ಮಣಿಪುರದ ಬಿಜೆಪಿ ನೇತೃತ್ವದ ಸರ್ಕಾರಕ್ಕೆ ಜೆಡಿಯು ಬೆಂಬಲ ಹಿಂತೆಗೆದುಕೊಳ್ಳಲಿರುವ ನಿತೀಶಕುಮಾರ್

ಗುವಾಹತಿ: ಮಣಿಪುರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರಕ್ಕೆ ನಿತೀಶ್ ಕುಮಾರ್ ಅವರ ಜನತಾ ದಳ (ಯುನೈಟೆಡ್) ಶೀಘ್ರದಲ್ಲೇ ಬೆಂಬಲವನ್ನು ಹಿಂಪಡೆಯಲಿದೆ ಎಂದು ಮೂಲಗಳು ತಿಳಿಸಿವೆ. ಇದರಿಂದ ಬಿರೇನ್ ಸಿಂಗ್ ಸರ್ಕಾರಕ್ಕೆ ಅಪಾಯವಾಗುವ ಸಾಧ್ಯತೆ ಇಲ್ಲ.
ಪ್ರಸ್ತುತ 60 ಸ್ಥಾನಗಳ ವಿಧಾನಸಭೆಯಲ್ಲಿ ಬಿಜೆಪಿ ನೇತೃತ್ವದ ಸಮ್ಮಿಶ್ರಕ್ಕೆ 55 ಶಾಸಕರು ಬೆಂಬಲ ನೀಡಿದ್ದಾರೆ. ಇದರಲ್ಲಿ ಏಳು ಜೆಡಿಯು ಸದಸ್ಯರು ಸೇರಿದ್ದಾರೆ. ಪಕ್ಷವು ಬೆಂಬಲವನ್ನು ಹಿಂತೆಗೆದುಕೊಂಡರೆ ಅದು ಆಡಳಿತದ ಒಕ್ಕೂಟದ ಸಂಖ್ಯೆಯನ್ನು 48 ಕ್ಕೆ ತರುತ್ತದೆ . ಆದರೆ ಬಹುಮತದ 31 ಇದ್ದರೆ ಸಾಕು.

ನಿತೀಶಕುಮಾರ್ ಬಿಜೆಪಿಯೊಂದಿಗಿನ ಮೈತ್ರಿಯನ್ನು ಕೊನೆಗೊಳಿಸಿದ್ದರೂ ಮತ್ತು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದಿಂದ ಹೊರನಡೆದಿದ್ದರೂ ಸಹ ಜೆಡಿಯು ಮಣಿಪುರದ ಬಿರೇನ್ ಸಿಂಗ್ ಸರ್ಕಾರಕ್ಕೆ ಹೊರಗಿನಿಂದ ಬೆಂಬಲ ನೀಡುತ್ತಿದೆ.
ಸೆಪ್ಟೆಂಬರ್ 3-4 ರಂದು ಪಾಟ್ನಾದಲ್ಲಿ ನಡೆಯಲಿರುವ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಜೆಡಿಯು ರಾಷ್ಟ್ರೀಯ ನಾಯಕರೊಂದಿಗೆ ಪಕ್ಷದ ಮಣಿಪುರ ಘಟಕದ ನಿರ್ಣಾಯಕ ಸಭೆಯಲ್ಲಿ ಈ ಬಗ್ಗೆ ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳಲಾಗುತ್ತದೆ ಎನ್ನಲಾಗಿದೆ.

ಈ ವರ್ಷದ ಆರಂಭದಲ್ಲಿ ನಡೆದ ಮಣಿಪುರ ರಾಜ್ಯ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಯು ಮೈತ್ರಿ ಮಾಡಿಕೊಂಡಿರಲಿಲ್ಲ. ಚುನಾವಣೆಯ ನಂತರ, ಏಳು ಜೆಡಿಯು ಶಾಸಕರು ಬಿರೇನ್ ಸಿಂಗ್ ಸರ್ಕಾರಕ್ಕೆ ಬೆಂಬಲವನ್ನು ನೀಡಿದರು, ಏಕೆಂದರೆ ಪಕ್ಷವು ಎನ್‌ಡಿಎ ಭಾಗವಾಗಿತ್ತು. ಜೆಡಿಯುನ ಮಣಿಪುರ ಘಟಕವು ಆಗಸ್ಟ್ 10 ರಂದು ನಡೆದ ಕೊನೆಯ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿದೆ ಎಂದು ಮೂಲಗಳು ತಿಳಿಸಿವೆ.
ನಿತೀಶ ಕುಮಾರ್ ಈ ತಿಂಗಳ ಆರಂಭದಲ್ಲಿ ಬಿಜೆಪಿಯೊಂದಿಗಿನ ಮೈತ್ರಿಯನ್ನು ಕೊನೆಗೊಳಿಸಿದರು. ಆಗಸ್ಟ್ 10 ರಂದು, ತೇಜಸ್ವಿ ಯಾದವ್ ಅವರ ರಾಷ್ಟ್ರೀಯ ಜನತಾ ದಳ, ಕಾಂಗ್ರೆಸ್ ಮತ್ತು ಬಹು ಸಣ್ಣ ಪಕ್ಷಗಳೊಂದಿಗೆ ಹೊಸ ಮಹಾಮೈತ್ರಿಕೂಟದ ಮುಖ್ಯಸ್ಥರಾಗಿ ಅವರು ಎಂಟನೇ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.

ಪ್ರಮುಖ ಸುದ್ದಿ :-   ಲೋಕಸಭೆ ಚುನಾವಣೆ 2ನೇ ಹಂತದ ಮತದಾನ : ಶ್ರೀಮಂತ ಅಭ್ಯರ್ಥಿ ₹ 622 ಕೋಟಿ ಒಡೆಯ, ಅತ್ಯಂತ ಬಡ ಅಭ್ಯರ್ಥಿ ಬಳಿ ಇರುವುದು ಕೇವಲ...

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement