ಕರ್ನಾಟಕದ ಈ ಜಿಲ್ಲೆಗಳಲ್ಲಿ ಸೆಪ್ಟೆಂಬರ್‌ 9ರ ವರೆಗೆ ಗುಡುಗು ಸಹಿತ ಮಳೆ

ಬೆಂಗಳೂರು: ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಮುಂದುವರೆದಿದೆ. ರಾಜಧಾನಿ ಬೆಂಗಳೂರು, ರಾಜ್ಯದ ಕರಾವಳಿ ಹಾಗೂ ಮಲೆನಾಡು, ಜಿಲ್ಲೆಗಳಲ್ಲಿ ಸೆಪ್ಟೆಂಬರ್‌ 9ರ ವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡು, ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮಳೆ ಹೆಚ್ಚಿರಲಿದೆ.
ಇಂದು ಕೊಡಗು, ಶಿವಮೊಗ್ಗ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗೆ ಹಳದಿ ಅಲರ್ಟ್‌ ಘೋಷಿಸಲಾಗಿದೆ. ಇಂದಿನಿಂದ 4 ದಿನ ಬೀದರ್‌, ಕಲಬುರಗಿ, ವಿಜಯಪುರ, ಗದಗ, ಧಾರವಾಡ, ಹಾವೇರಿ, ದಾವಣಗೆರೆ, ಹಾಸನ, ಮೈಸೂರು, ಮಂಡ್ಯ, ಚಾಮರಾಜನಗರ, ಕೋಲಾರ, ಬೆಂಗಳೂರು ನಗರ, ರಾಮನಗರ ಜಿಲ್ಲೆಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ಸೋಮವಾರ ಬೆಳಗ್ಗೆ 8.30ರವರೆಗೆ ಕರಾವಳಿ, ಮಲೆನಾಡು ಜಿಲ್ಲೆಗಳ ಜೊತೆಗೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ ಮತ್ತು ತುಮಕೂರು ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗಲಿದೆ. ಸೋಮವಾರದಿಂದ ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಧಾರವಾಡ, ಬೆಳಗಾವಿ, ಕೋಲಾರ, ಬಳ್ಳಾರಿ, ಚಿಕ್ಕಬಳ್ಳಾಪುರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ರಾಮನಗರ, ತುಮಕೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಸೆ. 9ರವರೆಗೆ ಬೆಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗುಡುಗು ಸಹಿತ ಧಾರಾಕಾರ ಮಳೆ ಬರುವ ಸಾಧ್ಯತೆ ಇದೆ. ಬೆಂಗಳೂರಿನಾದ್ಯಂತ ವ್ಯಾಪಕವಾಗಿ ಮಳೆ ಬೀಳುವ ಸಾಧ್ಯತೆ ಇದೆ.

ಪ್ರಮುಖ ಸುದ್ದಿ :-   ಹಾರ್ಮುಜ್ ಜಲಸಂಧಿಯಲ್ಲಿ ವಾಣಿಜ್ಯ ಹಡಗಿನ ಮೇಲೆ ದಾಳಿ : ಕಾರವಾರದ ನಾವಿಕನಿಗೆ ಗಾಯ ; ವರದಿ

4.8 / 5. 4

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement