ರಾಜ್ಯ ಸರ್ಕಾರಿ ನೌಕರರಿಗೆ ಗುಡ್‌ನ್ಯೂಸ್ : ಅಕ್ಟೋಬರ್‌ನಲ್ಲಿ ಏಳನೇ ವೇತನ ಆಯೋಗ ರಚನೆ ; ಸಿಎಂ ಬೊಮ್ಮಾಯಿ ಘೋಷಣೆ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಅಕ್ಟೋಬರ್ ನಲ್ಲಿ ಏಳನೇ ವೇತನ ಆಯೋಗ ರಚನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದ್ದಾರೆ.
ವಿಧಾನಸೌಧ ಬ್ಯಾಂಕ್ವೆಟ್ ಹಾಲ್​ನಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ರಾಜ್ಯ ಸರ್ಕಾರಿ ನೌಕರರ ದಿನ ಉದ್ಘಾಟಿಸಿ ರ್ವೋತ್ತಮ ಸೇವಾ‌ ಪ್ರಶಸ್ತಿ ಪ್ರದಾನ ಮಾಡಿದ ನಂತರ ಮಾತನಾಡಿದ ಅವರು, ರಾಜ್ಯ ಸರ್ಕಾರಿ ನೌಕರರಿಗೆ ಕೊಟ್ಟ ಮಾತಿನಂತೆ ಅಕ್ಟೋಬರ್ ನಲ್ಲಿ ನೂತನ ವೇತನ ಆಯೋಗ ರಚನೆ ಮಾಡಲಾಗುವುದು. ವೇತನ ಪರಿಷ್ಕರಣೆಗೆ ಸಂಬಂಧಿಸಿದ ಶಿಫಾರಸು ಹಾಗೂ ವರದಿ ಸಲ್ಲಿಸಲು ಆಯೋಗ ರಚಿಸಲಿದ್ದು, ನೌಕರರ ಇನ್ನುಳಿದ ಬೇಡಿಕೆಗಳನ್ನು ಈಡೇರಿಸಲು ಪ್ರಯತ್ನಿಸಲಾಗುವುದು ಎಂದರು.

2025ರ ವೇಳೆಗೆ ಭಾರತ ಐದು ಟ್ರಿಲಿಯನ್ ಆರ್ಥಿಕತೆ ಸಾಧಿಸುವ ಗುರಿ ಇಟ್ಟುಕೊಂಡಿದೆ. ಇದರಲ್ಲಿ ಒಂದು ಟ್ರಿಲಿಯನ್ ಕರ್ನಾಟಕದ ಪಾಲು ಇರಬೇಕು ಎಂಬ ರಾಜ್ಯ ಸರ್ಕಾರದ ಸಂಕಲ್ಪಕ್ಕೆ ಸರ್ಕಾರಿ ನೌಕರರ ಸಹಭಾಗಿತ್ವ ಹಾಗೂ ಸಹಕಾರ ಮುಖ್ಯ ಎಂದರು.
ಗೋವು ಸಂಪತ್ತು ಉಳಿಸಿ ಬೆಳೆಸುವ ಉದ್ದೇಶದಿಂದ ಹಸುಗಳನ್ನು ದತ್ತು ಸ್ವೀಕರಿಸುವ ಪುಣ್ಯಕೋಟಿ ಯೋಜನೆಗೆ‌ ಕೈಜೋಡಿಸಬೇಕು. ಇದು ಒತ್ತಾಯವಲ್ಲ, ನನ್ನ ಮನವಿ ಎಂದು ಮುಖ್ಯಮಂತ್ರಿ ಬೊಮ್ಮಾಯಿ ಹೇಳಿದರು.
ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಆರ್.ಅಶೋಕ್, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ, ಮುಖ್ಯಮಂತ್ರಿಗಳ ಪ್ರಧಾನಿ ಕಾರ್ಯದರ್ಶಿ ಮಂಜುನಾಥ ಪ್ರಸಾದ, ಆಡಳಿತ ಹಾಗೂ ಸಿಬ್ಬಂದಿ ಇಲಾಖೆ ಮುಖ್ಯ ಕಾರ್ಯದರ್ಶಿ ಪಿ.ಹೇಮಲತಾ ಮೊದಲಾದವರು ಇದ್ದರು.

ಪ್ರಮುಖ ಸುದ್ದಿ :-   ನೇಹಾ ಹಿರೇಮಠ ಕೊಲೆ ಪ್ರಕರಣ: ಆರೋಪಿ ಫಯಾಜ್‌ ಆರು ದಿನ ಸಿಐಡಿ ಕಸ್ಟಡಿಗೆ

 

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement