸಿ ಹೈಕೋರ್ಟ್ ಏಕಸದಸ್ಯ ಪೀಠದ ಮುಂದೆ ಅರ್ಜಿದಾರರ ಪರ ವಕೀಲರು ಸುಪ್ರೀಂಕೋರ್ಟ್​ ಆದೇಶ ಉಲ್ಲೇಖಿಸಿದ್ದಾರೆ. ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಯಥಾಸ್ಥಿತಿಗೆ ಆದೇಶಿಸಿದೆ. ಇದೇ ಆದೇಶವನ್ನು ಹುಬ್ಬಳ್ಳಿ ಈದ್ಗಾ ಕೇಸ್​ಗೂ ಅನ್ವಯಿಸಿ ಎಂದು ಮನವಿ ಮಾಡಿದ್ದಾರೆ. ರಾಜ್ಯ ಸರ್ಕಾರದ ಪರ ವಕೀಲ ಎಎಜಿ ಧ್ಯಾನ್ ಚಿನ್ನಪ್ಪ ಈ ಸಂಬಂಧ ಆಕ್ಷೇಪ ಸಲ್ಲಿಸಿದ್ದು ಚಾಮರಾಜಪೇಟೆ ಮೈದಾನಕ್ಕೆ ಸಂಬಂಧಿಸಿದಂತೆ ಮಾಲೀಕತ್ವ ವಿವಾದವಿದೆ. ಆದರೆ ಹುಬ್ಬಳ್ಳಿ ಈದ್ಗಾ ಮೈದಾನದ ಮಾಲೀಕತ್ವದ ವಿವಾದವಿಲ್ಲ. ಹೀಗಾಗಿ ಎರಡೂ ಪ್ರಕರಣಗಳೂ ಪ್ರತ್ಯೇಕವಾಗಿವೆ ಎಂದು ವಾದಿಸಿದರು.
ಈ ಹಿಂದೆಯೇ ವಿಚಾರಣಾ ನ್ಯಾಯಾಲಯ ತೀರ್ಪು ನೀಡಿದೆ. ಅಂಜುಮಾನ್ ಇಸ್ಲಾಂ ವಿರುದ್ಧ ಆದೇಶ ನೀಡಿದೆ. ಯಾವುದೇ ಕಟ್ಟಡ ಕಟ್ಟದಂತೆ ನಿರ್ಬಂಧ ವಿಧಿಸಿದೆ. ಜಾತ್ರೆ ಮತ್ತು ಇನ್ನಿತರೆ ಉದ್ದೇಶಗಳಿಗೆ ಬಳಸಬಹುದೆಂದು ಹೇಳಿದೆ. ಅಂಜುಮಾನ್ ಇಸ್ಲಾಂ ಸಲ್ಲಿಸಿದ್ದ ಮೇಲ್ಮನವಿಯೂ ವಜಾಗೊಂಡಿದೆ. ಮೈದಾನವನ್ನು ಅಂಜುಮಾನ್ ಇಸ್ಲಾಂಗೆ ಲೀಸ್​ಗೆ ನೀಡಿಲ್ಲ. ವರ್ಷದಲ್ಲಿ ಕೇವಲ 2 ಬಾರಿ ಮಾತ್ರ ನಮಾಜ್ ಮಾಡಲು ಲೈಸನ್ಸ್ ನೀಡಲಾಗಿದೆ. ಇದನ್ನು ಹೊರತುಪಡಿಸಿ ಅಂಜುಮಾನ್ ಸಂಸ್ಥೆಗೆ ಸ್ಥಳದ ಮೇಲೆ ಯಾವುದೇ ಹಕ್ಕಿಲ್ಲ. ಹೀಗಾಗಿ ಭೂಮಿಯನ್ನು ಬೇಕಾದಂತೆ ಬಳಕೆ ಮಾಡಲು ಹುಬ್ಬಳ್ಳಿ-ಧಾರವಾಡ ಮಹಾನಗರನಗರಪಾಲಿಕೆಗೆ ಎಲ್ಲಾ ಅಧಿಕಾರವಿದೆ ಎಂದರು.

ಪ್ರಮುಖ ಸುದ್ದಿ :-   ಕೆಎಸ್​ಆರ್​ಟಿಸಿ ಬಸ್​ನಲ್ಲಿ ಅಜ್ಜಿ ಮೊಮ್ಮಗಳಿಗೆ ಉಚಿತ ಟಿಕೆಟ್ : ಆದ್ರೆ ನಾಲ್ಕು ಪಕ್ಷಿಗಳಿಗೆ 444 ರೂ. ಟಿಕೆಟ್...!

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement