ಕಾಂಗ್ರೆಸ್ ಪಕ್ಷಕ್ಕೆ ಹಿಂದುಳಿದ ವರ್ಗಗಳ ಅಧ್ಯಕ್ಷ ಎಂ.ಡಿ ಲಕ್ಷ್ಮೀನಾರಾಯಣ ರಾಜೀನಾಮೆ

ತುಮಕೂರು: ರಾಷ್ಟ್ರೀಯ ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿ ಹೊರ ನಡೆಯುತ್ತಿದ್ದು, ಇದರ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್‌ನಲ್ಲಿಯೂ ಇಂಥದ್ದೇ ಬೆಳವಣಿಗೆ ನಡೆದಿದೆ. ಪಕ್ಷದ ಹಿಂದುಳಿದ ವರ್ಗಗಳ ಅಧ್ಯಕ್ಷ ಎಂ.ಡಿ ಲಕ್ಷ್ಮೀನಾರಾಯಣ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದಾರೆ.
ತುಮಕೂರಿನ ತುರುವೇಕೆರೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಕಾಂಗ್ರೆಸ್ ಪಕ್ಷಕ್ಕೆ ಹಾಗೂ ಹಿಂದುಳಿದ ವರ್ಗಗಳ ಅಧ್ಯಕ್ಷ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಪ್ರಕಟಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ಇತ್ತೀಚಿನ ನಡವಳಿಕೆಯಿಂದ ನನಗೆ ಬೇಸರವಾಗಿದೆ. ಈ ಕಾರಣದಿಂದಲೇ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ನನ್ನ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ಕಳುಹಿಸಿದ್ದೇನೆ ಎಂದು ಹೇಳಿದ್ದಾರೆ.

3 / 5. 2

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಎಸ್‌ಐಆರ್‌ : ಕರ್ನಾಟಕದ ಅಂತಿಮ ಮತದಾರರ ಪಟ್ಟಿ ಪ್ರಕಟ ; 99 ಲಕ್ಷಕ್ಕೂ ಹೆಚ್ಚು ಹೆಸರು ಡಿಲೀಟ್

ನಿಮ್ಮ ಕಾಮೆಂಟ್ ಬರೆಯಿರಿ

advertisement