ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ: 32 ಕಡೆ ದಾಳಿ ನಡೆಸಿದ ಎನ್‌ಐಎ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿ ನಡೆದಿದ್ದ ಬಿಜೆಪಿ ಕಾರ್ಯಕರ್ತ ಪ್ರವೀಣ ‌ನೆಟ್ಟಾರು ಹತ್ಯೆ ಪ್ರಕರಣ ಸಂಬಂಧಿಸಿದಂತೆ ಎನ್​ಐಎ ಅಧಿಕಾರಿಗಳ ತಂಡ ಪುತ್ತೂರು, ಸುಳ್ಯ ತಾಲೂಕಿನ ವಿವಿಧ ಕಡೆಗಳಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದೆ.
ಎರಡು ತಿಂಗಳ ಹಿಂದೆ ದುಷ್ಕರ್ಮಿಗಳ ಚೂಕು ಇರಿತಕ್ಕೆ ಮೃತಪಟ್ಟಿದ್ದ ಪ್ರವೀಣ ನೆಟ್ಟಾರು ಹತ್ಯೆ ತನಿಖೆಯನ್ನು ಎನ್‌ಐಎ ತಂಡ ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ಕೆಲವು ಮಾಹಿತಿಯನ್ನಾಧರಿಸಿ 32 ಕಡೆ ಮನೆ ಹಾಗೂ ಕೆಲ‌ ಖಾಸಗಿ ಕಟ್ಟಡಗಳ ಮೇಲೆ ಎನ್ಐಎ ದಾಳಿ ನಡೆಸಿದೆ. ಘಟನೆಗೆ ಸಂಬಂಧಿಸಿ ಆರೋಪಿಗಳು ಮತ್ತು ಆರೋಪಿಗಳಿಗೆ ಸಹಕರಿಸಿದವರ ವಿಚಾರಣೆಗೆ ಒಳಪಡಿಸಿದೆ ಎಂದು ತಿಳಿದುಬಂದಿದೆ.

ಎನ್​ಐಎ ಅಧಿಕಾರಿಗಳ ತಂಡಕ್ಕೆ ರಾಜ್ಯ ಪೊಲೀಸರು ಸಹಕಾರ ನೀಡುತ್ತಿದ್ದಾರೆ.10ಕ್ಕೂ ಹೆಚ್ಚು ವಾಹನಗಳಲ್ಲಿ ಬಂದಿರುವ ಅಧಿಕಾರಿಗಳು, ಬೆಳಿಗ್ಗೆ 6 ಗಂಟೆಯಿಂದಲೇ ತನಿಖೆ ಆರಂಭಿಸಿದ್ದಾರೆ.
ಘಟನೆ ಹಿನ್ನೆಲೆ
ಕೋಳಿ ಮಾಂಸದ ಅಂಗಡಿ ಇಟ್ಟುಕೊಂಡಿದ್ದ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ ನೆಟ್ಟಾರು ಜುಲೈ 26 ರಂದು ರಾತ್ರಿ 8 ಗಂಟೆ ಸುಮಾರಿಗೆ ಅಂಗಡಿ ಮುಚ್ಚುವಾಗ ಬೈಕಿನಲ್ಲಿ ಬಂದಿದ್ದ ಮೂವರು ತಲ್ವಾರ್‌ನಿಂದ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿದ್ದರು. ತಕ್ಷಣವೇ ಅವರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಿದರೂ ಕುತ್ತಿಗೆಯ ಭಾಗಕ್ಕೆ ತೀವ್ರ ಏಟು ಬಿದ್ದಿದ್ದ ಕಾರಣ ಪ್ರವೀಣ ಮೃತಪಟ್ಟಿದ್ದರು.

ಪ್ರಮುಖ ಸುದ್ದಿ :-   ಬೆಂಗಳೂರು: ಕುದುರೆಯೊಂದರಲ್ಲಿ ಗ್ಲಾಂಡರ್ಸ್ ರೋಗ ಪತ್ತೆ ; ಡಿಜಿ ಹಳ್ಳಿ ನಿಷೇಧಿತ ವಲಯವೆಂದು ಘೋಷಣೆ

 

4 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement