ಕಾರಿನ ಹಿಂಬದಿ ಸೀಟಿನಲ್ಲಿ ಕುಳಿತವರು ಸೀಟ್ ಬೆಲ್ಟ್ ಹಾಕದಿದ್ದರೆ ದಂಡ: ಸೈರಸ್ ಮಿಸ್ತ್ರಿ ಅಪಘಾತದ ನಂತರ ನಿತಿನ್ ಗಡ್ಕರಿ ಹೇಳಿಕೆ

ನವದೆಹಲಿ: ಕಾರಿನ ಹಿಂಬದಿ ಸೀಟಿನಲ್ಲಿ ಕುಳಿತು ಸೀಟ್ ಬೆಲ್ಟ್ ಧರಿಸದವರಿಗೆ ಶೀಘ್ರದಲ್ಲೇ ದಂಡ ವಿಧಿಸಲಾಗುವುದು ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಪ್ರಕಟಿಸಿದ್ದಾರೆ. ಮಂಗಳವಾರ ಮುಂಬೈ ಬಳಿ ಕಾರು ಅಪಘಾತದಲ್ಲಿ ಟಾಟಾ ಸನ್ಸ್‌ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ ಮೃತಪಟ್ಟ ಎರಡು ದಿನಗಳ ನಂತರ ಈ ಹೇಳಿಕೆ ಬಂದಿದೆ. ಟಾಟಾ ಸನ್ಸ್‌ನ ಮಾಜಿ ಅಧ್ಯಕ್ಷ … Continued

ಮಳೆ; ಬುಧವಾರ ಬೆಂಗಳೂರು ಪೂರ್ವ ತಾಲೂಕು ವ್ಯಾಪ್ತಿಯ ಶಾಲೆಗಳಿಗೆ ರಜೆ

ಬೆಂಗಳೂರು: ನಗರದಲ್ಲಿ ಭಾರೀ ಮಳೆಯಿಂದಾಗಿ ಹಲವು ಪ್ರದೇಶಗಳು ಜಲಾವೃತಗೊಂಡಿವೆ. ಅದರಲ್ಲಿಯೂ ಬೆಂಗಳೂರು ಪೂರ್ವ ತಾಲೂಕಿನಲ್ಲಿ ಮಳೆ ಹೆಚ್ಚಾಗಿದೆ. ಹೀಗಾಗಿ ಬೆಂಗಳೂರು ಪೂರ್ವ ತಾಲೂಕಿನ ವ್ಯಾಪ್ತಿಯ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಬುಧವಾರ (ಸೆಪ್ಟೆಂಬರ್ 7ರಂದು) ರಜೆ ಘೋಷಿಸಲಾಗಿದೆ. ಬುಧವಾರ ಸರ್ಕಾರಿ, ಅನುದಾನಿತ, ಅನುದಾನರಹಿತ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಕ್ಷೇತ್ರ … Continued

ಮಿಮ್ಸ್‌ ಸಿಬ್ಬಂದಿ ಎಡವಟ್ಟು: ಗ್ಯಾಂಗ್ರೀನ್ ಶಸ್ತ್ರಚಿಕಿತ್ಸೆಯಲ್ಲಿ ಕತ್ತರಿಸಿದ ಕಾಲು ತಂದು ರೋಗಿಯ ಪತ್ನಿಯ ಕೈಗಿತ್ತರು ..!

ಮಂಡ್ಯ: ಗ್ಯಾಂಗ್ರೀನ್ ಹಿನ್ನೆಲೆಯಲ್ಲಿ ಶಸ್ತ್ರಚಿಕಿತ್ಸೆ ಮಾಡಿ ಕತ್ತರಿಸಿದ್ದ ರೋಗಿಯ ಕಾಲನ್ನು ಮಣ್ಣು ಮಾಡುವಂತೆ ಪತ್ನಿ ಕೈಗೆ ಕೊಟ್ಟ ಘಟನೆ ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಮಿಮ್ಸ್)ಯಲ್ಲಿ ಮಂಗಳವಾರ ನಡೆದ ಬಗ್ಗೆ ವರದಿಯಾಗಿದೆ. ತಾಲೂಕಿನ ಕೀಲಾರ ಗ್ರಾಮದ ಭಾಗ್ಯಮ್ಮ ಎಂಬವರ ಪತಿ ಪ್ರಕಾಶ ಅವರ ಕಾಲಿಗೆ ಗ್ಯಾಂಗ್ರೀನ್ ಆಗಿದ್ದ ಕಾರಣ ಅವರನ್ನು ಮಂಗಳವಾರ ಮಿಮ್ಸ್‌ನಲ್ಲಿ‌ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಆತನ … Continued

ಪಿಎಸ್‌ಐ ನೇಮಕಾತಿ ಹಗರಣ: ಆಡಿಯೋ ಕ್ಲಿಪ್‌ನಿಂದ ಸಂಕಷ್ಟಕ್ಕೆ ಸಿಲುಕಿದ ಬಿಜೆಪಿ ಶಾಸಕ

ಬೆಂಗಳೂರು: ಪಿಎಸ್‌ಐ (ಪೊಲೀಸ್ ಸಬ್‌ಇನ್ಸ್‌ಪೆಕ್ಟರ್) ನೇಮಕಾತಿ ಹಗರಣದ ತನಿಖೆ ನಡೆಸುತ್ತಿರುವ ಏಜೆನ್ಸಿಗಳು ಬಿಜೆಪಿ ಶಾಸಕರೊಬ್ಬರು ಪೊಲೀಸ್ ಸಬ್‌ಇನ್‌ಸ್ಪೆಕ್ಟರ್ ಹುದ್ದೆಗೆ ಆಕಾಂಕ್ಷಿಯೊಬ್ಬರಿಗೆ ಸಹಾಯ ಮಾಡಲು 15 ಲಕ್ಷ ರೂಪಾಯಿ ಪಡೆದಿರುವ ಆಡಿಯೊ ಕ್ಲಿಪ್‌ಗಳ ಬಗ್ಗೆಯೂ ತನಿಖೆ ನಡೆಸಬಹುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ಹೇಳಿದ್ದಾರೆ. ಆಡಿಯೋ ಸಂವಾದದಲ್ಲಿ, ಪಿಎಸ್ಐ ಅಭ್ಯರ್ಥಿಯ ತಂದೆ ಎಂದು ಹೇಳಿಕೊಳ್ಳುವ ಪರಸಪ್ಪ … Continued

ಮಿಷನ್ 2024: 144 ‘ದುರ್ಬಲ’ ಲೋಕಸಭಾ ಕ್ಷೇತ್ರಗಳ ಮಾರ್ಗಸೂಚಿ ಚರ್ಚಿಸಲು ಬಿಜೆಪಿ ನಾಯಕರನ್ನು ಭೇಟಿಯಾದ ನಡ್ಡಾ, ಅಮಿತ್‌ ಶಾ

ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು 2024 ರ ಚುನಾವಣೆಯಲ್ಲಿ 144 ಲೋಕಸಭಾ ಕ್ಷೇತ್ರಗಳಲ್ಲಿ ತನ್ನ ವೃದ್ಧಿಸಿಕೊಳ್ಳುವ ಕುರಿತು ಪಕ್ಷದ ಪ್ರಮುಖ ನಾಯಕರೊಂದಿಗೆ ಮಂಗಳವಾರ ಚರ್ಚೆ ನಡೆಸಿದರು. ಭೂಪೇಂದರ್ ಯಾದವ್, ಗಿರಿರಾಜ್ ಸಿಂಗ್, ಸ್ಮೃತಿ ಇರಾನಿ, ಪರ್ಷೋತ್ತಮ್ ರೂಪಾಲಾ ಮತ್ತು ಗಜೇಂದ್ರ ಸಿಂಗ್ ಶೇಖಾವತ್ … Continued

ಸಮೋಸಾ ಅಂಗಡಿಯಲ್ಲಿ ಬೌಲ್-ಸ್ಪೂನ್ ಕೊಡ್ತಾ ಇಲ್ಲ : ಸಿಎಂ ಸಹಾಯವಾಣಿಗೆ ಕರೆ ಮಾಡಿ ದೂರು ನೀಡಿದ ಈ ಮಹಾಶಯ..!

ವಿಲಕ್ಷಣ ಘಟನೆಯೊಂದರಲ್ಲಿ ಛತ್ತರ್‌ಪುರ ಬಸ್ ನಿಲ್ದಾಣದ ರಾಕೇಶ್ ಸಮೋಸಾ ಹೆಸರಿನ ಅಂಗಡಿಯ ವಿರುದ್ಧ ವ್ಯಕ್ತಿಯೊಬ್ಬರು ದೂರು ದಾಖಲಿಸಲು ವ್ಯಕ್ತಿಯೊಬ್ಬರು ಮಧ್ಯಪ್ರದೇಶ ಮುಖ್ಯಮಂತ್ರಿಯ ಸಹಾಯವಾಣಿ ಸಂಖ್ಯೆಗೆ ಫೋನ್ ಮಾಡಿದ್ದಾರೆ. ಸುದ್ದಿ ಪ್ರಕಾರ, ಉಪಾಹಾರ ಗೃಹದಲ್ಲಿನ ಕಳಪೆ ಸೇವೆಗಳ ಬಗ್ಗೆ ಮತ್ತು ‘ಸಮೋಸ’ಕ್ಕೆ ಸಂಬಂಧಿಸಿದಂತೆ ದೂರು ದಾಖಲಿಸಲು ವ್ಯಕ್ತಿಯೊಬ್ಬರು ಮುಖ್ಯಮಂತ್ರಿಯ ಸಹಾಯವಾಣಿಗೆ ಕರೆ ಮಾಡಿದ್ದಾರೆ…! ಮುಖ್ಯಮಂತ್ರಿಗಳ ಸಹಾಯವಾಣಿ ಸಂಖ್ಯೆಯನ್ನು … Continued

ಬೆಂಗಳೂರಿನಲ್ಲಿ ಬುಲ್ಡೋಜರ್‌ ಮೇಲೆ ನೀರು ತುಂಬಿದ ರಸ್ತೆ ದಾಟಿದ ಜನರು: ವೀಡಿಯೋ ಹಂಚಿಕೊಂಡ ಆನಂದ್ ಮಹೀಂದ್ರಾ | ವೀಕ್ಷಿಸಿ

ಬೆಂಗಳೂರಿನಲ್ಲಿ ಭಾನುವಾರದಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ರಸ್ತೆಗಳು ನದಿಗಳಾಗಿ ಮಾರ್ಪಟ್ಟಿವೆ. ಮತ್ತೆ ಭಾರೀ ಮಳೆಯ ಮುನ್ಸೂಚನೆಯೊಂದಿಗೆ, ನಗರದ ನಿವಾಸಿಗಳು ಭಯದ ನಡುವೆಯೇ ಸುರಕ್ಷಿತ ಸ್ಥಳಗಳಿಗೆ ತೆರಳುತ್ತಿದ್ದಾರೆ ಅಥವಾ ಸುರಕ್ಷಿತ ಸ್ಥಳ ಕಂಡುಕೊಳ್ಳುತ್ತಿದ್ದಾರೆ. ಆದರೆ, ಮಳೆಯಾಗಲಿ, ಬಿಸಿಲಾಗಲಿ ಕೆಲಸವಂತೂ ನಿಲ್ಲುವುದಿಲ್ಲ. ಬೆಂಗಳೂರಿನ ಜನರು ಈ ಕಲ್ಪನೆಯನ್ನು ಸಾಬೀತುಪಡಿಸಿದ್ದಾರೆ. ಇದಕ್ಕೆ ನಿದರ್ಶನವೆಂಬಂತೆ ಕೆಲವರು ಬುಲ್ಡೋಜರ್ ಮೇಲೆ ಕುಳಿತು ನೀರು … Continued

ಭಾರತ-ಬಾಂಗ್ಲಾದೇಶ ಏಳು ಒಪ್ಪಂದಗಳಿಗೆ ಸಹಿ : ಪ್ರಧಾನಿ ಮೋದಿ ನೇತೃತ್ವದಲ್ಲಿ ಉಭಯ ದೇಶಗಳ ಎಲ್ಲ ಸಮಸ್ಯೆಗಳಿಗೆ ಪರಿಹಾರ- ಶೇಖ್ ಹಸೀನಾ ವಿಶ್ವಾಸ

ನವದೆಹಲಿ: ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವವನ್ನು ಶ್ಲಾಘಿಸಿದ್ದಾರೆ ಮತ್ತು ಉಭಯ ರಾಷ್ಟ್ರಗಳ ನಡುವಿನ ದ್ವಿಪಕ್ಷೀಯ ಸಂಬಂಧಗಳ ಬೆಳವಣಿಗೆಯಲ್ಲಿ ಇದು ವೇಗ ಮುಂದುವರೆಸಿದೆ ಎಂದು ಹೇಳಿದ್ದಾರೆ. ನಾಲ್ಕು ದಿನಗಳ ಭಾರತ ಪ್ರವಾಸ ಕೈಗೊಂಡಿರುವ ಶೇಖ್ ಹಸೀನಾ ಸೋಮವಾರ ಮಧ್ಯಾಹ್ನ ದೆಹಲಿಗೆ ಬಂದಿದ್ದಾರೆ. ದಕ್ಷಿಣ ಅಸ್ಸಾಂ ಮತ್ತು ಬಾಂಗ್ಲಾದೇಶದ ಸಿಲ್ಹೆಟ್ ಪ್ರದೇಶದ … Continued

ಕಾರು ಅಪಘಾತದಲ್ಲಿ ಸೈರಸ್ ಮಿಸ್ತ್ರಿ ಸಾವಿನ ಬಗ್ಗೆ ವೈದ್ಯರು ಹೇಳಿದ್ದೇನು?

ಮುಂಬೈ: ಟಾಟಾ ಸನ್ಸ್ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ ಅವರು ಮುಂಬೈ ಬಳಿ ಭಾನುವಾರ ಸಂಭವಿಸಿದ ಕಾರು ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಅಪಘಾತದ ನಂತರ, ಮಿಸ್ತ್ರಿ ಅವರನ್ನು ಕಾಸಾದ ಸರ್ಕಾರಿ ಆಸ್ಪತ್ರೆಗೆ ಕರೆತರಲಾಯಿತು, ಮತ್ತು ಅವರಿಗೆ ಚಿಕಿತ್ಸೆ ನೀಡಿದ ವೈದ್ಯರು ಅವರು “ಸತ್ತಿದ್ದಾರೆ ಎಂದು ಘೋಷಿಸಿದರು. ಪಾಲ್ಘರ್ ಪೊಲೀಸರ ಪ್ರಕಾರ, ಸೈರಸ್ ಮಿಸ್ತ್ರಿ ಅಹಮದಾಬಾದ್‌ನಿಂದ ಮುಂಬೈಗೆ ಪ್ರಯಾಣಿಸುತ್ತಿದ್ದಾಗ … Continued

ದೆಹಲಿ ಅಬಕಾರಿ ನೀತಿ ಪ್ರಕರಣ: ದೆಹಲಿ ಸೇರಿ ಆರು ರಾಜ್ಯಗಳ 30 ಸ್ಥಳಗಳ ಮೇಲೆ ಇಡಿ ದಾಳಿ

ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣದ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯ ಇಂದು ಹಲವು ಸ್ಥಳಗಳಲ್ಲಿ ದಾಳಿ ನಡೆಸಿದೆ. ಉತ್ತರ ಪ್ರದೇಶ, ಪಂಜಾಬ್, ಹರಿಯಾಣ, ತೆಲಂಗಾಣ, ಕರ್ನಾಟಕ ಮತ್ತು ಮಹಾರಾಷ್ಟ್ರದ ಹಲವಾರು ನಗರಗಳಲ್ಲದೆ ರಾಷ್ಟ್ರ ರಾಜಧಾನಿಯಲ್ಲಿ ಇಡಿ ದಾಳಿಗಳು ನಡೆಯುತ್ತಿವೆ ಎಂದು ಸುದ್ದಿ ಸಂಸ್ಥೆಗಳು ವರದಿ ಮಾಡಿವೆ. ಶೋಧಿಸಲಾಗುತ್ತಿರುವ ಸ್ಥಳಗಳಲ್ಲಿ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ … Continued