ಮಳೆ ಹಾನಿ ಅಧ್ಯಯನಕ್ಕೆ ಕೇಂದ್ರದಿಂದ 3 ತಂಡಗಳು ; ಸೆಪ್ಟೆಂಬರ್‌ 7ರಿಂದ ಬಾಧಿತ ಜಿಲ್ಲೆಗಳಿಗೆ ಭೇಟಿ

ಬೆಂಗಳೂರು: ರಾಜ್ಯದಲ್ಲಿ ನಿರಂತರ ಮಳೆಯಿಂದ ಆಗಿರುವ ಹಾನಿ ಬಗ್ಗೆ ಅಧ್ಯಯನ ನಡೆಸಲು ಕೇಂದ್ರದ ಹಿರಿಯ ಅಧಿಕಾರಿಗಳ ಮೂರು ತಂಡಗಳು ಬರಲಿದ್ದು, ಸೆಪ್ಟೆಂಬರ್‌ 7 ರಿಂದ 9ರ ವರೆಗೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿವೆ.
ಮಾಧ್ಯಮದವರ ಜೊತೆ ಮಾತನಾಡಿದ ಕಂದಾಯ ಸಚಿವ ಆರ್‌.ಅಶೋಕ, ಜುಲೈ ಮತ್ತು ಆಗಸ್ಟ್‌ನಲ್ಲಿ ಮಳೆ ಮತ್ತು ಪ್ರವಾಹದಿಂದ ಆಗಿರುವ ಬೆಳೆ ನಷ್ಟ ಮತ್ತು ಮೂಲಸೌಕರ್ಯಗಳಿಗೆ ಆಗಿರುವ ಹಾನಿಯ ಬಗ್ಗೆ ಈ ತಂಡಗಳು ಮಾಹಿತಿ ಕಲೆ ಹಾಕಲಿವೆ ಎಂದು ತಿಳಿಸಿದರು.
ಕೇಂದ್ರ ಗೃಹ ಇಲಾಖೆ ಜಂಟಿ ಕಾರ್ಯದರ್ಶಿ ಆಶಿಶ್‌ ಕುಮಾರ್‌ ಅವರ ನೇತೃತ್ವದಲ್ಲಿ ಮೂರು ತಂಡಗಳು ರಾಜ್ಯದ ವಿವಿಧ ಜಿಲ್ಲೆಗಳಿಗೆ ಭೇಟಿ ನೀಡಲಿದ್ದು, ಕೇಂದ್ರ ಜಲ ಆಯೋಗದ ಹಿರಿಯ ಅಧಿಕಾರಿ ಅಶೋಕ್ ಕುಮಾರ್‌ ಮತ್ತು ಕೃಷಿ ಹಾಗೂ ರೈತರ ಕಲ್ಯಾಣ ಇಲಾಖೆ ನಿರ್ದೇಶಕ ಡಾ.ಕೆ.ಮನೋಹರನ್ ಇನ್ನೆರಡು ತಂಡಗಳಲ್ಲಿ ಇರಲಿದ್ದಾರೆ ಎಂದು ಮಾಹಿತಿ ನೀಡಿದರು.
ಆಶಿಶ್‌ ಕುಮಾರ್‌ ನೇತೃತ್ವದ ತಂಡ ಚಿಕ್ಕಮಗಳೂರು, ಹಾಸನ ಮತ್ತು ಚಿತ್ರದುರ್ಗ, ಜಿಲ್ಲೆಗಳಿಗೆ, ಅಶೋಕ್‌ ಕುಮಾರ್‌ ತಂಡ ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಿಗೆ ಹಾಗೂ ಕೆ.ಮನೋಹರನ್ ತಂಡ ಬೀದರ್‌, ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಿಗೆ ಭೇಟಿ ನೀಡಲಿವೆ ಎಂದರು ಹೇಳಿದರು.

ಪ್ರಮುಖ ಸುದ್ದಿ :-   ಗದಗ: ನಗರಸಭೆ ಅಧ್ಯಕ್ಷೆ ಪುತ್ರ ಸೇರಿ ನಾಲ್ವರ ಭೀಕರ ಹತ್ಯೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement