ಕೆಪಿಎಸ್​ಸಿಯಿಂದ 229 ಸಹಾಯಕ ಇಂಜಿನಿಯರ್​ ಹುದ್ದೆಗೆ ಅರ್ಜಿ ಆಹ್ವಾನ

ಕೆಪಿಎಸ್​ಸಿಯಿಂದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಗ್ರೂಪ್​ ಬಿ ವೃಂದದ ಸಹಾಯಕ ಅಭಿಯಂತರರ (ಗ್ರೇಡ್​-1) (Assistant Engineer) 129 ಹುದ್ದೆ ಮತ್ತು ಹೈದ್ರಾಬಾದ್​ ಕರ್ನಾಟಕದ 59 ಹುದ್ದೆಗಳಿಗೆ ಮಾರ್ಚ್​ನಲ್ಲಿ ಅರ್ಜಿ ಆಹ್ವಾನಿಸಲಾಗಿತ್ತು. ಇದೀಗ ಅದಕ್ಕೆ ಮತ್ತೆ ಹೆಚ್ಚುವರಿಯಾಗಿ 100 ಹುದ್ದೆಗಳು ಸೇರಿದಂತೆ 229 ಹುದ್ದೆಗಳು ಭರ್ತಿಗೆ ಮುಂದಾಗಿದೆ. ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಸೆಪ್ಟೆಂಬರ್​ 30 ಆಗಿದೆ.

ಇಲಾಖೆಯ ಹೆಸರು-ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ
ಹುದ್ದೆ-ಸಹಾಯಕ ಇಂಜಿನಿಯರ್ (ಗ್ರೇಡ್-1)
ಹುದ್ದೆಗಳ ಸಂಖ್ಯೆ – 229
ಕಾರ್ಯ ನಿರ್ವಹಣೆ ಸ್ಥಳ-ಕರ್ನಾಟಕದಾದ್ಯಂತ
ತಿಂಗಳ ವೇತನ- 43100-83900 ರೂ.
ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾನಿಲಯಗಳಿಂದ ಸಿವಿಲ್​ ಅಥವಾ ಎನ್ವಿರಿಯೊ​ಮೆಂಟಲ್‌ನಲ್ಲಿ ಬಿಇ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ: ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ
ಪ.ಜಾ, ಪ.ಪಂ ಮತ್ತು ಪ್ರವರ್ಗ 1 ಎ ಅಭ್ಯರ್ಥಿಗಳು: 05 ವರ್ಷಗಳು
ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳು: 03 ವರ್ಷಗಳು
ಅರ್ಜಿ ಶುಲ್ಕ:
ಪ.ಜಾ, ಪ.ಪಂ ಪ್ರವರ್ಗ 1 ಮತ್ತು ವಿಕಲಚೇತನ ಅಭ್ಯರ್ಥಿಗಳು: ಶುಲ್ಕ ವಿನಾಯಿತಿ
ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳು: 300 ರೂ.
ಸಾಮಾನ್ಯ ಅಭ್ಯರ್ಥಿಗಳು: 600 ರೂ.
ಎಲ್ಲಾ ಅಭ್ಯರ್ಥಿಗಳಿಗೆ ಸಂಸ್ಕರಣಾ ಶುಲ್ಕ: 35 ರೂ.
ಪಾವತಿ ವಿಧಾನ: ಆನ್ಲೈನ್

ಪ್ರಮುಖ ಸುದ್ದಿ :-   ಬೆಂಗಳೂರು: ರೈಲಿಗೆ ಸಿಲುಕಿ ಮೂವರು ಸಾವು

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ : 2 ಸೆಪ್ಟೆಂಬರ್ 2022
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30ನೇ ಸೆಪ್ಟೆಂಬರ್ 2022
ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 1 ಅಕ್ಟೋಬರ್ 2022

ಅನುಬಂಧ ಅಧಿಸೂಚನೆ:  ಕ್ಲಿಕ್ ಮಾಡಿ-Addendum Notification AE RDWS
ಅಧಿಕೃತ ವೆಬ್‌ಸೈಟ್: kpsc.kar.nic.in

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement