2021ರಲ್ಲಿ ಭಾರತದಲ್ಲಿ ರಸ್ತೆ ಅಪಘಾತಗಳಲ್ಲಿ 1.55 ಲಕ್ಷ ಮಂದಿ ಸಾವು, ಇದು ಇದುವರೆಗಿನ ಅತಿ ಹೆಚ್ಚು: ವರದಿ

ನವದೆಹಲಿ: 2021ರಲ್ಲಿ ದೇಶಾದ್ಯಂತ ರಸ್ತೆ ಸಂಭವಿಸಿದ ಅಪಘಾತಗಳಲ್ಲಿ 1.55 ಲಕ್ಷಕ್ಕೂ ಹೆಚ್ಚು ಜೀವಗಳನ್ನು ಕಳೆದುಕೊಂಡಿದ್ದಾರೆ. ಸರಾಸರಿ 426 ದೈನಂದಿನ ಅಥವಾ ಪ್ರತಿ ಗಂಟೆಗೆ 18. – ಅಧಿಕೃತ ಮಾಹಿತಿಯ ಪ್ರಕಾರ ಇದು ಯಾವುದೇ ಕ್ಯಾಲೆಂಡರ್ ವರ್ಷದಲ್ಲಿ ಇದುವರೆಗೆ ದಾಖಲಾದ ಅತಿ ಹೆಚ್ಚು ಸಾವಿನ ಅಂಕಿಅಂಶವಾಗಿದೆ. ಭಾರತದಲ್ಲಿ ಅಪಘಾತ ಸಾವುಗಳು ಮತ್ತು ಆತ್ಮಹತ್ಯೆಗಳು – 2021 ದಾಖಲೆಗಳ … Continued

ಅಂಕೋಲಾ: ಸ್ವಾತಂತ್ರ್ಯ ಹೋರಾಟಗಾರ ವೆಂಕಣ್ಣ ನಾಯಕ ನಿಧನ

ಅಂಕೋಲಾ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಭಾಸಗೋಡ ಸೂರ್ವೆಯ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಶತಾಯುಷಿ ವೆಂಕಣ್ಣ ಹಮ್ಮಣ್ಣ ನಾಯಕ (102) ಅವರು ವಯೋಸಹಜ ಅನಾರೋಗ್ಯದಿಂದ ಭಾನುವಾರ ನಿಧನರಾದರು. ಸ್ವಾತಂತ್ರ್ಯ ಹೋರಾಟಗಾರ ವೆಂಕಣ್ಣ ನಾಯಕ ಅವರ ನಿಧನದಿಂದ ಅಂಕೋಲಾ ತಾಲೂಕಿನ ಸ್ವಾತಂತ್ರ್ಯ ಹೋರಾಟದ ಕೊನೆಯ ಕೊಂಡಿ ಕಳಚಿದಂತಾಗಿದೆ. ಸ್ವಾತಂತ್ರ್ಯ ಹೋರಾಟದಲ್ಲಿ ದುಮುಕಿ ಜೈಲುವಾಸ ಅನುಭವಿಸಿರುವ ಅವರನ್ನು … Continued

ಆಟೋರಿಕ್ಷಾಕ್ಕೆ ಕಾರು ಡಿಕ್ಕಿ ಹೊಡೆದು ಉರುಳಿದ ನಂತರ ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾದ ರಸ್ತೆಯಲ್ಲಿ ಹೋಗುತ್ತಿದ್ದ ಮಹಿಳೆ | ವೀಕ್ಷಿಸಿ

ಮಹಿಳೆಯೊಬ್ಬರು ವಾಹನಕ್ಕೆ ಸಿಲುಕಿ ಸ್ವಲ್ಪದರಲ್ಲೇ ಪಾರಾಗುತ್ತಿರುವ ದೃಶ್ಯದ ವೀಡಿಯೊ ಆನ್‌ಲೈನ್‌ನಲ್ಲಿ ಕಾಣಿಸಿಕೊಂಡಿದೆ. ಕ್ಲಿಪ್ ಅನ್ನು ಭಾರತೀಯ ಪೊಲೀಸ್ ಸೇವೆಯ (ಐಪಿಎಸ್) ಅಧಿಕಾರಿ ವಿ.ಸಿ. ಸಜ್ಜನರ್ ಅವರು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಶೀರ್ಷಿಕೆಯಲ್ಲಿ, ಐಪಿಎಸ್ ಅಧಿಕಾರಿ, ರಸ್ತೆ ಸುರಕ್ಷತೆಯನ್ನು ಎಲ್ಲಿಯವರೆಗೆ ಲಘುವಾಗಿ ತೆಗೆದುಕೊಳ್ಳುತ್ತಾರೆ ..? ಮತ್ತು ಜನರು ತಮ್ಮ ಅದೃಷ್ಟದ ಮೇಲೆ ಅವಲಂಬಿತರಾಗಬೇಕೇ ಎಂಬ ಎಂಬ ಪ್ರಶ್ನೆ ಕೇಳಿದ್ದಾರೆ. … Continued

ಅಪಘಾತದಲ್ಲಿ ಸಾವಿಗೀಡಾದ ಟಾಟಾ ಸನ್ಸ್‌ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ ಪ್ರಯಾಣಿಸುತ್ತಿದ್ದ ಕಾರನ್ನು ಮುಂಬೈ ವೈದ್ಯರು ಚಲಾಯಿಸುತ್ತಿದ್ದರು : ಪೊಲೀಸರು

ಮುಂಬೈ: ಇಂದು, ಭಾನುವಾರ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಟಾಟಾ ಸನ್ಸ್‌ನ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ ಸಾವಿಗೀಡಾದ ಕಾರನ್ನು ಸ್ತ್ರೀರೋಗತಜ್ಞೆ  ಚಾಲನೆ ಮಾಡುತ್ತಿದ್ದರು ಎಂದು ಎಂದು ಪೊಲೀಸರು ತಿಳಿಸಿದ್ದಾರೆ. ಕಾರು ವೇಗವಾಗಿ ಚಲಿಸುತ್ತಿತ್ತು ಮತ್ತು ರಾಂಗ್ ಸೈಡ್ ನಿಂದ (ಎಡದಿಂದ) ಮತ್ತೊಂದು ವಾಹನವನ್ನು ಹಿಂದಿಕ್ಕಲು ಪ್ರಯತ್ನಿಸಿತ್ತು ಎಂದು ಪೊಲೀಸ್ ಅಧಿಕಾರಿಯೊಬ್ಬರು ಸುದ್ದಿಸಂಸ್ಥೆಯೊಂದಕ್ಕೆ ತಿಳಿಸಿದ್ದಾರೆ. ಇಂದು, … Continued

ಕೆಕೆ ಶೈಲಜಾ ಮ್ಯಾಗ್ಸೆಸೆ ಪ್ರಶಸ್ತಿ ತೆಗೆದುಕೊಳ್ಳುವುದು ಬೇಡ: ಪಕ್ಷದ ನಿರ್ಧಾರ ಸಮರ್ಥಿಸಿಕೊಂಡ ಸೀತಾರಾಂ ಯೆಚೂರಿ

ನವದೆಹಲಿ: ಕೇರಳದ ಮಾಜಿ ಆರೋಗ್ಯ ಸಚಿವೆ ಕೆ.ಕೆ. ಶೈಲಜಾ ಅವರಿಗೆ ಪ್ರತಿಷ್ಠಿತ ರಾಮನ್ ಮ್ಯಾಗ್ಸೆಸೆ ಪ್ರಶಸ್ತಿಯನ್ನು ಪಡೆಯುವ ಅವಕಾಶವನ್ನು ಸಿಪಿಐ (ಎಂ) ನಿರಾಕರಿಸಿದ್ದಕ್ಕೆ ವಿಚಾರಕ್ಕೆ ಸಂಬಂಧಿಸಿದಂತೆ, ಪಕ್ಷದ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ತಮ್ಮ ಪಕ್ಷದ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ, ಪ್ರಶಸ್ತಿಯು ಫಿಲಿಪೈನ್ಸ್‌ನಲ್ಲಿ ಕಮ್ಯುನಿಸ್ಟರ ಕ್ರೂರ ದಬ್ಬಾಳಿಕೆಯ ಇತಿಹಾಸರಾಮನ್ ಮ್ಯಾಗ್ಸೆಸೆ ಹೆಸರಿನಲ್ಲಿದೆ ಎಂದು ಅವರು ಹೇಳಿದ್ದಾರೆ. ನವದೆಹಲಿಯಲ್ಲಿ … Continued

ಟಾಟಾ ಸನ್ಸ್‌ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ ರಸ್ತೆ ಅಪಘಾತದಲ್ಲಿ ನಿಧನ

ಟಾಟಾ ಸನ್ಸ್‌ನ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ ಅವರು ಭಾನುವಾರ ಮುಂಬೈನ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ಡಿವೈಡರ್‌ಗೆ ಕಾರು ಡಿಕ್ಕಿ ಹೊಡೆದು ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅವರಿಗೆ 54 ವರ್ಷ ವಯಸ್ಸಾಗಿತ್ತು. ಮಿಸ್ತ್ರಿ ಅವರು ಮರ್ಸಿಡಿಸ್ ಕಾರಿನಲ್ಲಿ ಅಹಮದಾಬಾದ್‌ನಿಂದ ಮುಂಬೈಗೆ ಪ್ರಯಾಣಿಸುತ್ತಿದ್ದರು ಎಂದು ಅವರು ತಿಳಿಸಿದ್ದಾರೆ. ಮಿಸ್ತ್ರಿ … Continued

ನೇತ್ರ ದಾನದ ಬಗ್ಗೆ ಅರಿವು ಮೂಡಿಸಲು ಸೈಕಲ್ ಜಾಥಾ

posted in: ರಾಜ್ಯ | 0

ಬೆಂಗಳೂರು : ಗೋ ಗ್ರೀನ್ ಮತ್ತು ಡಾಕ್ಟರ್ ಅಗರವಾಲ್ ಕಣ್ಣಿನ ಆಸ್ಪತ್ರೆ ಸಹಯೋಗದೊಂದಿಗೆ ಇಂದು, ಭಾನುವಾರ “ನೇತ್ರ ದಾನ – ಮಹಾ ದಾನ ” ಎಂಬ ಘೋಷ ವಾಕ್ಯದೊಂದಿಗೆ ನೇತ್ರ ದಾನದ ಬಗ್ಗೆ ಜನಲ್ಲಿ ಅರಿವು ಮೂಡಿಸಲು ಬೆಂಗಳೂರಿನ ಬನಶಂಕರಿಯಲ್ಲಿ ಸೈಕಲ್ ಜಾಥಾ ನಡೆಸಲಾಯಿತು . ಜಾಥಾದಲ್ಲಿ ನೂರಾರು ಸೈಕಲ್ ಪಟುಗಳು ಭಾಗವಹಿಸಿದ್ದರು. ಸೈಕಲ್‌ ಜಾಥಾಕ್ಕೆ … Continued

ಗಣೇಶನ ಮಂಟಪದ ಎದುರು ಒಮ್ಮೆಗೇ ಕುಸಿದುಬಿದ್ದು ಮೃತಪಟ್ಟ ಡಾನ್ಸ್‌ ಮಾಡುತ್ತಿದ್ದ ಆಂಜನೇಯನ ವೇಷಧಾರಿ | ದೃಶ್ಯ ಸೆರೆ

ಮೈನ್‌ಪುರಿ: ಉತ್ತರಪ್ರದೇಶದ ಮೈನ್‌ಪುರಿ ಕೊಟ್ವಾಲಿ ಪ್ರದೇಶದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಗಣೇಶ ಚತುರ್ಥಿ ಕಾರ್ಯಕ್ರಮದಲ್ಲಿ ಹನುಮಂತನ ವೇಷ ಧರಿಸಿ ಡ್ಯಾನ್ಸ್ ಮಾಡುತ್ತಿದ್ದ ಯುವಕನಿಗೆ ಹಠಾತ್ ಹೃದಯಾಘಾತವಾಗಿದ್ದು, ಬಳಿಕ ಪ್ರಜ್ಞೆ ತಪ್ಪಿ ಬಿದ್ದಿದ್ದಾನೆ. ಅದೇ ವೇಳೆ ಸ್ಥಳದಲ್ಲಿದ್ದ ಸ್ಥಳೀಯರು ಯುವಕನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದರಾದರೂ ಆತ ಮೃತಪಟ್ಟಿದ್ದಾನೆ ಎಂದು ವೈದ್ಯರು ಪ್ರಕಟಿಸಿದ್ದಾರೆ. ಈ ಹಠಾತ್ ಸಾವಿನಿಂದ ಯುವಕನ ಕುಟುಂಬದ … Continued

ರಾಹುಲ್‌ ಗಾಂಧಿ ಭೇಟಿಗೆ ಒಂದು ದಿನ ಮೊದಲು ಗುಜರಾತ್ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ವಿಶ್ವನಾಥ್ ಸಿಂಗ್ ವಘೇಲಾ ರಾಜೀನಾಮೆ

ಅಹಮದಾಬಾದ್ : ಗುಜರಾತ್ ಯುವ ಕಾಂಗ್ರೆಸ್ ಅಧ್ಯಕ್ಷ ವಿಶ್ವನಾಥ ಸಿಂಗ್ ವಘೇಲಾ ಭಾನುವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುಜರಾತ್ ಭೇಟಿ ನೀಡುವ ಒಂದು ದಿನ ಮೊದಲು ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್‌ ಪಕ್ಷದ ‘ಭಾರತ್ ಜೋಡೋ ಯಾತ್ರೆ’ಗೆ ಮುಂಚಿತವಾಗಿ ಸೆಪ್ಟೆಂಬರ್ 5 ರಂದು ಗುಜರಾತ್‌ನಲ್ಲಿ ಮುಂಬರುವ … Continued

ಮ್ಯಾಗ್ಸೆಸೆ ಪ್ರಶಸ್ತಿ ತಿರಸ್ಕರಿಸಿದ ಕೇರಳದ ಮಾಜಿ ಆರೋಗ್ಯ ಸಚಿವೆ ಶೈಲಜಾ : ಪಕ್ಷದೊಂದಿಗೆ ಚರ್ಚಿಸಿದ ನಂತರ ನಿರ್ಧಾರ

ತಿರುವನಂತಪುರಂ: ಕೇರಳದ ಮಾಜಿ ಆರೋಗ್ಯ ಸಚಿವೆ ಕೆ.ಕೆ. ಶೈಲಜಾ ಅವರು ರಾಮೋನ್ ಮ್ಯಾಗ್ಸೆಸೆ ಪ್ರಶಸ್ತಿಯನ್ನು ತಿರಸ್ಕರಿಸಿದ್ದಾರೆ. ಕೆಕೆ ಶೈಲಜಾ ಅವರು ಕೇರಳದ ಆರೋಗ್ಯ ಸಚಿವರಾಗಿ ವಿಶೇಷವಾಗಿ ನಿಪಾ ವೈರಸ್ ಮತ್ತು ಕೋವಿಡ್ -19 ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಿದ ಅವಧಿಯಲ್ಲಿ ಅವರ ಕಾರ್ಯಕ್ಷಮತೆಯನ್ನು ಪರಿಗಣಿಸಿ ಅವರನ್ನು 64ನೇ ಮ್ಯಾಗ್ಸೆಸೆ ಪ್ರಶಸ್ತಿಗೆ ಪರಿಗಣಿಸಲಾಗಿದೆ. ಏಷ್ಯನ್ ನೊಬೆಲ್ ಪ್ರಶಸ್ತಿ … Continued