ಮಳೆ; ಬುಧವಾರ ಬೆಂಗಳೂರು ಪೂರ್ವ ತಾಲೂಕು ವ್ಯಾಪ್ತಿಯ ಶಾಲೆಗಳಿಗೆ ರಜೆ

ಬೆಂಗಳೂರು: ನಗರದಲ್ಲಿ ಭಾರೀ ಮಳೆಯಿಂದಾಗಿ ಹಲವು ಪ್ರದೇಶಗಳು ಜಲಾವೃತಗೊಂಡಿವೆ. ಅದರಲ್ಲಿಯೂ ಬೆಂಗಳೂರು ಪೂರ್ವ ತಾಲೂಕಿನಲ್ಲಿ ಮಳೆ ಹೆಚ್ಚಾಗಿದೆ. ಹೀಗಾಗಿ ಬೆಂಗಳೂರು ಪೂರ್ವ ತಾಲೂಕಿನ ವ್ಯಾಪ್ತಿಯ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಬುಧವಾರ (ಸೆಪ್ಟೆಂಬರ್ 7ರಂದು) ರಜೆ ಘೋಷಿಸಲಾಗಿದೆ.
ಬುಧವಾರ ಸರ್ಕಾರಿ, ಅನುದಾನಿತ, ಅನುದಾನರಹಿತ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಓ) ಆದೇಶ ಹೊರಡಿಸಿದ್ದಾರೆ.
ಬೆಂಗಳೂರು ಪೂರ್ವ ತಾಲೂಕು ಕೆ.ಆರ್.ಪುರಂ ದಕ್ಷಿಣ ವಲಯ-4ಕ್ಕೆ ಒಳಪಡುವ ಎಲ್ಲಾ ಸರ್ಕಾರಿ ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ರಜೆಯನ್ನು ಸರಿದೂಗಿಸಲು ಮುಂದಿನ ಎರಡು ಶನಿವಾರಗಳಂದು ಪೂರ್ಣ ದಿನ ತರಗತಿ ನಡೆಯಲಿದೆ ಎಂದು ಬಿಇಒ ಆದೇಶದಲ್ಲಿ ತಿಳಿಸಿದ್ದಾರೆ.

 

5 / 5. 2

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಕುಮಟಾ : ಬಾಡದಲ್ಲಿ ಚಿರತೆ ದಾಳಿಗೆ ಇಬ್ಬರಿಗೆ ಗಾಯ ; ಮನೆಯೊಳಗೆ ನುಗ್ಗಿ ಅವಿತುಕೊಂಡ ಚಿರತೆ

ನಿಮ್ಮ ಕಾಮೆಂಟ್ ಬರೆಯಿರಿ

advertisement