ಬೆಳಗಾವಿ: ನಕಲಿ ನೋಟು ಚಲಾವಣೆಗೆ ಯತ್ನ, ಮೂವರ ಬಂಧನ

posted in: ರಾಜ್ಯ | 0

ಬೆಳಗಾವಿ: ಜಿಲ್ಲೆಯ ಘಟಪ್ರಭಾದಲ್ಲಿ ಮಂಗಳವಾರ ರಾತ್ರಿ, ಬಾರ್ ನಲ್ಲಿ ನಕಲಿ ನೋಟು ಚಲಾಯಿಸಲು ಯತ್ನಿಸಿದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ₹500 ಮುಖಬೆಲೆಯ 473 ನಕಲಿ ನೋಟುಗಳನ್ನೂ ವಶಪಡಿಸಿಕೊಳ್ಳಲಾಗಿದೆ.
ಬಾರಿನಲ್ಲಿ ಕಂಠ ಪೂರ್ತಿ ಕುಡಿದು ಪಾರ್ಟಿ ಮಾಡಿದ ಮೇಲೆ, ಮೂವರೂ ಬಾರಿನ ಮಂದ ಬೆಳಕಿನ ಲಾಭ ಪಡೆದು ನಕಲಿ ನೋಟುಗಳನ್ನು ನೀಡಿ ಬಾರ್ ಮಾಲೀಕರನ್ನು ಯಾಮಾರಿಸಲು ಯತ್ನಿಸಿದ್ದರು ಎಂದು ಹೇಳಲಾಗಿದೆ.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ನೋಟು ನೋಡಿದ ನಂತರ ಅನುಮಾನ ಬಂದ ಬಾರಿನ ವ್ಯಕ್ತಿ, ಅದನ್ನು ಲೈಟಿನ ಬೆಳಕಿಗೆ ಹಿಡಿದು ಪರಿಶೀಲಿಸಿದ್ದಾರೆ. ಅವರಿಗೆ ಈ ನೋಟುಗಳು ನಕಲಿ ಎಂಬ ಬಗ್ಗೆ ಅನುಮಾನ ದೃಢವಾಗಿದೆ. ಚಿಕ್ಕ ಮಕ್ಕಳು ಆಟವಾಡುವಾಗ ಬಳಸುವ ಹಣದ ಕಂತುಗಳನ್ನು ನೀಡಲು ಹೋಗಿದ್ದಾರೆ ಎಂದು ಗೊತ್ತಾಗಿದೆ. ನಂತರ ತಕ್ಷಣ ಪೊಲೀಸರಿಗೆ ಫೋನ್ ಮಾಡಿದ್ದಾರೆ. ಪೊಲೀಸರು ಬಂದು ಆರೋಪಿಗಳನ್ನು ಬಂಧಿಸಿ ನಕಲಿ ನೋಟುಗಳನ್ನು ವಶಪಡಿಸಿಕೊಂಡರು.
ಈ ಎಲ್ಲ ನೋಟುಗಳೂ ಚಿಲ್ಡ್ರನ್ ಬ್ಯಾಂಕ್ ಆಫ್ ಇಂಡಿಯಾದಿಂದ ಪ್ರಿಂಟ್ ಮಾಡಿದವು ಎಂದು ಪೊಲೀಸರು ತಿಳಿಸಿದ್ದಾರೆ.

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

ಓದಿರಿ :-   ಅಕ್ಟೋಬರ್‌ 4ರಂದು ಸೋನಿಯಾ ಗಾಂಧಿ ಕರ್ನಾಟಕಕ್ಕೆ ಆಗಮನ

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

3.3 / 5. ಒಟ್ಟು ವೋಟುಗಳು 3

ನಿಮ್ಮ ಕಾಮೆಂಟ್ ಬರೆಯಿರಿ

advertisement