ಮುರುಘಾ ಶ್ರೀಗಳ ವಿರುದ್ಧದ ಲೈಂಗಿಕ ದೌರ್ಜನ್ಯದ ಪ್ರರಕರಣ: ಎರಡನೇ ಆರೋಪಿ ಮುರುಘಾ ಮಠದ ಹಾಸ್ಟೆಲ್ ವಾರ್ಡನ್ ಬಂಧನ

ಚಿತ್ರದರ್ಗ : ಲೈಂಗಿಕ ದೌರ್ಜನ್ಯದ ಪೋಕ್ಸೋ ಪ್ರಕರಣದಲ್ಲಿ ಮುರುಘಾ ಮಠದ ಶಿವಮೂರ್ತಿ ಶರಣರ ಬಂಧನವಾದ ಬೆನ್ನಲ್ಲೇ ಇದೀಗ ಎರಡನೇ ಆರೋಪಿಯನ್ನು ಬಂಧಿಸಲಾಗಿದೆ.
ಮಠದ ಹಾಸ್ಟೆಲ್ ವಾರ್ಡನ್ ಆಗಿರುವ ರಶ್ಮಿ ಅವರನ್ನು ಚಿತ್ರದುರ್ಗ ಪೊಲೀಸರು ಬಂಧಿಸಿದ್ದು, ವೈದ್ಯಕೀಯ ತಪಾಸಣೆಗೆಂದು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ವಾರ್ಡನ್ ರಶ್ಮಿ ಲೈಂಗಿಕ ದೌರ್ಜನ್ಯಕ್ಕೆ ಸಹಕಾರ ನೀಡಿದ ಆರೋಪ ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ವಾರ್ಡನ್ ರಶ್ನಿ ಅವರನ್ನ ನಿನ್ನೆ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿತ್ತು. ಬಳಿಕ ರಾತ್ರಿ ಸಾಂತ್ವನ ಕೇಂದ್ರಕ್ಕೆ ಕಳುಹಿಸಲಾಗಿತ್ತು.
ಪ್ರಕರಣದ ಎ-1 ಆರೋಪಿ ಶಿವಮೂರ್ತಿ ಶಿವಾಚಾರ್ಯ ಶರಣರ ಬಂಧನದ ಬೆನ್ನಲ್ಲೇ ಎ-2 ಆರೋಪಿಯಾಗಿರುವ ರಶ್ಮಿ ಅವರನ್ನು ಪೊಲೀಸರು ಬಂಧಿಸಿದ್ದಾರೆ. ವೈದ್ಯಕೀಯ ತಪಾಸಣೆ ಮಾಡಿಸಿ ಬಳಿಕ ಇಂದೇ ಅವರನ್ನು ನ್ಯಾಯಾಲಕ್ಕೆ ಹಾಜರುಪಡಿಸುವ ಸಾಧ್ಯತೆಗಳಿವೆ.

ಇನ್ನುಳಿದು ಮೂವರು ಆರೋಪಿಗಳು ನಾಪತ್ತೆಯಾಗಿದ್ದು, ಅವರ ಬಂಧನಕ್ಕೆ ಪೊಲೀಸರು ಶೋಧ ನಡೆಸುತ್ತಿದ್ದಾರೆ ಎಂದು ಹೇಳಲಾಗಿದೆ.
ಕಳೆದ ವಾರ ಮುರುಘಾ ಶರಣರ ವಿರುದ್ಧ ಮೈಸೂರಿನ ನಜರಾಬಾದ್‌ ಪೊಲೀಸ್‌ ಠಾಣೆಯಲ್ಲಿ ಚಿತ್ರದುರ್ಗದ ಮಠದ ಶಾಲೆಯಲ್ಲಿ ಓದುತ್ತಿರುವ ಇಬ್ಬರು ವಿದ್ಯಾರ್ಥಿನಿಯರು ತಮ್ಮ ಮೇಲೆ ಶ್ರೀಗಳು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದರು. ಪ್ರಕರಣ ದಾಖಲಾದ ಆರು ದಿನಗಳ ನಂತರ ಮುರುಘಾ ಶರಣರನ್ನು ಗುರುವಾರ ತಡರಾತ್ರಿ ಪೊಲೀಸರು ಬಂಧಿಸಿದ್ದರು. ಎದೆನೋವು ಕಾಣಿಸಿಕೊಂಡ ನಂತರ ಸದ್ಯ ಆಸ್ಪತ್ರೆಯಲ್ಲಿರುವ ಮುರುಘಾ ಶರಣರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಪ್ರಮುಖ ಸುದ್ದಿ :-   ಹತ್ಯೆಗೀಡಾದ ನೇಹಾ ಹಿರೇಮಠ ಮನೆಗೆ ಸಿಎಂ ಸಿದ್ದರಾಮಯ್ಯ ಭೇಟಿ ; ಕುಟುಂಬಸ್ಥರಿಗೆ ಸಾಂತ್ವನ

4 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement