ಮೈಸೂರು ಪಾಲಿಕೆಯಲ್ಲಿ ಬಿಜೆಪಿ-ಜೆಡಿಎಸ್ ದೋಸ್ತಿ: ಬಿಜೆಪಿಯ ಶಿವಕುಮಾರ್ ಮೇಯರ್ ಆಗಿ ಆಯ್ಕೆ

ಮೈಸೂರು: ಮೈಸೂರು ಮಹಾನಗರ ಪಾಲಿಕೆಯಲ್ಲಿ ಬಿಜೆಪಿಗೆ ಅಧಿಕಾರದ ಗದ್ದುಗೆ ಏರಿದೆ. ಮೈಸೂರು ಮಹಾನಗರಪಾಲಿಕೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು ಮೈಸೂರು ನಗರ ಪಾಲಿಕೆ ಮೇಯರ್​ ಆಗಿ ಬಿಜೆಪಿಯ ಶಿವಕುಮಾರ್​ ಆಯ್ಕೆಯಾಗಿದ್ದಾರೆ. ಶಿವಕುಮಾರ್​ ಪರ 48 ಮತಗಳು ಚಲಾವಣೆಯಾಗಿದ್ದು ಅವರು 20 ಮತಗಳ ಅಂತರದಿಂದ ಮೇಯರ್‌ ಆಗಿ ಆಯ್ಕೆಯಾಗಿದ್ದಾರೆ. ಸೋಮವಾರ ಚುನಾವಣಾ ಪ್ರಕ್ರಿಯೆ ನಡೆಯಿತು. ಮೇಯರ್ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿತ್ತು.

ಜೆಡಿಎಸ್ ಅಭ್ಯರ್ಥಿ ಕೆ.ವಿ.ಶ್ರೀಧರ್ ನಾಮಪತ್ರ ವಾಪಸ್ ಪಡೆದಿದ್ದರಿಂದ ಬಿಜೆಪಿ- ಕಾಂಗ್ರೆಸ್ ನಡುವೆ ಹಣಾಹಣಿ ನಡೆದಿತ್ತು. ಜೆಡಿಎಸ್‌ ಸದಸ್ಯರು ಬಿಜೆಪಿಯ ಶಿವಕುಮಾರ ಪರ ಮತ ಚಲಾಯಿಸಿದ್ದಾರೆ. ಅಲ್ಲದೆ, ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್‌ ಶಾಸಕ ಜಿ.ಟಿ.ದೇವೇಗೌಡ, ಪರಿಷತ್​ನ ಜೆಡಿಎಸ್‌ ಸದಸ್ಯ ಮರಿತಿಬ್ಬೇಗೌಡ ಅವರು ಬಿಜೆಪಿ ಅಭ್ಯರ್ಥಿಗೆ ಮತ ಹಾಕಿದ್ದಾರೆ.
ಕಾಂಗ್ರೆಸ್ ಸದಸ್ಯ ಸೈಯದ್ ಹಸ್ರತ್ ಉಲ್ಲಾ ಪರ 28 ಮತಗಲು ಬಿದ್ದಿವೆ. ಅಂತಿಮವಾಗಿ ಬಿಜೆಪಿ ಅಭ್ಯರ್ಥಿ ಶಿವಕುಮಾರ ಅವರು 20 ಮತಗಳ ಅಂತರದಿಂದ ಮೇಯರ್ ಆಗಿ ಆಯ್ಕೆಯಾಗಿದ್ದಾರೆ ಎಂದು ವರದಿಗಳು ತಿಳಿಸಿವೆ.

 

ಪ್ರಮುಖ ಸುದ್ದಿ :-   ಲೈಂಗಿಕ ದೌರ್ಜನ್ಯ ಪ್ರಕರಣ: ಮಹಿಳೆ ಅಪಹರಣ ಪ್ರಕರಣದಲ್ಲಿ ಎಚ್.ಡಿ. ರೇವಣ್ಣ ಬಂಧನ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement