ಕಾರವಾರ: ಮಾಜಿ ಸಚಿವ ಪ್ರಭಾಕರ ರಾಣೆ ನಿಧನ

ಕಾರವಾರ: ಮಾಜಿ ಸಚಿವ ಪ್ರಭಾಕರ ರಾಣೆ ಇಂದು, ಸೋಮವಾರ ಮಧ್ಯಾಹ್ನ 1:30ಕ್ಕೆ ನಿಧನರಾಗಿದ್ದಾರೆ.
ಅವರಿಗೆ 81 ವರ್ಷ ವಯಸ್ಸಾಗಿತ್ತು. ವಯೋ ಸಹಜ ಕಾಯಿಲೆಗಳಿದ್ದ ಅವರು ಅಲ್ಪ ಕಾಲದ ಅಸ್ವಸ್ಥತೆಯಿಂದ ಬಳಲುತ್ತಿದ್ದರು.
ಸಿದ್ಧರದ ಮಲ್ಲಿಕಾರ್ಜುನ ಶಿಕ್ಷಣ ಸಂಸ್ಥೆಯಲ್ಲಿ ದೈಹಿಕ ಶಿಕ್ಷಕರಾಗಿ ಸೇವೆ ಆರಂಭಿಸಿದ್ದ ಅವರು ಶಿಕ್ಷಕರನ್ನು ಸಂಘಟಿಸಿದ್ದರು. ತಾಲೂಕಾ ಅಭಿವೃದ್ಧಿ ಮಂಡಳಿ ಸದಸ್ಯರಾಗಿ ರಾಜಕೀಯ ಪ್ರವೇಶಿಸಿದರು‌. 1983 ರಿಂದ ಮೂರು ಅವಧಿಗೆ ಕಾಂಗ್ರೆಸ್ ಪಕ್ಷದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ವೀರಪ್ಪ ಮೊಯ್ಲಿ ಸಚಿವ ಸಂಪುಟದಲ್ಲಿ ವಯಸ್ಕರ ಶಿಕ್ಷಣ ಮತ್ತು ಸಾಕ್ಷರತೆ ಶಿಕ್ಷಣ ಖಾತೆ ಸಚಿವರಾಗಿದ್ದರು. 1993ರಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದರು.

ಕಾರವಾರ ಜೊಯಿಡಾ ಶಾಸಕರಾಗಿ ಮೂರು ಅವಧಿ ಪೂರೈಸಿದ್ದ ಅವರು ೧೯೯೬ರಲ್ಲಿ ಸೋಲು ಅನುಭವಿಸಿದರು. ನಂತರ ಬಿಜೆಪಿಯಿಂದ ಸ್ಪರ್ಧಿಸಿ ಶಾಸಕ ವಸಂತ ಅಸ್ನೋಟಿಕರ್ ವಿರುದ್ಧ ಸೋಲು ಅನುಭವಿಸಿದರು. ನಂತರ ಜೆಡಿಎಸ್ ಸಹ ಸೇರಿದ್ದ ರಾಣೆ ಮತ್ತೆ ಸೋಲು ಕಂಡರು.
ರಾಣೆ ಭಾಪೂಜಿ ಗ್ರಾಮೀಣ ವಿಕಾಸ ಸಮಿತಿ ಸ್ಥಾಪಿಸಿ ಅದರ ಅಧ್ಯಕ್ಷರಾದರು. ಕಾರವಾರ ಜೊಯಿಡಾ ತಾಲೂಕಿನಲ್ಲಿ ಶಾಲಾ‌ ಕಾಲೇಜು ಸ್ಥಾಪಿಸಿದರು. ಬಡ ಕುಟುಂಬಗಳ ಮಕ್ಕಳು ಶಿಕ್ಷಣ ಬೆಳಕು ಕಾಣಲು ಕಾರಣರಾಗಿದ್ದರು. ಮಲ್ಲಿಕಾರ್ಜುನ ಶಿಕ್ಷಣ ಸಂಸ್ಥೆಯ ಅಧ್ಯಕ್ಷರೂ ಆಗಿದ್ದರು. ಜನ ಶಿಕ್ಷಣ ಸಂಸ್ಥಾನವನ್ನು ಉತ್ತರ ಕನ್ನಡದಲ್ಲಿ ಕ್ರಿಯಾಶೀಲಗೊಳಿಸಿದರು.
ಅವರ ನಿಧನಕ್ಕೆ ರಾಜಕೀಯ ಮುಖಂಡರು ಸಂತಾಪ ಸೂಚಿಸಿದ್ದಾರೆ.

ಪ್ರಮುಖ ಸುದ್ದಿ :-   ಎಸ್ ಎಸ್ ಎಲ್ ಸಿ ಪರೀಕ್ಷೆ ವಿದ್ಯಾರ್ಥಿಗಳ ಮಾರಾಮಾರಿ : ಚಾಕು ಇರಿತ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement