ನವೆಂಬರ್‌ 23ಕ್ಕೆ ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ವಿಚಾರಣೆ: ಅನುಭವಿ ಕಾನೂನು ತಜ್ಞರ ನೇಮಕ ಮಾಡ್ತೇವೆ ಎಂದ ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ಸುಪ್ರೀಂಕೋರ್ಟ್‌ನಲ್ಲಿ ನವೆಂಬರ್ 23ರಂದು ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ವಿಷಯ ವಿಚಾರಣೆಗೆ ಬರಲಿದ್ದು, ರಾಜ್ಯದ ಪರವಾಗಿ ವಾದ ಮಂಡಿಸಲು ಅನುಭವಿ ಹಾಗೂ ಹಿರಿಯ ಕಾನೂನು ತಜ್ಞರ ತಂಡವನ್ನು ನೇಮಕ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟ‌ನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಭಾನುವಾರ ಆಗಮಿಸಿದ್ದ ಅವರು, ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು ಗಡಿವಿವಾದ ಕುರಿತು ಅಡ್ವೊಕೇಟ್ ಜನರಲ್ ಅವರೊಂದಿಗೆ ಚರ್ಚಿಸಿ, ಅಗತ್ಯ ಸಲಹೆ ಸೂಚನೆ ನೀಡಲಾಗಿದೆ. ಸಾಕಷ್ಟು ಅಧ್ಯಯನ ಸಹ ನಡೆಸಲಾಗಿದೆ. ವಾದ ಮಂಡನೆಗೆ ಹಿರಿಯ, ಅನುಭವಿ ವಕೀಲರನ್ನು ನೇಮಿಸಲಾಗುತ್ತದೆ ಎಂದು ತಿಳಿಸಿದರು.

ವೃತ್ತಿಶಿಕ್ಷಣ ಪ್ರವೇಶಕ್ಕೆ ಸಿಇಟಿ ಅಂಕ ಪರಿಗಣನೆಗೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿರುವ ಆದೇಶ ಅಧ್ಯಯನ ಮಾಡಿ ವರದಿ ಸಲ್ಲಿಸಲು ಅಡ್ವೊಕೇಟ್ ಜನರಲ್ ಅವರಿಗೆ ಸೂಚಿಸಲಾಗಿದೆ. ಕಾನೂನು ತಜ್ಞರೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ಪೊಲೀಸ್ ಸಿಬ್ಬಂದಿಗೆ ಸಂಬಂಧಿಸಿದ ರಾಘವೇಂದ್ರ ಔರಾದ್ಕರ್‌ ವರದಿ ಅನುಷ್ಠಾನಗೊಳ್ಳುತ್ತಿದೆ. ಸಿಬ್ಬಂದಿಯೂ ಹೆಚ್ಚಿನ ಕೌಶಲ್ಯ ಬೆಳೆಸಿಕೊಳ್ಳಬೇಕು. ಕಂಪ್ಯೂಟರ್ ಶಿಕ್ಷಣ ಕಡ್ಡಾಯಗೊಳಿಸಲಾಗಿದೆ. ಎಲ್ಲ ಇಲಾಖೆಯ ಸಿಬ್ಬಂದಿಗೂ ಇದು ಕಡ್ಡಾಯವಾಗಿದೆ ಎಂದರು.

ಪ್ರಮುಖ ಸುದ್ದಿ :-   ಲೋಕಸಭಾ ಚುನಾವಣೆ 2024: ಕರ್ನಾಟಕದ 14 ಕ್ಷೇತ್ರಗಳಿಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭ

4 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement