ಸಂಸ್ಕೃತವನ್ನು ರಾಷ್ಟ್ರ ಭಾಷೆಯಾಗಿ ಘೋಷಿಸಲು ಕೋರಿದ್ದ ಪಿಐಎಲ್‌ ತಿರಸ್ಕರಿಸಿದ ಸುಪ್ರೀಂಕೋರ್ಟ್‌

ನವದೆಹಲಿ: ಸಂಸ್ಕೃತವನ್ನು ರಾಷ್ಟ್ರ ಭಾಷೆಯಾಗಿ ಘೋಷಿಸಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು ಸುಪ್ರೀಂ ಕೋರ್ಟ್‌ ಶುಕ್ರವಾರ ತಿರಸ್ಕರಿಸಿದೆ.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಂ. ಆರ್‌. ಶಾ ಮತ್ತು ಕೃಷ್ಣ ಮುರಾರಿ ನೇತೃತ್ವದ ಪೀಠವು ಈ ವಿಚಾರವನ್ನು ಪರಿಗಣಿಸಲು ಸಂಸತ್ತು ಸೂಕ್ತ ವೇದಿಕೆಯೇ ಹೊರತು ನ್ಯಾಯಾಲಯವಲ್ಲ ಎಂದು ಹೇಳಿ ವಜಾಗೊಳಿಸಿದೆ.
ನಾವು ನಿಮ್ಮ ಕೆಲ ಅಭಿಪ್ರಾಯಗಳೊಂದಿಗೆ ಸಹಮತ ಹೊಂದಿರಬಹುದು ಆದರೆ ಇದನ್ನು ಚರ್ಚಿಸಲು ಸಂಸತ್ತು ಸೂಕ್ತವಾದ ವೇದಿಕೆ. ಇದಕ್ಕೆ ಸಂವಿಧಾನಕ್ಕೆ ತಿದ್ದುಪಡಿ ತರಬೇಕಾಗುತ್ತದೆ. ಹೀಗಾಗಿ ಘೋಷಿಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿತು. ಇದು ನ್ಯಾಯಾಲಯದ ವಿಷಯವಲ್ಲ, ಇದು ನೀತಿನಿರೂಪಣೆಯ ವಿಷವಾಗಿದ್ದು ನಾವು ಅದನ್ನು ಬದಲಿಸಲು ಆಗುವುದಿಲ್ಲ ಎಂದು ತಿಳಿಸಿತು.

ಅಂತಿಮವಾಗಿ ಸುಪ್ರೀಂಕೋರ್ಟ್‌ ಮನವಿಯನ್ನು ವಜಾಗೊಳಿಸಿತು. ಸೂಕ್ತ ಪ್ರಾಧಿಕಾರದ ಮುಂದೆ ಮನವಿ ನೀಡಲು ಅರ್ಜಿದಾರರು ಸ್ವತಂತ್ರರು ಎಂದು ಹೇಳಿತು.
ಸಂಸ್ಕೃತವನ್ನು ರಾಷ್ಟ್ರ ಭಾಷೆ ಎಂದು ಘೋಷಿಸಲು ಕೇಂದ್ರ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡಬೇಕು. ಹಾಗೆ ಮಾಡುವುದು ಇಂಗ್ಲಿಷ್‌ ಮತ್ತು ಹಿಂದಿಯನ್ನು ಅಧಿಕೃತ ಭಾಷೆ ಎಂದು ಮಾಡಿರುವ ಪ್ರಸಕ್ತ ಸಾಂವಿಧಾನಿಕ ನಿಬಂಧನೆಗಳಲ್ಲಿ ಯಾವುದೇ ವ್ಯತ್ಯಯ ಉಂಟು ಮಾಡುವುದಿಲ್ಲ ಎಂದು ಅರ್ಜಿದಾರರು ವಿವರಿಸಿದ್ದರು. ನಿವೃತ್ತ ಐಎಎಸ್‌ ಅಧಿಕಾರಿ ಹಾಗೂ ವಕೀಲ ವಂಜಾರಾ ಅವರು ಈ ಪಿಐಎಲ್‌ಅನ್ನು ಸಲ್ಲಿಸಿದ್ದರು.

ಪ್ರಮುಖ ಸುದ್ದಿ :-   ತಾಯಿಯ ಸಂಪತ್ತು ಉಳಿಸಿಕೊಳ್ಳಲು ಪಿತ್ರಾರ್ಜಿತ ತೆರಿಗೆ ಕಾನೂನು ರದ್ದುಗೊಳಿಸಿದ ರಾಜೀವ ಗಾಂಧಿ : ಪ್ರಧಾನಿ ಮೋದಿ ಆರೋಪ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement