ಆತ್ಮಹತ್ಯೆ ಮಾಡಿಕೊಂಡ ನೇಗಿನಹಾಳ ಬಸವ ಸಿದ್ಧಲಿಂಗ ಸ್ವಾಮೀಜಿ

ಬೈಲಹೊಂಗಲ: ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ನೇಗಿನಹಾಳ ಗ್ರಾಮದಲ್ಲಿರುವ ಮಡಿವಾಳೇಶ್ವರ ಮಠದ ಪೀಠಾಧಿಪತಿ ಬಸವ ಸಿದ್ಧಲಿಂಗ ಸ್ವಾಮೀಜಿ ಅವರು ಭಾನುವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸ್ಥಳಕ್ಕೆ ಬೈಲಹೊಂಗಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೆಲ ದಿನಗಳ ಹಿಂದೆ ಮಹಿಳೆಯರಿಬ್ಬರು ಸ್ವಾಮೀಜಿಗಳ ಸಂಸ್ಕಾರ ಹಾಗೂ ಚಾರಿತ್ರ್ಯ ಮೊದಲಾದ ವಿಷಯಗಳ ಬಗ್ಗೆ ಮಾತನಾಡಿದ್ದ ಆಡಿಯೋ ವೈರಲ್ ಆಗಿತ್ತು. ಈ ಆಡಿಯೋದಲ್ಲಿ ಸದ್ಯ ಆತ್ಮಹತ್ಯೆ ಮಾಡಿಕೊಂಡ ಸ್ವಾಮೀಜಿ ಅವರ ಹೆಸರು ಇತ್ತು ಎಂದು ಹೇಳಲಾಗುತ್ತಿದೆ.

ಮಹಿಳೆಯರಿಬ್ಬರ ಆಡಿಯೊದಲ್ಲಿ ರಾಜ್ಯದ ಹಲವು ಮಠಾಧೀಶರು ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ಸಂಭಾಷಣೆಯಲ್ಲಿ ಆರೋಪಿಪಿಸಲಾಗಿದೆ ಎಂದು ಹೇಳಲಾಗಿದೆ.ಬೆಳಗಾವಿಯ ಮಹಿಳೆಯೊಬ್ಬರು ಗಂಗಾವತಿಯ ಇನ್ನೊಬ್ಬ ಮಹಿಳೆ ಜೊತೆಗೆ ಮೊಬೈಲ್‌ನಲ್ಲಿ ಮಾತನಾಡಿದ್ದಾರೆ. ಹೆಣ್ಮಕ್ಳನ್ನ ಲೈಂಗಿಕ ಚಟುವಟಿಕೆಗೆ ಬಳಸಿಕೊಳ್ಳುವ ರಾಜ್ಯದ ಮಠಗಳು, ಶ್ರೀಗಳ ಹೆಸರುಗಳನ್ನು ಬಹಿರಂವಾಗಿ ಹೇಳಿಕೊಂಡಿದ್ದಾಳೆ ಎಂದು ಹೇಳಲಾಗಿದೆ. ಈ ಕಾರಣದಿಂದಲೇ ಶ್ರೀಗಳು ಆತ್ಮಹತ್ಯೆ ಮಾಡಿಕೊಂಡಿರಬಹುದು ಶಂಕಿಸಲಾಗಿದೆ. ಆದರೆ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ವಾಮೀಜಿಯವರ ಆತ್ಮಹತ್ಯೆಗೆ ನಿಖರ ಕಾರಣ ಏನು ಎನ್ನುವುದನ್ನು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಪ್ರಮುಖ ಸುದ್ದಿ :-   ವೀಡಿಯೊ...| ಬೆಂಗಳೂರು : ತಡೆಗೋಡೆಗೆ ಟೆಂಪೋ ಡಿಕ್ಕಿ ; ವಾಹನವೇ ಅರ್ಧಕ್ಕೆ ತುಂಡು. ; ಸೇತುವೆಯಿಂದ ಕೆಳಕ್ಕೆ ಬಿದ್ದ ಕ್ಯಾಬಿನ್...!

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement