ರಾಜ್ಯದ ಈ ಜಿಲ್ಲೆಗಳಲ್ಲಿ ಇಂದಿನಿಂದ ಸೆಪ್ಟೆಂಬರ್‌ 6ರ ವರೆಗೆ ಮಳೆಯಾಗುವ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಸೆಪ್ಟೆಂಬರ್‌ 6ರವರೆಗೆ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ರಾಜ್ಯದ ರಾಜಧಾನಿ ಬೆಂಗಳೂರು ಸೇರಿದಂತೆ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ಸೆಪ್ಟೆಂಬರ್‌ 6ರ ವರೆಗೆ ಮಳೆಯಾಗಲಿದೆ. ಮುಂದಿನ 4 ದಿನಗಳ ಕಾಲ ಧಾರಾಕಾರ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (IMD) ನೀಡಿದೆ. ಅದರಲ್ಲೂ ದಕ್ಷಿಣ ಒಳನಾಡು, ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮಳೆ ಜೋರಾಗಿರಲಿದೆ ಎಂದು ಹೇಳಲಾಗಿದೆ.
ಇಂದು ಶಿವಮೊಗ್ಗ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಹಳದಿ ಅಲರ್ಟ್‌ ಘೋಷಿಸಲಾಗಿದೆ. ಇಂದಿನಿಂದ 4 ದಿನ ಬೀದರ್‌, ಕಲಬುರಗಿ, ವಿಜಯಪುರ, ಗದಗ, ಧಾರವಾಡ, ಹಾವೇರಿ, ದಾವಣಗೆರೆ, ಹಾಸನ, ಮೈಸೂರು, ಮಂಡ್ಯ, ಚಾಮರಾಜನಗರ, ಕೋಲಾರ, ಬೆಂಗಳೂರು ನಗರ, ರಾಮನಗರ ಜಿಲ್ಲೆಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ಇಂದು ಮಲೆನಾಡಿನ ಜಿಲ್ಲೆಗಳಾದ ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಬೆಳಗಾವಿ, ಮೈಸೂರು, ಚಾಮರಾಜನಗರ ಜಿಲ್ಲೆಗಳಿಗೂ ಹಳದಿ ಅಲರ್ಟ್‌ ನೀಡಲಾಗಿದೆ.
ಭಾನುವಾರದಿಂದ ಸೋಮವಾರ ಬೆಳಗ್ಗೆ 8:30ರ ವರೆಗೆ ಕರಾವಳಿ, ಮಲೆನಾಡು ಜಿಲ್ಲೆಗಳ ಜೊತೆಗೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ ಮತ್ತು ತುಮಕೂರು ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗಬಹುದು ಎಂದು ಮುನ್ಸೂಚನೆ ನೀಡಲಾಗಿದೆ.
ಸೋಮವಾರದಿಂದ ಗದಗ, ಧಾರವಾಡ, ಬೆಳಗಾವಿ, ಕೋಲಾರ, ಬಳ್ಳಾರಿ, ಯಾದಗಿರಿ, ರಾಯಚೂರು, ಕೊಪ್ಪಳ, ಚಿಕ್ಕಬಳ್ಳಾಪುರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ರಾಮನಗರ, ತುಮಕೂರು ಮತ್ತು ಚಾಮರಾಜನಗರ ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಸೆಪ್ಟೆಂಬರ್‌ 6ರವರೆಗೂ ಮಳೆ ಮುಂದುವರಿಯಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ಮುನ್ಸೂಚನೆ ನೀಡಿದೆ.

ಪ್ರಮುಖ ಸುದ್ದಿ :-   ಸುಳ್ಳು ಚುನಾವಣಾ ಅಫಿಡವಿಟ್‌ ಪ್ರಕರಣ : ಬಿಜೆಪಿ ಶಾಸಕ ಗರುಡಾಚಾರಗೆ ವಿಧಿಸಿದ್ದ ಜೈಲು ಶಿಕ್ಷೆ ರದ್ದುಮಾಡಿದ ಹೈಕೋರ್ಟ್

 

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement