ಚಿತ್ರದುರ್ಗ ಜಿಲ್ಲಾಸ್ಪತ್ರೆ ಬಳಿ ಮೈಮೇಲೆ ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಮುರುಘಾ ಶರಣರ ಶಿಷ್ಯ

ಚಿತ್ರದುರ್ಗ: ಅಪ್ರಾಪ್ತ ವಿದ್ಯಾರ್ಥನಿಯರಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಮೇಲೆ ಬಂಧನಕ್ಕೊಳಗಾದ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಶಿವಾಚಾರ್ಯ ಶರಣರನ್ನು ನಾಲ್ಕು ದಿನ ಪೊಲೀಸ್‌ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ನೀಡಿದೆ. ನಂತರ ಬಳಿಕ ಶ್ರೀಗಳನ್ನು ವೈದ್ಯಕೀಯ ತಪಾಸಣೆಗೆಂದು ಜಿಲ್ಲಾಸ್ಪತ್ರೆಗೆ ಕರೆತಂದು ಬೇರೆಡೆ ಕೊರೆಯ್ಯಲು ಪೊಲೀಸರು ಸಿದ್ಧತೆ ನಡೆಸುತ್ತಿದ್ದಾಗ ಶಿಷ್ಯರೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.
ಮುರುಘಾ ಶರಣರ ಶಿಷ್ಯರಾದ ತಿಪ್ಪೇರುದ್ರಸ್ವಾಮಿ ಎಂಬವರು ಶರಣರಿಗೆ ಅನ್ಯಾಯವಾಗಿದೆ ಎಂದು ಕೂಗುತ್ತ ಮೈಮೇಲೆ ಪೆಟ್ರೋಲ್‌ ಸುರಿದುಕೊಂಡು ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಮಾಡಿಕೊಳ್ಳಲು ಯತ್ನಿಸಿದ್ದಾರೆ. ಆತ್ಮಹತ್ಯೆಗೆ ಯತ್ನಿಸಿದ ತಿಪ್ಪೆರುದ್ರಸ್ವಾಮಿ ಅವರನ್ನು ತಕ್ಷಣವೇ ತಡೆದ ಪೊಲೀಸರು ತಡೆದು ಅವರನ್ನು ಕರೆದುಕೊಂಡು ಹೋಗಿದ್ದಾರೆ. ಇದರಿಂದ ಜಿಲ್ಲಾಸ್ಪತ್ರೆಯಲ್ಲಿ ಕೆಲಕಾಲ ಆತಂಕದ ವಾತಾವರಣ ಉಂಟಾಯಿತು.ಚಿತ್ರದುರ್ಗ ಜಿಲ್ಲಾಸ್ಪತ್ರೆ ಮುಂದೆ ಶ್ರೀಗಳ ಭಕ್ತರ ಗುಂಪು ಸೇರಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಎಚ್ಚರಿಕೆ ವಹಿಸಿದ್ದಾರೆ.

ತಿಪ್ಪೇರುದ್ರಸ್ವಾಮಿ ಕಳೆದ ವರ್ಷ ಯೋಗವನ ಬೆಟ್ಟಕ್ಕೆ ಸಚಿವ‌ ಶ್ರೀರಾಮುಲು ಸಹಾಯ ಮಾಡುತ್ತಿಲ್ಲ ಆರೋಪಿಸಿ ಬಿಜೆಪಿ ಕಚೇರಿ ಮುಂದೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಗೆ ಯತ್ನಿಸಿದ್ದರು ಎಂಬುದು ಸ್ಮರಣಾರ್ಹ.
ಮುರುಘಾ ಮಠದಲ್ಲಿ ಮೌನ
ಮುರುಘಾ ಶರಣರ ಬಂಧನವಾಗಿ ಅವರನ್ನು ಪೊಲೀಸ್‌ ಕಸ್ಟಡಿಗೆ ನೀಡಿದ ನಂತರ ಮುರುಘಾ ಮಠದಲ್ಲಿ ನೀರವ ಮೌನ ಆವರಿಸಿದೆ. ಜನರು ಓಡಾಡುತ್ತಿದ್ದ ಮಠದ ಆವರಣ ಬಿಕೋ ಎನ್ನುತ್ತಿದೆ. ಮಠದ ನಾಲ್ಕು ದಿಕ್ಕುಗಳಲ್ಲಿ ಪೊಲೀಸ್ ಭದ್ರತೆ ಒದಗಿಸಲಾಗಿದ್ದು, ಭಕ್ತಾದಿಗಳು ಆಸ್ಪತ್ರೆಯ ಬಳಿ ಜಮಾಯಿಸುತ್ತಿದ್ದಾರೆ.

ಪ್ರಮುಖ ಸುದ್ದಿ :-   ಜೈ ಶ್ರೀರಾಮ ಘೋಷಣೆ ಕೂಗಿದ್ದಕ್ಕೆ ಹಲ್ಲೆ ಪ್ರಕರಣ : ನಾಲ್ವರು ಆರೋಪಿಗಳ ಬಂಧನ

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement