ಬ್ರಿಟನ್ ಪ್ರಧಾನಿ ಹುದ್ದೆಗೆ ಲಿಜ್ ಟ್ರಸ್ ಆಯ್ಕೆ : ಭಾರತೀಯ ಮೂಲದ ರಿಷಿ ಸುನಕ್ ಜೊತೆ ತುರುಸಿನ ಸ್ಪರ್ಧೆಯಲ್ಲಿ ಜಯಿಸಿದ ಟ್ರಸ್‌

ಲಂಡನ್: ಬ್ರಿಟನ್‌ ವಿದೇಶಾಂಗ ಸಚಿವೆ ಮತ್ತು ಕನ್ಸರ್ವೇಟಿವ್ ಪಕ್ಷದ ನಾಯಕಿ ಲಿಜ್ ಟ್ರಸ್ ಅವರು ಬ್ರಿಟನ್ನಿನ ಮುಂದಿನ ಪ್ರಧಾನಿಯಾಗಿ ಸೋಮವಾರ ಆಯ್ಕೆಯಾಗಿದ್ದಾರೆ. ಲಿಜ್ ಟ್ರಸ್ ಅವರು ರಾಜೀನಾಮೆ ನೀಡಿದ್ದ ಬೋರಿಸ್ ಜಾನ್ಸನ್ ಅವರ ಉತ್ತರಾಧಿಕಾರಿಯಾಗಲಿದ್ದಾರೆ. ಟೋರಿ ನಾಯಕತ್ವ ಸ್ಪರ್ಧೆ ಗೆಲ್ಲಲು ಲಿಜ್ ಟ್ರಸ್ ತನ್ನ ಪ್ರತಿಸ್ಪರ್ಧಿ ಮಾಜಿ ಹಣಕಾಸು ಸಚಿವ ರಿಷಿ ಸುನಕ್ ಅವರನ್ನು ಸೋಲಿಸಿದರು.
ತನ್ನ ವಿಜಯದ ಭಾಷಣ ಮಾಡಿದ ಲಿಜ್ ಟ್ರಸ್, “ಕನ್ಸರ್ವೇಟಿವ್ ಪಕ್ಷದ ನಾಯಕಿಯಾಗಿ ಚುನಾಯಿತನಾಗಲು ನನಗೆ ಹೆಮ್ಮೆಯಿದೆ. ನಮ್ಮ ಮಹಾನ್ ದೇಶವನ್ನು ಮುನ್ನಡೆಸಲು ಮತ್ತು ನನ್ನ ಮೇಲೆ ನಂಬಿಕೆ ಇಟ್ಟಿದ್ದಕ್ಕಾಗಿ ಧನ್ಯವಾದಗಳು ಎಂದು ಹೇಳಿದ್ದಾರೆ.
ಬ್ರಿಟನ್‌ ಮಾಜಿ ಪ್ರಧಾನಿಯನ್ನು ಉಲ್ಲೇಖಿಸಿ ಲಿಜ್ ಟ್ರಸ್, “ಬೋರಿಸ್ (ಜಾನ್ಸನ್), ನೀವು ಬ್ರೆಕ್ಸಿಟ್ ಅನ್ನು ಪೂರ್ಣಗೊಳಿಸಿದ್ದೀರಿ, ನೀವು ಜೆರೆಮಿ ಕಾರ್ಬಿನ್ ಅವರನ್ನು ಪುಡಿಮಾಡಿದ್ದೀರಿ, ನೀವು ಲಸಿಕೆಯನ್ನು ಹೊರತಂದಿದ್ದೀರಿ ಮತ್ತು ನೀವು ವ್ಲಾಡಿಮಿರ್ ಪುಟಿನ್ ವಿರುದ್ಧ ನಿಂತಿದ್ದೀರಿ” ಎಂದು ಹೇಳಿದರು.ಬೋರಿಸ್ ಜಾನ್ಸನ್ ಬ್ರಿಟನ್ ಪ್ರಧಾನಿ ಸ್ಥಾನದಿಂದ ಕೆಳಗಿಳಿದ ಬಳಿಕ ಮುಂದಿನ ಪ್ರಧಾನಿ ಯಾರಾಗುತ್ತಾರೆ ಎಂಬ ಪ್ರಶ್ನೆ ಮನೆಮಾಡಿತ್ತು. ಬಳಿಕ ಭಾರತ ಮೂಲದ ರಿಷಿ ಸುನಾಕ್ ರಕ್ಷಣಾ ಕಾರ್ಯದರ್ಶಿ ಬೆನ್ ವ್ಯಾಲೇಸ್, ವಿದೇಶಾಂಗ ಕಾರ್ಯದರ್ಶಿ ಲಿಜ್ ಟ್ರಸ್, ಮಾಜಿ ಆರೋಗ್ಯ ಕಾರ್ಯದರ್ಶಿ ಸಾಜಿದ್ ಜಾವಿದ್ ಪ್ರಧಾನಿ ಹುದ್ದೆಗೆ ಸ್ಫರ್ಧಿಸಿದ್ದರು. ಇವರಲ್ಲಿ ರಿಷಿ ಸುನಕ್ ಮತ್ತು ಲಿಜ್ ಟ್ರಸ್ ಅಂತಿಮ ಸುತ್ತಿಗೆ ಆಯ್ಕೆಯಾಗಿದ್ದರು.

ಪ್ರಮುಖ ಸುದ್ದಿ :-   ಕೋಟಿಗಟ್ಟಲೆ ಬೆಲೆಗೆ ಮಾರಾಟವಾಗಿ ನೂತನ ದಾಖಲೆ ನಿರ್ಮಿಸಿದ ಭಾರತದ ಮೂಲದ ಈ ತಳಿಯ ಹಸು..! ಬೆಲೆ ಕೇಳಿದ್ರೆ ದಂಗಾಗ್ತೀರಾ...!!

ಅಂತಿಮ ಸುತ್ತಿನಲ್ಲಿ ರಿಷಿ ಸುನಾಕ್ ಮತ್ತು ಲಿಜ್ ಟ್ರಸ್ ನಡುವೆ ಬಾರಿ ಪೈಪೋಟಿ ಇತ್ತು. ಅಂತಿಮವಾಗಿ ಲಿಜ್ ಟ್ರಸ್ 81,326 ಮತಗಳನ್ನು ಪಡೆದು ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ಬ್ರಿಟನ್‍ನ ಮೂರನೇ ಮಹಿಳಾ ಪ್ರಧಾನಿಯಾಗಿ ಲೀಜ್ ಟ್ರಸ್ ಆಯ್ಕೆಯಾಗಿದ್ದಾರೆ. ರಿಷಿ ಸುನಕ್ 60,399 ಮತಗಳನ್ನು ಪಡೆದು ಪರಾಭವಗೊಂಡರು.

ರಿಷಿ ಸುನಕ್ ಇನ್ಫೋಸಿಸ್ ಸಂಸ್ಥಾಪಕ ಎನ್.ಆರ್ ನಾರಾಯಣ ಮೂರ್ತಿಯವರ ಪುತ್ರಿ ಅಕ್ಷತಾ ಮೂರ್ತಿ ಅವರನ್ನು ಮದುವೆಯಾಗಿದ್ದಾರೆ ಹಾಗೂ ಬ್ರಿಟನ್‍ನಲ್ಲಿ ಅತ್ಯಂತ ಪ್ರಭಾವಿ ವ್ಯಕ್ತಿಯಾಗಿದ್ದರು. ಇವರಿಗೆ ಬೋರಿಸ್ ಜಾನ್ಸನ್ 2020ರಲ್ಲಿ ಮೊದಲ ಬಾರಿಗೆ ಪೂರ್ಣ ಕ್ಯಾಬೆನೆಟ್ ಸ್ಥಾನ ನೀಡಿದ್ದರು. ಹಣಕಾಸು ಸಚಿವರಾಗಿ ಬೋರಿಸ್ ಜಾನ್ಸನ್ ಸರ್ಕಾರದಲ್ಲಿ ರಿಷಿ ಸುನಾಕ್ ಕೋವಿಡ್‌ ಸಮಯದಲ್ಲಿ ತೆಗೆದುಕೊಂಡ ನಿರ್ಧಾರಗಳು ಭಾರೀ ಪ್ರಶಂಸೆಗೆ ಕಾರಣವಾಗಿತ್ತು.
ಆ ಬಳಿಕ ಬೋರಿಸ್ ಜಾನ್ಸನ್ ವಿರುದ್ಧ ಭಿನ್ನಾಭಿಪ್ರಾಯದಿಂದ ಸಾಜಿದ್ ಜಾವೇಜ್ ರಾಜೀನಾಮೆ ನೀಡಿದ ಬೆನ್ನಲ್ಲೇ ರಿಷಿ ಸುನಕ್ ಕೂಡ ಹಣಕಾಸು ಖಾತೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆ ಬಳಿಕ ಪ್ರಧಾನಿ ಹುದ್ದೆಗೆ ಸ್ಫರ್ಧಿಸಿ ಅಂತಿಮ ಸುತ್ತಿಗೆ ಆಯ್ಕೆಗೊಂಡಿದ್ದರು.
ಪ್ರಧಾನಿ ಬೋರಿಸ್ ಜಾನ್ಸನ್ ಜುಲೈ 7 ರಂದು ಕನ್ಸರ್ವೇಟಿವ್ ಪಕ್ಷದ ನಾಯಕತ್ವವನ್ನು ತ್ಯಜಿಸುವುದಾಗಿ ಘೋಷಿಸಿ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿದ್ದರು. ಈಗ ಅವರ ಸ್ಥಾನಕ್ಕೆ ನೂತನ ಪ್ರಧಾನಿಯಾಗಿ ಲಿಜ್ ಟ್ರಸ್ ಆಯ್ಕೆಗೊಂಡಿದ್ದಾರೆ.

ಪ್ರಮುಖ ಸುದ್ದಿ :-   ಕೋಟಿಗಟ್ಟಲೆ ಬೆಲೆಗೆ ಮಾರಾಟವಾಗಿ ನೂತನ ದಾಖಲೆ ನಿರ್ಮಿಸಿದ ಭಾರತದ ಮೂಲದ ಈ ತಳಿಯ ಹಸು..! ಬೆಲೆ ಕೇಳಿದ್ರೆ ದಂಗಾಗ್ತೀರಾ...!!

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement