ಕನ್ಯಾಕುಮಾರಿ: ತಮಿಳುನಾಡಿನ ಕನ್ಯಾಕುಮಾರಿಯಿಂದ ಜಮ್ಮು ಕಾಶ್ಮೀರದವರೆಗೂ ಐದು ತಿಂಗಳ ಕಾಲ ೩,೫೭೦ ಕಿ.ಲೋ ದೂರ ಕ್ರಮಿಸುವ “ ಭಾರತ್ ಜೋಡೋ ಯಾತ್ರೆಗೆ” ಇಂದು, ಬುಧವಾರ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಚಾಲನೆ ನೀಡಿದ್ದಾರೆ.
ಪೆರಂಬದೂರಿನಲ್ಲಿರುವ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಸ್ಮಾರಕದಲ್ಲಿ ಪ್ರಾರ್ಥನೆ ಸಲ್ಲಿಸುವ ಮೂಲಕ ಅಪ್ಪನ ಆಶೀರ್ವಾದ ಪಡೆದು ಅಧಿಕೃತ ಯಾತ್ರೆ ಆರಂಭಿಸಿದ್ದು ಕನ್ಯಾಕುಮಾರಿಯಲ್ಲಿ ನಡೆದ ಯಾತ್ರೆಯಲ್ಲಿ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಪಾಲ್ಗೊಂಡಿದ್ದರು.ಈ ವೇಳೆ ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಾಘೇಲ್ ಮತ್ತು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸೇರಿದಂತೆ ಹಿರಿಯ ಕಾಂಗ್ರೆಸ್ ನಾಯಕರು ಪಾಲ್ಗೊಂಡಿದ್ದರು.
ಭಾರತ್ ಜೋಡೋ ಯಾತ್ರೆಯಲ್ಲಿ ಹೆಚ್ಚಿನ ಸಂಖ್ಯೆಯ ಜನರು ಪಾಲ್ಗೊಳ್ಳುವಂತೆ ಪ್ರಿಯಾಂಕಾ ಗಾಂಧಿ ವೀಡಿಯೊ ಸಂದೇಶದಲ್ಲಿ ಮನವಿ ಮಾಡಿದ್ದಾರೆ. ಅಗತ್ಯ ವಸ್ತುಗಳ ದರ ಏರಿಕೆ, ನಿರುದ್ಯೋಗ, ಮತ್ತಿತರ ಜನಸಾಮಾನ್ಯರ ಸಮಸ್ಯೆಗಳತ್ತ ಗಮನ ಕೇಂದ್ರೀಕರಿಸುವುದು ಈ ಯಾತ್ರೆಯ ಉದ್ದೇಶವಾಗಿದೆ ಎಂದು ಅವರು ತಿಳಿಸಿದ್ದಾರೆ. ೩,೫೭೦ ಕಿ.ಮೀ ಉದ್ದದ ಯಾತ್ರೆ ೧೨ ರಾಜ್ಯಗಳ ಮೂಲಕ ಹಾದುಹೋಗಲಿದ್ದು, ೧೫೦ ದಿನಗಳು ನಡೆಯಲಿದೆ. ಯಾತ್ರೆಯ ವೇಳೆ ರಾಹುಲ್ ಗಾಂಧಿ ಅವರ ಜೊತೆಗೆ ೧೧೮ಕ್ಕೂ ಹೆಚ್ಚು ಮುಖಂಡರು ಹೆಜ್ಜೆ ಹಾಕಲಿದ್ದಾರೆ.
ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು
ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189
ತಮಿಳುನಾಡಿನ ಕನ್ಯಾಕುಮಾರಿಯಿಂದ ಆರಂಭವಾಗಿರುವ ಯಾತ್ರೆ ತಿರುವನಂತಪುರಂ, ಕೊಚ್ಚಿ, ನಿಲಂಬೂರ್, ಮೈಸೂರು, ಬಳ್ಳಾರಿ, ರಾಯಚೂರು, ವಿಕರಬಾದ್, ನಾಂದೇಡ್, ಇಂದೋರ್, ಕೊಟಾ, ಅಳ್ವಾರ್, ಬುಲಂದ್‌ಶಹರ್, ದೆಹಲಿ, ಅಂಬಾಲಾ, ಪಠಾಣ್‌ಕೋಟ್ ಮೂಲಕ ಸಾಗಿ ಜಮ್ಮು ಮತ್ತು ಶ್ರೀನಗರದಲ್ಲಿ ಅಂತ್ಯಗೊಳ್ಳಲಿದೆ.ರಾಷ್ಟ್ರಧ್ವಜದೊಂದಿಗೆ ಮೆರವಣಿಗೆಯ ಹಿಂದಿನ ಉದ್ದೇಶವೆಂದರೆ ಇತರ ಸಮಾನ ಮನಸ್ಕ ಪಕ್ಷಗಳು ಮತ್ತು ನಾಗರಿಕ ಸಮಾಜದ ಗುಂಪುಗಳು ಕಾರ್ಯಕ್ರಮಕ್ಕೆ ಸೇರಬೇಕೆಂದು ಪಕ್ಷ ಬಯಸಿದೆ. ಇದು ಕೇವಲ ಘೋಷಣೆ, ಭಾಷಣಗಳನ್ನು ಮಾಡುವ ಯಾತ್ರೆಯಾಗುವುದಿಲ್ಲ. ಬೆಲೆ ಏರಿಕೆ ಮತ್ತು ನಿರುದ್ಯೋಗದಂತಹ ಜನರ ಸಮಸ್ಯೆಗಳತ್ತ ಗಮನ ಹರಿಸುವ ಗುರಿಯನ್ನು ಹೊಂದಿದೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ.
ಭಾರತ್ ಜೋಡೋ ಯಾತ್ರೆ ಸೆಪ್ಟೆಂಬರ್ ೧೧ರಂದು ಕೇರಳಕ್ಕೆ ತಲುಪಲಿದೆ. ನಂತರ ೧೮ ದಿನಗಳ ಕಾಲ ಕೇರಳದಲ್ಲಿ ಸಾಗಿ ಸೆಪ್ಟೆಂಬರ್ ೩೦ ರಂದು ಕರ್ನಾಟಕಕ್ಕೆ ಆಗಮಿಸಲಿದೆ.
ರಾಜ್ಯದಲ್ಲಿ ೨೧ ದಿನಗಳ ಕಾಲ ಯಾತ್ರೆ ನಡೆಯಲಿದೆ. ನಂತರ ಉತ್ತರ ಭಾರತದ ರಾಜ್ಯಗಳತ್ತ ಸಾಗಲಿದೆ. ರಾಜ್ಯದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್, ಬಿ.ಕೆ ಹರಿಪ್ರಸಾದ್, ಕೆಪಿಸಿಸಿ ಕಾರ್ಯಾದ್ಯಕ್ಷರು ಸೇರಿದಂತೆ ಹಿರಿಯ ನಾಯಕರು ಭಾಗಿಯಾಗಲಿದ್ದಾರೆ.
ಜೊತೆಗೆ ಯಾತ್ರೆಯಲ್ಲಿ ಭಾಗವಹಿಸುವ ನಾಯಕರ ತಾತ್ಕಾಲಿಕ ಪಟ್ಟಿಯಲ್ಲಿ ಕಾಂಗ್ರೆಸ್ ಯುವ ನಾಯಕ ಕನ್ಹಯ್ಯಾ ಕುಮಾರ್, ಪವನ್ ಖೇರಾ ಮತ್ತು ಪಂಜಾಬ್ ಮಾಜಿ ಸಚಿವ ವಿಜಯ್ ಇಂದರ್ ಸಿಂಗ್ಲಾ ಸೇರಿದಂತೆ ಇತರರು ಪಾಲ್ಗೊಳ್ಳಲಿದ್ದಾರೆ.
ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ | |
ಟೆಲಿಗ್ರಾಮ್ ಚಾನೆಲ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
Naren
first Kashmir and bharat jodo