ಚಿತ್ರದುರ್ಗ: ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರನ್ನು ಹೊಳಲ್ಕೆರೆ ತಾಲೂಕಿನ ಮಲ್ಲಾಡಿಹಳ್ಳಿ ಅನಾಥ ಸೇವಾಶ್ರಮದ ಅಧ್ಯಕ್ಷ ಸ್ಥಾನ ಹಾಗೂ ವಿಶ್ವಸ್ಥ ಸಮಿತಿಯ ಸದಸ್ಯತ್ವದಿಂದ ವಜಾ ಮಾಡಲಾಗಿದೆ.ಶನಿವಾರ ನಡೆದ ತುರ್ತು ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು, ತಕ್ಷಣದಿಂದ ಜಾರಿಗೆ ಬರುವಂತೆ ಈ ಕ್ರಮ ಕ್ರಮ ಕೈಗೊಳ್ಳಾಗಿದೆ ಎಂದು ವಿಶ್ವಸ್ಥ ಸಮಿತಿ ಗೌರವ ಕಾರ್ಯದರ್ಶಿ ಪ್ರೊಫೆಸರ್ ಕೆ.ಇ. ರಾಧಾಕೃಷ್ಣ ಮಾಹಿತಿ ನೀಡಿದ್ದಾರೆ.
ನಾಪತ್ತೆಯಾದ ಮೂವರು ಆರೋಪಿಗಳಿಗಾಗಿ ತೀವ್ರ ಶೋಧ
ಪ್ರಕರಣದಲ್ಲಿ ಆರೋಪಿಗಳಾದ ಪರಮಶಿವಯ್ಯ, ಗಂಗಾಧರಯ್ಯ ಮತ್ತು ಓರ್ವ ಬಾಲಾಪರಾಧಿಗಾಗಿ ಪೊಲೀಸರು ತೀವ್ರ ಶೋಧ ನಡೆಸಿದ್ದಾರೆ. ಮೂವರು ಆರೋಪಿಗಳ ಮನೆಗೆ ಪೊಲೀಸರು ನೋಟಿಸ್ ಕೊಟ್ಟಿದ್ದಾರೆ. ತಕ್ಷಣ ತನಿಖಾಧಿಕಾರಿಗಳ ಮುಂದೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ. ಆರೋಪಿಗಳು ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದು, ನಾಪತ್ತೆಯಾದ ಬಗ್ಗೆ ಪೊಲೀಸರಿಗೆ ಯಾವುದೇ ಸುಳಿವು ಸಿಗುತ್ತಿಲ್ಲ. ಆರೋಪಿಗಳ ಪತ್ತೆಗೆ ಎಸ್ಪಿ ಪರಶುರಾಮ್ ತಂಡ ರಚಿಸಿದ್ದಾರೆ.


ನಿಮ್ಮ ಕಾಮೆಂಟ್ ಬರೆಯಿರಿ