ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಕಾರು ಅಪಘಾತ

posted in: ರಾಜ್ಯ | 0

ಬೆಳಗಾವಿ : ಮಾಜಿ ಉಪಮುಖ್ಯಮಂತ್ರಿ ಹಾಗೂ ವಿಧಾನಪರಿಷತ್ ಸದಸ್ಯ ಲಕ್ಷ್ಮಣ ಸವದಿ ಅವರ ಕಾರು ಬುಧವಾರ ಬೆಳಗಾವಿ ಜಿಲ್ಲೆಯ ಹಾರೂಗೇರಿ ಬಳಿ ಪಲ್ಟಿಯಾಗಿದ್ದು, ವಿಧಾನ ಪರಿಷತ್‌ ಸದಸ್ಯ ಲಕ್ಷ್ಮಣ ಸವದಿ ಅಪಾಯದಿಂದ ಪಾರಾಗಿದ್ದಾರೆ.
ಲಕ್ಷ್ಮಣ ಸವದಿ ಅವರಿದ್ದ ಕಾರು ರಾಯಬಾಗ ತಾಲೂಕು ಹಾರೂಗೇರಿ ಮತ್ತು ಹಿಡ್ಕಲ್ ಬಳಿ ಅಪಘಾತಕ್ಕೀಡಾಗಿದೆ.ಸವದಿ ಅವರು ಅಥಣಿಯಿಂದ ಬೆಳಗಾವಿಗೆ ತೆರಳುತ್ತಿದ್ದರು ಎಂದು ಹೇಳಲಾಗಿದೆ. ಕಾರಿಗೆ ಅಡ್ಡವಾಗಿ ಬಂದ ಬೈಕಿಗೆ ಕಾರು ಡಿಕ್ಕಿಯಾಗುವುದನ್ನು ತಪ್ಪಿಸಲು ಹೋದಾಗ ಈ ಅವಘಡ ಸಂಭವಿಸಿದೆ.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಚಾಲಕನ ನಿಯಂತ್ರಣ ತಪ್ಪಿದ ಸ ಕಾರು ಘಟಪ್ರಭಾ ಎಡದಂಡೆ ಕಾಲುವೆಗೆ ಪಲ್ಟಿಯಾಗಿದೆ. ಸವದಿಯರಿಗೆ ಚಿಕ್ಕಪುಟ್ಟ ಗಾಯಗಳಾಗಿವೆ.
ಜತ್-ಜಾಂಬೋಟಿ ರಾಜ್ಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ಕಾರ್ ಚಾಲಕ ಹಾಗೂ ಪಕ್ಕದಲ್ಲಿ ಕುಳಿತಿದ್ದ ಲಕ್ಷ್ಮಣ ಸವದಿ ಅವರ ತಲೆ, ಕೈಗಳಗೆ ಸಣ್ಣಪುಟ್ಟ ಗಾಯಗಳಾಗಿವೆ. ಹಿಂಬದಿ ಸೀಟಿನಲ್ಲಿದ್ದ ಗನ್ ಮ್ಯಾನ್ ಹಾಗೂ ಇನ್ನೊಬ್ಬರೂ ಬಚಾವಾಗಿದ್ದಾರೆ.ಅಪಘಾತವಾದ ತಕ್ಷಣ ಕಾರಿನ ಏರ್ ಬ್ಯಾಗ್ ತೆರೆದುಕೊಂಡಿದ್ದರಿಂದ ಸಂಭವನೀಯ ಅಪಾಯ ತಪ್ಪಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಗಾಯಗೊಂಡಿರುವ ಲಕ್ಷ್ಮಣ ಸವದಿ ಅವರನ್ನು ರಾಯಬಾಗ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಣ್ಣಪುಟ್ಟ ಗಾಯದೊಂದಿಗೆ ಸವದಿ ಅವರು ಚೇತರಿಸಿಕೊಳ್ಳುತ್ತಿದ್ದು ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಓದಿರಿ :-   ಅನೇಕ ಗ್ರಾಪಂಗಳಿಗೆ ಚುನಾವಣೆ ಘೋಷಣೆ: ಅಕ್ಟೋಬರ್‌ 28ರಂದು ಮತದಾನ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

3 / 5. ಒಟ್ಟು ವೋಟುಗಳು 2

ನಿಮ್ಮ ಕಾಮೆಂಟ್ ಬರೆಯಿರಿ

advertisement