ಲಂಡನ್ನಿನ ವರ್ಲ್ಡ್‌ ಬುಕ್ ಆಫ್ ರೆಕಾರ್ಡ್‌ಗೆ ಬಸವರಾಜ ಹೊರಟ್ಟಿ ಸೇರ್ಪಡೆ

posted in: ರಾಜ್ಯ | 0

ಹುಬ್ಬಳ್ಳಿ: ವಿಧಾನಪರಿಷತ್ತಿಗೆ ಸತತ 8 ಬಾರಿ ಆಯ್ಕೆಯಾಗುವ ಮೂಲಕ ಐತಿಹಾಸಿಕ ದಾಖಲೆ ಮಾಡಿದ ಮಾಜಿ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ಲಂಡನ್ನಿನ ವರ್ಲ್ಡ್‌ ಬುಕ್ ಆಫ್ ರೆಕಾರ್ಡ್‌ ಸಂಸ್ಥೆಯವರು ದಾಖಲೆಯ ದೃಢೀಕರಣ ಪ್ರಮಾಣಪತ್ರ ನೀಡಿದ್ದಾರೆ ಎಂದು ಡಾ.ಬಸವರಾಜ ಧಾರವಾಡ ತಿಳಿಸಿದ್ದಾರೆ.
1980ರಿಂದ ವಿಧಾನಪರಿಷತ್ತಿಗೆ ಒಂದೇ ಕ್ಷೇತ್ರದಿಂದ ಸತತ 8 ಬಾರಿ ಆಯ್ಕೆಯಾಗುವ ಮೂಲಕ ಬಸವರಾಜ ಹೊರಟ್ಟಿ ದಾಖಲೆ ನಿರ್ಮಿಸಿದ್ದಾರೆ. ಸಾಮಾನ್ಯ ಶಿಕ್ಷಕರಾದ ಹೊರಟ್ಟಿಯವರು ಶಿಕ್ಷಣ ಸಚಿವರಾಗಿ, ವಿವಿಧ ಖಾತೆಗಳ ಸಚಿವರಾಗಿ ಎರಡು ಬಾರಿ ಸಭಾಪತಿಯಾಗಿ ಸೇವೆ ಸಲ್ಲಿಸಿದ್ದಾರೆ.
ಹೊರಟ್ಟಿಯವರು ಸಲ್ಲಿಸಿದ ಮಾನವೀಯ ಸೇವೆಗಾಗಿ ಅವರ ವ್ಯಕ್ತಿತ್ವದ ಇತರೆ ಮಜಲುಗಳನ್ನು, ಸಾಧನೆಗಳನ್ನು ಹಾಗೂ ಮೇಲ್ಮನೆಗೆ ಸತತ 8 ಬಾರಿ ಆಯ್ಕೆಯಾಗುವ ಮೂಲಕ ಶಿಕ್ಷಕರ ಮತ್ತು ಹೊರಟ್ಟಿಯವರ ಅವಿನಾಭಾವ ಸಂಬಂಧದ ಕುರಿತು ಅಧ್ಯಯನ ಮಾಡಿ ಒಬ್ಬ ಮೇರು ಸಾಧಕ ಎಂದು ಲಂಡನ್ನಿನ ವರ್ಲ್ಡ್‌ ಬುಕ್ ಆಫ್ ರೆಕಾರ್ಡ್‌ ಸಂಸ್ಥೆಯವರು 29-08-2022 ರಂದು ದೃಢೀಕರಣ ಪ್ರಮಾಣ ಪತ್ರ ನೀಡಿ ಗೌರವಿಸಿದ್ದಾರೆ. ಈ ದಾಖಲೆ ಇಡೀ ಶಿಕ್ಷಕ ಸಮುದಾಯಕ್ಕೆ ಸಲ್ಲುತ್ತದೆ ಎಂದು ಬಸವರಾಜ ಹೊರಟ್ಟಿ ಹೇಳಿದ್ದಾರೆ.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಓದಿರಿ :-   ವಿದ್ಯುತ್ ದರ ಏರಿಕೆ: ಹಿಂಪಡೆಯಲು ರಾಜ್ಯ ಸರ್ಕಾರದ ಚಿಂತನೆ...?

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

5 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ

advertisement