ಮಂಗಳೂರಿನ ಜನರ ಪ್ರೀತಿ, ಅಕ್ಕರೆಗೆ ವಿನಮ್ರನಾಗಿರುವೆ : ಕನ್ನಡದಲ್ಲೇ ಪ್ರಧಾನಿ ಮೋದಿ ಟ್ವೀಟ್

ನವದೆಹಲಿ: ನಿನ್ನೆ ಶುಕ್ರವಾರ ಮಂಗಳೂರಿನಲ್ಲಿ ವಿವಿಧ ಯೋಜನೆಗಳ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ ನಂತರ ಬೃಹತ್‌ ಸಮಾವೇಶ ಉದ್ದೇಶಿಸಿ ಮಾತನಾಡಿದ್ದರು. ಶುಕ್ರವಾರ ಮಂಗಳೂರಿನ ಗೋಲ್ಡ್ ಫಿಂಚ್ ಹೋಟೆಲ್ ಮೈದಾನದಲ್ಲಿ 3೮೦೦ ಸಾವಿರ ಕೋಟಿ ರೂ.ಗಳಷ್ಟು ಮೊತ್ತದ ವಿವಿಧ ಯೋಜನೆಗಳ ಉದ್ಘಾಟನೆ, ಶಿಲಾನ್ಯಾಸ ನಡೆಸಿ ಮಾತನಾಡಿದ್ದ ಪ್ರಧಾನಿ ಮೋದಿ ಅವರು, ಕರಾವಳಿಯ ಉತ್ಪನ್ನಗಳು ಅಂತಾರಾಷ್ಟ್ರೀಯ ಮಾರುಕಟ್ಟೆಗೆ ಸುಲಭವಾಗಿ ತಲುಪಬೇಕು ಎಂದು ತಿಳಿಸಿದ್ದರು.

ಮೋದಿಗೆ ಮಂಗಳೂರಲ್ಲಿ ಅಭೂತಪೂರ್ವ ಸ್ವಾಗತ ದೊರಕಿತ್ತು ಮತ್ತು ಸಮಾವೇಶಕ್ಕೆ ಭಾರೀ ಜನಸ್ತೋಮವೇ ಸೇರಿತ್ತು. ಈ ಹಿನ್ನೆಲೆಯಲ್ಲಿ ಮೋದಿ ಅವರು ಮಂಗಳೂರಿನ ಜನರ ಬಗ್ಗೆ ಕನ್ನಡದಲ್ಲೇ ಟ್ವೀಟ್ ಮಾಡಿ ಧನ್ಯವಾದ ತಿಳಿಸಿದ್ದಾರೆ.
ಮಂಗಳೂರಿನ ಜನರ ಪ್ರೀತಿ, ಅಕ್ಕರೆಗೆ ವಿನಮ್ರನಾಗಿರುವೆ. ಪ್ರಮುಖ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾದುದು ಸಂತಸ ತಂದಿದೆ ಎಂದು ತಿಳಿಸಿರುವ ಅವರು, ಮಂಗಳೂರಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿನ ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಮಂಗಳೂರಿನ ಸಮಾವೇಶದಲ್ಲಿ ಮಾತನಾಡಿದ್ದ ಮೋದಿ, ಕರ್ನಾಟಕದ ಪಶ್ಚಿಮ ಘಟ್ಟ ಪ್ರವಾಸೋದ್ಯಮಕ್ಕೆ ಹೆಸರುವಾಸಿಯಾಗಿದೆ. ಮಂಗಳೂರು ಬಂದರುಗಳಿಗೆ ಕ್ರೂಸ್ ಶಿಪ್ ಬರಬೇಕು. ಪ್ರವಾಸಿಗರು ಆಗಮಿಸಿದರೆ ಇಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಯಾಗುತ್ತದೆ. ಪ್ರವಾಸೋದ್ಯಮ ಹೆಚ್ಚಾದರೆ ಗ್ರಾಮದ್ಯೋಗ, ಆಟೋರಿಕ್ಷಾ ಚಾಲಕರಿಗೆ ಎಲ್ಲರಿಗೂ ಲಾಭ ಸಿಗಲಿದೆ ಎಂದು ಅವರು ಹೇಳಿದ್ದರು.

ಪ್ರಮುಖ ಸುದ್ದಿ :-   ಮಾಜಿ ಸಚಿವ ಎಚ್.ಡಿ ರೇವಣ್ಣಗೆ ಮತ್ತೊಂದು ಸಂಕಷ್ಟ : ಅಪಹರಣ ಪ್ರಕರಣ ದಾಖಲು

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement