ಅಪಘಾತದಲ್ಲಿ ಸಾವಿಗೀಡಾದ ಟಾಟಾ ಸನ್ಸ್‌ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ ಪ್ರಯಾಣಿಸುತ್ತಿದ್ದ ಕಾರನ್ನು ಮುಂಬೈ ವೈದ್ಯರು ಚಲಾಯಿಸುತ್ತಿದ್ದರು : ಪೊಲೀಸರು

ಮುಂಬೈ: ಇಂದು, ಭಾನುವಾರ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಟಾಟಾ ಸನ್ಸ್‌ನ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ ಸಾವಿಗೀಡಾದ ಕಾರನ್ನು ಸ್ತ್ರೀರೋಗತಜ್ಞೆ  ಚಾಲನೆ ಮಾಡುತ್ತಿದ್ದರು ಎಂದು ಎಂದು ಪೊಲೀಸರು ತಿಳಿಸಿದ್ದಾರೆ.
ಕಾರು ವೇಗವಾಗಿ ಚಲಿಸುತ್ತಿತ್ತು ಮತ್ತು ರಾಂಗ್ ಸೈಡ್ ನಿಂದ (ಎಡದಿಂದ) ಮತ್ತೊಂದು ವಾಹನವನ್ನು ಹಿಂದಿಕ್ಕಲು ಪ್ರಯತ್ನಿಸಿತ್ತು ಎಂದು ಪೊಲೀಸ್ ಅಧಿಕಾರಿಯೊಬ್ಬರು ಸುದ್ದಿಸಂಸ್ಥೆಯೊಂದಕ್ಕೆ ತಿಳಿಸಿದ್ದಾರೆ.
ಇಂದು, ಭಾನುವಾರ ಮಧ್ಯಾಹ್ನ 3 ಗಂಟೆಗೆ ಮುಂಬೈನಿಂದ 120 ಕಿಮೀ ದೂರದಲ್ಲಿ ಸಂಭವಿಸಿದ ಅಪಘಾತದಲ್ಲಿ ಸೈರಸ್‌ ಮಿಸ್ತ್ರಿ, 54, ಮತ್ತು ಜಹಾಂಗೀರ್ ಪಾಂಡೋ (ಮಹಿಳಾ ವೈದ್ಯೆ ಅನಾಹಿತಾ ಪಾಂಡೋಲೆ ಅವರ ಮಾವ) ಮೃತಪಟ್ಟಿದ್ದಾರೆ. ಸ್ತ್ರೀರೋಗತಜ್ಞೆ, ಅನಾಹಿತಾ ಪಾಂಡೋಲೆ (55) ಮತ್ತು ಅವರ ಪತಿ ಡೇರಿಯಸ್ ಪಾಂಡೋಲೆ (60), ಅವರು ಬದುಕುಳಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಸೈರಸ್‌ ಮಿಸ್ತ್ರಿ ಮತ್ತು ಜಹಾಂಗೀರ್ ಪಾಂಡೋಲೆ ಹಿಂಬದಿಯ ಸೀಟಿನಲ್ಲಿದ್ದರು ಎಂದು ಅಧಿಕಾರಿ ಹೇಳಿದರು. ಡೇರಿಯಸ್ ಪಾಂಡೋಲ್ ಮುಂದಿನ ಸೀಟಿನಲ್ಲಿದ್ದರು, ಅವರ ಪತ್ನಿ ವಾಹನ ಚಲಾಯಿಸುತ್ತಿದ್ದರು ಎಂದು ಅಧಿಕಾರಿ ಹೇಳಿದರು.
ಮಹಿಳೆಯೊಬ್ಬರು ಕಾರನ್ನು ಚಲಾಯಿಸುತ್ತಿದ್ದರು ಮತ್ತು ಎಡಭಾಗದಿಂದ ಮತ್ತೊಂದು ವಾಹನವನ್ನು ಹಿಂದಿಕ್ಕಲು ಪ್ರಯತ್ನಿಸಿದರು, ಆದರೆ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ.
ರಸ್ತೆಬದಿಯ ಗ್ಯಾರೇಜ್‌ನಲ್ಲಿ ಕೆಲಸ ಮಾಡುವ ಪ್ರತ್ಯಕ್ಷದರ್ಶಿಯೊಬ್ಬರು “ನಾವು ಅಪಘಾತದ ಸ್ಥಳಕ್ಕೆ ಧಾವಿಸಿದೆವು. 10 ನಿಮಿಷಗಳಲ್ಲಿ, ಆಂಬುಲೆನ್ಸ್‌ ಬಂದತು ಮತ್ತು ಇಬ್ಬರು ಗಾಯಗೊಂಡವರನ್ನು ಕಾರಿನಿಂದ ಹೊರತೆಗೆಯಲಾಯಿತು. ಮತ್ತು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಆದರೆ ಉಳಿದ ಇಬ್ಬರು ಸತ್ತಿದ್ದರು ಎಂದು ಮರಾಠಿ ಟಿವಿ ಚಾನೆಲ್‌ಗೆ ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಕಾರು ಅಡ್ಡ ಹಾಕಿ ನಟಿ ಹರ್ಷಿಕಾ ಪೂಣಚ್ಚ ದಂಪತಿಗೆ ಕಿರುಕುಳ : "ನಾವು ಪಾಕಿಸ್ತಾನ ಅಥವಾ ಅಫ್ಘಾನಿಸ್ತಾನದಲ್ಲಿದ್ದೇವೆಯೇ ಎಂದು ನಟಿ ಪ್ರಶ್ನೆ

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement