ಮುರುಘಾ ಶರಣರನ್ನು ಪೊಲೀಸ್ ಕಸ್ಟಡಿಗೆ ನೀಡಿದ ನ್ಯಾಯಾಲಯ

ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಮೊದಲ ಆರೋಪಿಯಾಗುವ ಚಿತ್ರದುರ್ಗ ಮುರುಘಾ ಮಠದ ಡಾ. ಶಿವಮೂರ್ತಿ ಮುರುಘಾ ಶರಣರನ್ನು 4 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ   ಆದೇಶಿಸಿದೆ.
ಪೋಕ್ಸೋ ಕೇಸ್​ನಲ್ಲಿ ಸ್ವಾಮೀಜಿಯನ್ನು ನಿನ್ನೆ ಚಿತ್ರದುರ್ಗ ಪೊಲೀಸರು ಬಂಧಿಸಿದ್ದರು.
ಮುರುಘಾ ಶರಣರನ್ನು ಸೆಪ್ಟೆಂಬರ್ 5ರಂದು ಮತ್ತೆ ಕೋರ್ಟ್ ಮುಂದೆ ಹಾಜರು ಮಾಡುವಂತೆ ನ್ಯಾಯಾಧೀಶರು ಸೂಚಿಸಿದ್ದಾರೆ. 5ರಂದು ಬೆಳಗ್ಗೆ 11 ಗಂಟೆಗೆ ಪೊಲೀಸರು ಶ್ರೀಗಳನ್ನು ಕೋರ್ಟ್​ಗೆ ಹಾಜರುಪಡಿಸಲಿದ್ದಾರೆ. ಇತ್ತ ನ್ಯಾಯಾಲಯದಿಂದ ಆದೇಶ ಹೊರಬೀಳುತ್ತಿದ್ದಂತೆ ಮುರುಘಾ ಶ್ರೀಗಳು ನ್ಯಾಯಾಧೀಶರ ಮುಂದೆಯೇ ಕಣ್ಣೀರಿಟ್ಟಿದ್ದಾರೆ.

ಮುರುಘಾ ಶ್ರೀಗಳಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಜೈಲಿನಿಂದ ಆಸ್ಪತ್ರೆಗೆ ಸ್ಥಳಾಂತರಿಸಿದ್ದನ್ನು ಪೊಲೀಸರಿಗೆ ತಿಳಿಸದೇ ಇರುವುದಕ್ಕಾಗಿ ನ್ಯಾಯಾಲಯವು ಪೊಲೀಸರನ್ನು ತರಾಟೆ ತೆಗೆದುಕೊಂಡಿದೆ. ನಂತರ ಎಲ್ಲ ವೈದ್ಯಕೀಯ ವರದಿಗಳನ್ನು ನೀಡುವಂತೆ ಜೈಲು ಅಧಿಕಾರಿಗಳಿಗೆ ಸೂಚಿಸಿದೆ.
ಪೊಲೀಸರು ಶ್ರೀಗಳಿಗೆ ವೈದ್ಯಕೀಯ ಆರೈಕೆಯನ್ನು ಖಚಿತಪಡಿಸಿಕೊಳ್ಳಬೇಕು ಮತ್ತು ಅವರ ಆರೋಗ್ಯ ಸ್ಥಿತಿ ಹದಗೆಟ್ಟರೆ ಮಾತ್ರ ಅವರನ್ನು ಆಸ್ಪತ್ರೆಗೆ ಕರೆದೊಯ್ಯಬೇಕು ಎಂದು ನ್ಯಾಯಾಲಯ ಹೇಳಿದೆ.
ಮತ್ತೋರ್ವ ಆರೋಪಿ ರಶ್ಮಿಯನ್ನು ಬಂಧಿಸಲಾಗಿದ್ದು, ಇನ್ನೂ ಮೂವರು ಪರಾರಿಯಾಗಿದ್ದಾರೆ.

ಪ್ರಮುಖ ಸುದ್ದಿ :-   ಕನ್ನಡ ಚಿತ್ರರಂಗದ ಹಿರಿಯ ನಟ ದ್ವಾರಕೀಶ ಇನ್ನಿಲ್ಲ

ಮುರುಘಾ ಮಠದ ಹಾಸ್ಟೆಲ್ ನಲ್ಲಿ ವ್ಯಾಸಂಗ ಮಾಡುತ್ತಿದ್ದ ಅಪ್ರಾಪ್ತ ವಯಸ್ಸಿನ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪದ ಮೇಲೆ ಆಗಸ್ಟ್‌ 26 ಶುಕ್ರವಾರ ಮುರುಘಾ ಶರಣರ ವಿರುದ್ಧ ಮೈಸೂರಿನ ನಜರಾಬಾದ್‌ ಠಾಣೆಯಲ್ಲಿ ದೂರು ದಾಖಲಾಗಿತ್ತು. ಸಂತ್ರಸ್ತ ಬಾಲಕಿಯರು ಒಡನಾಡಿ ಸಂಸ್ಥೆ ನೆರವು ಪಡೆದು ಪ್ರಕರಣ ದಾಖಲಿಸಿದ್ದರು. ಬಳಿಕ ಚಿತ್ರದುರ್ಗ ಗ್ರಾಮಾಂತರ ಠಾಣೆಗೆ ಇದು ವರ್ಗಾವಣೆಯಾಗಿತ್ತು. ಚಿತ್ರದುರ್ಗ ಪೊಲೀಸರು ಶ್ರೀಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದರು. ಇನ್ನೊಂದೆಡೆ ಶ್ರೀಗಳ ವಿರುದ್ಧ ಪೊಲೀಸರು ಲುಕ್‌ಔಟ್‌ ನೋಟಿಸ್ ಕೂಡ ಜಾರಿ ಮಾಡಿದ್ದರು. ಗುರುವಾರ ರಾತ್ರಿ ಮುರುಘಾ ಮಠದಲ್ಲಿಯೇ ಮುರುಘಾ ಶ್ರೀ ಅವರನ್ನು ಬಂಧಿಸಿದ್ದರು.

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement