ಮಹಿಳೆ ಜೊತೆ ದರ್ಪ ತೋರಿದ ಪ್ರಕರಣ: ಕ್ಷಮೆ ಕೇಳೋಕೆ ಸಿದ್ಧ, ಆದ್ರೆ ಒತ್ತುವರಿ ತೆರವು ಮಾಡಿಸಿ- ಕಾಂಗ್ರೆಸ್‌ ಟೀಕೆಗೆ ಶಾಸಕ ಲಿಂಬಾವಳಿ ಉತ್ತರ

ಬೆಂಗಳೂರು: ಭಾರೀ ಮಳೆಯಿಂದಾಗಿ ನೀರು ನಿಂತು ಜಲಾವೃತವಾದ ಪ್ರದೇಶಗಳ ವೀಕ್ಷಣೆ ಸಂದರ್ಭದಲ್ಲಿ ಮಹದೇವಪುರ ಬಿಜೆಪಿ ಅರವಿಂದ ಲಿಂಬಾವಳಿ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂಬ ವಿಡಿಯೋ ಹರಿದಾಡುತ್ತಿರುವ ಬೆನ್ನಲ್ಲೇ ಅರವಿಂದ ಲಿಂಬಾವಳಿ ಪ್ರತಿಕ್ರಿಯಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ಕಾರ್ಯಕರ್ತೆ ರೂತ್ ಸಗಾಯ್ ಮೇರಿ ಎಷ್ಟೋ ವರ್ಷಗಳಿಂದ ರಾಜಕಾಲುವೆ ಒತ್ತುವರಿ ಮಾಡಿ, ಜನರಿಗೆ ಸಮಸ್ಯೆಯುಂಟು ಮಾಡಿದ್ದಾರಲ್ಲ, ಅದನ್ನು ಖಾಲಿ ಮಾಡಲು ಹೇಳಲಿ. ಕಾಂಗ್ರೆಸ್ ಕಾರ್ಯಕರ್ತೆ ತನ್ನ ಮೊಂಡುತನವನ್ನು ಇಲ್ಲಿಗೇ ನಿಲ್ಲಿಸಲಿ. ಕಾಂಗ್ರೆಸ್‌ ಅವರಿಗೆ ಹೇಳಿ ಒತ್ತುವರಿ ಕಾಲಿ ಮಾಡಿದರೆ ನಾನು ಕ್ಷಮೆ ಕೇಳಲು ಸಿದ್ಧನಿದ್ದೇನೆ ಎಂದು ಲಿಂಬಾವಳಿ ಟ್ವೀಟ್ ಮಾಡಿದ್ದಾರೆ.

ಕಾಂಗ್ರೆಸ್‌ ಟೀಕೆಗಳಿಗೆ ಉತ್ತರಿಸಿರುವ ಅವರು, ನಾನು ಕ್ಷಮೆ ಕೇಳಲು ಸಿದ್ಧ ಆದರೆ ನಿಮ್ಮ ಪಕ್ಷದ ಕಾರ್ಯಕರ್ತೆ ಹಲವಾರು ವರ್ಷಗಳಿಂದ ಸಾರ್ವಜನಿಕರಿಗೆ ತೊಂದರೆ ಕೊಡುತ್ತಿದ್ದಾರೆ. ಒತ್ತುವರಿ ಮಾಡಿಕೊಂಡಿರುವ ಜಾಗವನ್ನು ತೆರವುಮಾಡಲು ಹೇಳುವಿರಾ ಎಂದು ಕೇಳೀದ್ದಾರೆ. ” ನಿಮ್ಮ ಪಕ್ಷದ ಇದೇ ಕಾರ್ಯಕರ್ತೆ ರೂತ್ ಸಗಾಯ್ ಮೇರಿ ಎಷ್ಟೋ ವರ್ಷಗಳಿಂದ ರಾಜಕಾಲುವೆ ಒತ್ತುವರಿ ಮಾಡಿ, ಜನರಿಗೆ ಸಮಸ್ಯೆಯುಂಟು ಮಾಡಿದ್ದಾರಲ್ಲ, ಅದನ್ನು ಖಾಲಿ ಮಾಡಲು ಹೇಳಿ. ನಿಮ್ಮ ಕಾರ್ಯಕರ್ತೆಯ ಮೊಂಡುತನವನ್ನು ಇಲ್ಲಿಗೇ ನಿಲ್ಲಿಸಲು ಹೇಳಿ ಎಂದು ಕಾಂಗ್ರೆಸ್‌ ಟೀಕೆಗಳಿಗೆ ಪ್ರತಿಕ್ರಿಯಿಸಿ ಟ್ವೀಟ್‌ ಮಾಡಿದ್ದಾರೆ.

ಪ್ರಮುಖ ಸುದ್ದಿ :-   ಸುಳ್ಳು ಚುನಾವಣಾ ಅಫಿಡವಿಟ್‌ ಪ್ರಕರಣ : ಬಿಜೆಪಿ ಶಾಸಕ ಗರುಡಾಚಾರಗೆ ವಿಧಿಸಿದ್ದ ಜೈಲು ಶಿಕ್ಷೆ ರದ್ದುಮಾಡಿದ ಹೈಕೋರ್ಟ್

ಮಹಿಳೆಯೊಬ್ಬರ ಜೊತೆ ಅರವಿಂದ ಲಿಂಬಾವಳಿಗೆ ಮಾತಿನ ಚಕಮಕಿಯಾಗಿದ್ದಕ್ಕೆ ಅರವಿಂದ ಲಿಂಬಾವಳಿ ಸ್ಪಷ್ಟನೆ ನೀಡಿದ್ದಾರೆ. “ಅರೋಪಗಳನ್ನು ಮಾಡಿದ್ದಕ್ಕೆ ತಲೆಕೆಡಿಸಿಕೊಳ್ಳುವುದಿಲ್ಲ. ಮೊದಲು ಒತ್ತುವರಿಯಾಗಿರುವ ಜಾಗ ಬಿಡಿ, ಜನರಿಗೆ ತೊಂದರೆಯಾಗುತ್ತಿದೆ. ಅದನ್ನು ತಪ್ಪಿಸಬೇಕು. ಟಿಜೆಡ್ ಅಪಾರ್ಟ್ಮೆಂಟ್ ಗೆ ನೀರು ತುಂಬಿರುವುದೇ ಕಾಂಗ್ರೆಸ್ ಕಾರ್ಯಕರ್ತೆ ಸಗಾಯಿ ಮೇರಿಯಿಂದ. ಜನರಿಗೆ ತೊಂದರೆ ಕೊಡುವುದೇ ನಿಮ್ಮ ಉದ್ದೇಶವಾ ಎಂದು ಲಿಂಬಾವಳಿ ಪ್ರಶ್ನಿಸಿದ್ದಾರೆ.

ಇದಕ್ಕೂ ಮೊದಲು, ಅರವಿಂದ ಲಿಂಬಾವಳಿ ತಮ್ಮ ಕ್ಷೇತ್ರದಲ್ಲಿ ಮಹಿಳೆಯೊಬ್ಬರ ಜೊತೆ ದರ್ಪ ತೋರಿದ ಪ್ರಕರಣ ಭಾರೀ ಚರ್ಚೆಗೆ ಗ್ರಾಸವಾದ ನಂತರ, ಕಾಂಗ್ರೆಸ್‌ನ ಕರ್ನಾಟಕ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೆವಾಲಾ ಟ್ವಿಟ್ಟ ಮಾಡಿ ಟೀಕಿಸಿದ್ದಾರೆ.
ಕನ್ನಡದಲ್ಲೇ ಟ್ವೀಟ್‌ ಮಾಡಿರುವ ಸುರ್ಜೆವಾಲಾ, “ಸ್ತ್ರೀ ಉದ್ಧಾರಕರಂತೆ ಕೇವಲ ಬೂಟಾಟಿಕೆಯ ಮಾತಾಡುವ ಬಿಜೆಪಿಗರೇ, ನಿಮ್ಮ ಪಕ್ಷದ ಅರವಿಂದ ಲಿಂಬಾವಳಿಯವರು ಒಬ್ಬ ಜನಪ್ರತಿನಿಧಿಯಾಗಿ ಮಹಿಳೆಯೊಂದಿಗೆ ಅನುಚಿತವಾಗಿ ನಡೆದುಕೊಂಡ ರೀತಿ ಅಕ್ಷಮ್ಯ. ಇಂಥ ಮಹಿಳಾ ವಿರೋಧಿ ನಡೆಯ ವಿರುದ್ಧ ಮಾತಾಡುವ ಧೈರ್ಯ ತೋರುತ್ತೀರಾ? ಅರವಿಂದ ಲಿಂಬಾವಳಿಯವರು ಆ ಹೆಣ್ಣಿನ ಕ್ಷಮೆ ಕೇಳುತ್ತಾರಾ? ಎಂದು ಪ್ರಶ್ನಿಸಿದ್ದಾರೆ.

ಪ್ರಮುಖ ಸುದ್ದಿ :-   ನೇಹಾ ಹಿರೇಮಠ ಕೊಲೆ ಪ್ರಕರಣ: ಆರೋಪಿ ಫಯಾಜ್‌ ಆರು ದಿನ ಸಿಐಡಿ ಕಸ್ಟಡಿಗೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement