ಟ್ವಿಟರ್ ದೇಶದಲ್ಲಿ ಬಿಸಿನೆಸ್‌ ಮಾಡಬಹುದು, ಆದರೆ ಈ ದೇಶದ ಕಾನೂನು ಪಾಲಿಸಬೇಕು: ಕರ್ನಾಟಕ ಹೈಕೋರ್ಟ್‌ಗೆ ತಿಳಿಸಿದ ಕೇಂದ್ರ ಸರ್ಕಾರ

ಬೆಂಗಳೂರು: ಕೇಂದ್ರದ ಎಲೆಕ್ಟ್ರಾನಿಕ್ಸ್‌ ಮತ್ತು ಮಾಹಿತಿ ತಂತ್ರಜ್ಞಾನ ಇಲಾಖೆಯು ಹೊರಡಿಸಿರುವ ಟ್ವಿಟರ್‌ ಖಾತೆಗಳ ನಿರ್ಬಂಧ ಪ್ರಶ್ನಿಸಿ ಟ್ವಿಟರ್‌ ಸಲ್ಲಿಸಿರುವ ಅರ್ಜಿಯನ್ನು ವಿರೋಧಿಸಿ ಕೇಂದ್ರ ಸರ್ಕಾರವು ಕರ್ನಾಟಕ ಹೈಕೋರ್ಟ್‌ಗೆ ಆಕ್ಷೇಪಣೆ ಸಲ್ಲಿಸಿದೆ. ಮೈಕ್ರೋಬ್ಲಾಗಿಂಗ್ ಪ್ಲಾಟ್‌ಫಾರ್ಮ್ ಟ್ವಿಟರ್ ದೇಶದಲ್ಲಿ ಬಿಸಿನೆಸ್ ಮಾಡಬಹುದು. ಆದರೆ ಈ ನೆಲದ ಕಾನೂನನ್ನು ಅದು ಪಾಲಿಸಬೇಕು ಎಂದು ಕೇಂದ್ರ ಸರ್ಕಾರ ಶುಕ್ರವಾರ ಕರ್ನಾಟಕ ಹೈಕೋಟ್‌ಗೆ ತಿಳಿಸಿದೆ.

ರಾಷ್ಟ್ರೀಯ ಮತ್ತು ಸಾರ್ವಜನಿಕ ಹಿತಾಸಕ್ತಿಯ ದೃಷ್ಟಿಯಿಂದ ಹಾಗೂ ದೊಂಬಿ (ಲಿಂಚಿಂಗ್)‌ ಮತ್ತು ಗುಂಪು ದೌರ್ಜನ್ಯ ನಿಯಂತ್ರಿಸುವ ಉದ್ದೇಶದಿಂದ ಕೆಲವು ಖಾತೆಗಳನ್ನು ನಿರ್ಬಂಧಿಸುವಂತೆ ಟ್ವಿಟರ್‌ಗೆ ನಿರ್ಬಂಧ ಆದೇಶ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ಸಲ್ಲಿಸಿರುವ ಅಫಿಡವಿಟ್‌ನಲ್ಲಿ ವಿವರಿಸಲಾಗಿದೆ.
ಕೆಲವರ​ ಖಾತೆಗಳನ್ನು ನಿರ್ಬಂಧಿಸುವಂತೆ ಟ್ವಿಟರಿಗೆ ಸೂಚಿಸಿರುವ ಕೇಂದ್ರ ಸರ್ಕಾರ ಎಲೆಕ್ಟ್ರಾನಿಕ್ಸ್​ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಆದೇಶ ಪ್ರಶ್ನಿಸಿ ಟ್ವಿಟರ್ ಸಲ್ಲಿಸಿದ್ದ ಅರ್ಜಿಗೆ ಇಂದು, ಶುಕ್ರವಾರ ಆಕ್ಷೇಪಣೆ ಸಲ್ಲಿಸಿದೆ. ಹಾಗೂ ಟ್ವಿಟರ್​ಗೆ ಭಾರತದ ಕಾನೂನು ಉಲ್ಲಂಘಿಸುವ ಚಾಳಿಯಿದೆ ಎಂದು ಹೇಳಿದೆ.
ಭಾರತದ ಸಾರ್ವಭೌಮತೆ, ಸಮಗ್ರತೆ, ರಕ್ಷಣೆ ಮತ್ತು ಭದ್ರತೆ ಹಿತದೃಷ್ಟಿಯಿಂದ ಸೂಚಿಸಿರುವ ನಿರ್ಬಂಧದ ಆದೇಶಗಳನ್ನು ಟ್ವಿಟರ್‌ ಪಾಲಿಸುತ್ತಿಲ್ಲ ಎಂದು ಹೇಳಿದ ಕೇಂದ್ರ ಸರ್ಕಾರ, ನೇರವಾಗಿ ಆಗದಿದ್ದಾಗ ಅದನ್ನು ಪರೋಕ್ಷವಾಗಿ ಸಾಧಿಸಲು ಈ ದಾವೆ ಹೂಡಲಾಗಿದೆ ಎಂದು ಹೇಳಿದೆ.

ಪ್ರಮುಖ ಸುದ್ದಿ :-   ಕಾರು ಅಡ್ಡ ಹಾಕಿ ನಟಿ ಹರ್ಷಿಕಾ ಪೂಣಚ್ಚ ದಂಪತಿಗೆ ಕಿರುಕುಳ : "ನಾವು ಪಾಕಿಸ್ತಾನ ಅಥವಾ ಅಫ್ಘಾನಿಸ್ತಾನದಲ್ಲಿದ್ದೇವೆಯೇ ಎಂದು ನಟಿ ಪ್ರಶ್ನೆ

ವಾಕ್ ಸ್ವಾತಂತ್ರ್ಯದ ಹೆಸರಿನಲ್ಲಿ ತನ್ನ ಸ್ವಂತ ನೀತಿಗಳಿಗೆ ಸರಿಹೊಂದುವಂತೆ ದೇಶದ ಕಾನೂನುಗಳನ್ನು ಬದಲಾಯಿಸಬೇಕು ಎಂದು ಟ್ವಿಟರ್ ನಿರೀಕ್ಷಿಸುತ್ತಿದೆ. ಟ್ವಿಟರ್​ನಂಥ ಸಾಮಾಜಿಕ ವೇದಿಕೆಗಳು ಸುಳ್ಳು ಸುದ್ದಿ ಹರಡುವುದನ್ನು ಪರಿಣಾಮಕಾರಿಯಾಗಿ ತಡೆಯಲು ಪ್ರಯತ್ನಿಸುತ್ತಿಲ್ಲ. ದೇಶದ ಸಾರ್ವಭೌಮತೆ, ಏಕತೆ, ರಾಷ್ಟ್ರೀಯ ಭದ್ರತೆ ಹಾಗೂ ಕಾನೂನು ಸುವ್ಯವಸ್ಥೆಗೆ ಸಂಬಂಧಿಸಿದಂತೆ ಸುಳ್ಳು ಮಾಹಿತಿ ವ್ಯಾಪಕವಾಗಿ ಹರಿದಾಡುತ್ತಿದೆ ಎಂದು ಕೇಂದ್ರ ಹೇಳಿದೆ.

ಇಂಥ ವೇದಿಕೆಗಳನ್ನು ದೇಶ ವಿರೋಧಿ ಮತ್ತು ವಿದೇಶದಲ್ಲಿರುವ ಶತ್ರುಗಳು ಭಾರತ ವಿರೋಧಿ ಅಪಪ್ರಚಾರಕ್ಕೆ ಬಳಕೆ ಮಾಡಿ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಏಕತೆಯಲ್ಲಿ ಬಿರುಕು ಮೂಡಿಸುವುದು ಮತ್ತು ದೇಶದಲ್ಲಿ ಅಸ್ಥಿರತೆ ಉಂಟು ಮಾಡಲು ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಹೀಗಾಗಿ, ಆರಂಭಿಕ ಹಂತದಲ್ಲಿ ತಪ್ಪು ಮಾಹಿತಿಯನ್ನು ನಿರ್ಬಂಧಿಸುವುದು ಅತ್ಯಗತ್ಯ ಎಂದು ಕೇಂದ್ರ ಸರ್ಕಾರ ವಾದಿಸಿದೆ
ಫೆಬ್ರುವರಿ 2021ರಿಂದ ಫೆಬ್ರುವರಿ 2022ರ ಅವಧಿಯಲ್ಲಿ ಕೇಂದ್ರ ಸರ್ಕಾರವು ನೀಡಿರುವ 10 ನಿರ್ಬಂಧದ ಆದೇಶಗಳನ್ನು ಪ್ರಶ್ನಿಸಿ ಟ್ವಿಟರ್ ಕರ್ನಾಟಕ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿತ್ತು. ಜುಲೈ 26ರಂದು ಹೈಕೋರ್ಟ್​ ಟ್ವಿಟರ್​ನ ಪ್ರಶ್ನೆಗಳಿಗೆ ಪ್ರತಿಕ್ರಿಯಿಸುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಿತ್ತು.

ಪ್ರಮುಖ ಸುದ್ದಿ :-   ಲೋಕಸಭೆ ಚುನಾವಣೆ : 1ನೇ ಹಂತದಲ್ಲಿ 62.37%ರಷ್ಟು ಮತದಾನ ; 2019ರ ಮತದಾನದ ಪ್ರಮಾಣಕ್ಕಿಂತ ಕಡಿಮೆ

3 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement