ಹೈಕೋರ್ಟ್‌ ಅಸ್ತು ; ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ಹುಬ್ಬಳ್ಳಿ: ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಹೈಕೋರ್ಟ್​ ಅನುಮತಿಯಿಂದ ಖುಷಿಯಾಗಿರುವ ಹಿಂದು ಸಂಘಟನೆಗಳು ಗಣೇಶೋತ್ಸವದ ಅಂಗವಾಗಿ ಇಲ್ಲಿನ ಕಿತ್ತೂರು ರಾಣಿ ಚನ್ನಮ್ಮ ವೃತ್ತದ ಬಳಿಯ ಈದ್ಗಾ ಮೈದಾನದಲ್ಲಿ ಬುಧವಾರ ಬೆಳಿಗ್ಗೆ ಗಣೇಶ ಮೂರ್ತಿಯ ಪ್ರತಿಷ್ಠಾಪನೆ ಮಾಡಿದರು. ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಕೂಡ್ರಿಸಿ ಹರ್ಷೋದ್ಘಾರ ಮಾಡಿದ್ದಾರೆ.
ಈದ್ಗಾ ಮೈದಾನದಲ್ಲಿ ಸಿಂಹಾಸನಾರೂಢ ಗಣೇಶನ ಮೂರ್ತಿಯನ್ನು ಹಿಂದು ಸಂಘಟನೆಗಳು ಇಂದು ಪ್ರತಿಷ್ಠಾಪಿಸಿವೆ. ಇಂದು, ಬುಧವಾರ ಬೆಳಗ್ಗೆ 7 ಗಂಟೆಗೆ ಸಾಂಕೇತಿವಾಗಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿ ಪೂಜೆ ನೆರವೇರಿಸಿದ್ದಾರೆ.

ಈದ್ಗಾ ಮೈದಾನದಲ್ಲಿ ಗಣೇಶ ದರ್ಶನದ ಬಳಿಕ ಮಾತನಾಡಿದ ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್​ ಮುತಾಲಿಕ್, ನಮ್ಮ ಹೋರಾಟಕ್ಕೆ ನ್ಯಾಯ ಸಿಕ್ಕಿದೆ. ನಿನ್ನೆ ರಾತ್ರಿ ಆನಂದದ ಸಂಗತಿ ಸಿಕ್ಕಿತು. ನ್ಯಾಯಾಲಯ ಮೂಲಕ ಸಿಹಿ ಸಂಗತಿ ದೊರಕಿತು ಎಂದರು.
ಈಗಾಗಲೇ ಪ್ರತಿಷ್ಠಾಪನೆ ಆಗಿದೆ. ಈಗಾಗಲೇ ಗಣೇಶ ಪೂಜೆ ಆಗಿದೆ. ಯಾವ ಶಕ್ತಿಯೂ ಇದನ್ನು ತಡೆಯೋಕೆ ಸಾಧ್ಯವಿಲ್ಲ ಎಂದು ಹೇಳಿದರು

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement