ಬಳ್ಳಾರಿ ಗ್ರಾಮಾಂತರದಲ್ಲೊಂದು ವಿಚಿತ್ರ ಘಟನೆ; ಮೃತ ಬಾಲಕನನ್ನು ಬದುಕಿಸಲು ದೇಹವನ್ನು ಉಪ್ಪಿನಲ್ಲಿಟ್ಟ ಗ್ರಾಮಸ್ಥರು….!

posted in: ರಾಜ್ಯ | 0

ಬಳ್ಳಾರಿ: ನೀರಿನ ಹೊಂಡದಲ್ಲಿ ಈಜಲು ಹೋಗಿದ್ದ ಬಾಲಕ ಸಾವಿಗೀಡಾಗಿದ್ದು, ಉಪ್ಪಿನ ರಾಶಿಯಲ್ಲಿ ಮಲಗಿಸಿದರೆ ಬದುಕಿ ಉಳಿಯುತ್ತಾನೆ ಎಂಬ ನಂಬಿಕೆಯಿಂದ ಬಾಲಕನ ಮೃತದೇಹವನ್ನು ಗಂಟೆಗಟ್ಟಲೆ ಉಪ್ಪಿನ ರಾಶಿ ಮಧ್ಯೆ ಮಲಗಿಸಿಟ್ಟ ಘಟನೆ ಬಳ್ಳಾರಿ ತಾಲೂಕಿನ ಸಿರವಾರ ಗ್ರಾಮದಲ್ಲಿ ನಡೆದ ಬಗ್ಗೆ ವರದಿಯಾಗಿದೆ.
ಸಿರವಾರ ಗ್ರಾಮದಲ್ಲಿ ನೀರಿನ ಹೊಂಡದಲ್ಲಿ ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಸುರೇಶ(10) ಎಂಬ ಬಾಲಕ ಮೃತಪಟ್ಟಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪೋಷಕರು, ಈ ರೀತಿ ಮೃತಪಟ್ಟವರನ್ನು ಉಪ್ಪಿನ ರಾಶಿಯಲ್ಲಿ ಮಲಗಿಸಿದರೆ ಬದುಕುತ್ತಾರೆಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ಮೇಸೆಜ್ ನಂಬಿ ನಾಲ್ಕೈದು ಚೀಲದಲ್ಲಿ ಉಪ್ಪು ತಂದು ಮೃತ ದೇಹವನ್ನು ಉಪ್ಪಿನಲ್ಲಿ ಮಲಗಿಸಿದ್ದಾರೆ.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

2 ಗಂಟೆಗಳ ಒಳಗೆ ಉಪ್ಪಿನಲ್ಲಿ ಹುದುಗಿಸಿಟ್ಟರೆ, ಅವರು ಮತ್ತೆ ಬದುಕುತ್ತಾರೆ ಎಂಬ ಪೋಸ್ಟ್ ಹರಿದಾಡಿತ್ತಂತೆ. ಅದನ್ನು ನಂಬಿ ಈ ರೀತಿ ಮಾಡಿದ್ದಾರೆ.
ನಾಲ್ಕೈದು ಚೀಲದಷ್ಟು ಉಪ್ಪು ತಂದು ಮೃತ ದೇಹವನ್ನು ಉಪ್ಪಿನ ರಾಶಿಯಲ್ಲಿ ಮಲಗಿಸಿ ಜೀವ ಉಳಿಸಿಕೊಳ್ಳಲು ಹತಾಶ ಪ್ರಯತ್ನ ಮಾಡಿದ್ದಾರೆ.ಐದಾರು ತಾಸುಗಳ ಕಾಲ ನೋಡಿದರೂ ಜೀವ ಅಲುಗಾಡದೇ ಇರುವುದನ್ನು ನೋಡಿ ಪೋಷಕರು ಬಾಲಕನ ಅಂತ್ಯಸಂಸ್ಕಾರ ಮಾಡಿದ್ದಾರೆ. ಹೇಗಿದ್ದರೂ ಸಾವಿಗೀಡಾಗಿದ್ದಾನೆ. ಬದುಕಿಸುವ ಒಂದು ಪ್ರಯತ್ನ ಮಾಡಿದರೆ ತಪ್ಪೇನು ಎಂದು ಕೆಲವರು ಸಹೆ ನೀಡಿದ್ದರಿಂದ ಈ ನಿರ್ಧಾರ ಕೈಗೊಂಡಿದ್ದರಂತೆ
ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದ ಪೋಸ್ಟ್ ನಂಬಿದ ಗ್ರಾಮಸ್ಥರು ವಿಲಕ್ಷಣ ಪ್ರಯೋಗಕ್ಕೆ ಮುಂದಾಗಿದ್ದರು. ಎಷ್ಟೇ ಮುಂದುವರೆದಿದ್ದರೂ ಸಾಮಾಜಿಕ ಜಾಲತಾಣದಲ್ಲಿ ಬರುವ ಅಸಂಬದ್ಧ ಪೋಸ್ಟ್‌ಗಳನ್ನು ನಂಬುವುದು ಮುಂದುವರಿದೇ ಇದೆ ಎಂಬುದಕ್ಕೆ ಇದೊಂದು ತಾಜಾ ನಿದರ್ಶನ.

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಓದಿರಿ :-   ಹೊನ್ನಾವರ ಪರಮೇಶ ಮೇಸ್ತ ಪ್ರಕರಣ: ಹತ್ಯೆಯಲ್ಲ, ಆಕಸ್ಮಿಕ ಸಾವು ; ಸಿಬಿಐ ವರದಿ ಸಲ್ಲಿಕೆ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

4.3 / 5. ಒಟ್ಟು ವೋಟುಗಳು 3

ನಿಮ್ಮ ಕಾಮೆಂಟ್ ಬರೆಯಿರಿ

advertisement