ಕೃಷಿ, ವಿಜ್ಞಾನ, ತಂತ್ರಜ್ಞಾನ,ವೈದ್ಯಕೀಯ ವಿಷಯಗಳಲ್ಲಿ ಶ್ರೇಷ್ಠ ಪುಸ್ತಕ ಪ್ರಶಸ್ತಿಗೆ ಕನ್ನಡ ಲೇಖಕರಿಂದ ಅರ್ಜಿ ಆಹ್ವಾನ

ಹುಬ್ಬಳ್ಳಿ: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯಿಂದ ಪ್ರತಿ‌ 2 ವರ್ಷಗಳಿಗೊಮ್ಮೆ ಶ್ರೇಷ್ಠ ಪುಸ್ತಕ ಪ್ರಶಸ್ತಿ ನೀಡಲಾಗುತ್ತಿದೆ. ಅದರಂತೆ ಜನವರಿ 2021 ರಿಂದ ಡಿಸೆಂಬರ್ 2022 ರಲ್ಲಿ ಕೃಷಿ, ವಿಜ್ಞಾನ, ತಂತ್ರಜ್ಞಾನ ಮತ್ತು ವೈದ್ಯಕೀಯ ವಿಷಯಗಳಲ್ಲಿ ಕನ್ನಡದಲ್ಲಿ ಪುಸ್ತಕಗಳನ್ನು ಪ್ರಕಟಿಸಿರುವ ಲೇಖಕರಿಂದ ಅರ್ಜಿ ಆಹ್ವಾನಿಸಲಾಗಿದೆ.
ಲೇಖಕರು ನಿಗದಿತ ಅರ್ಜಿ ನಮೂನೆಯೊಂದಿಗೆ ಪುಸ್ತಕದ 4 ಪ್ರತಿಗಳನ್ನು 2023 ಜನವರಿ 4ರ ಒಳಗಾಗಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ, ಪ್ರೊ‌.ಯು.ಆರ್.ರಾವ್ ವಿಜ್ಞಾನ ಭವನ, ಮೇಜರ್ ಸಂದೀಪ್ ಉನ್ನಿಕೃಷ್ಣನ್ ರಸ್ತೆ, ತೋಟಗಾರಿಕೆ ವಿಜ್ಞಾನಗಳ ಕಾಲೇಜು ಆವರಣ, ದೊಡ್ಡಬೆಟ್ಟಹಳ್ಳಿ ಬಡಾವಣೆ ಬಸ್ ನಿಲ್ದಾಣದ ಹತ್ತಿರ, ವಿದ್ಯಾರಣ್ಯಪುರ ಪೋಸ್ಟ್ ಬೆಂಗಳೂರು – 560097 ಈ ವಿಳಾಸಕ್ಕೆ ಕಳುಹಿಸಬೇಕು. ಪುಸ್ತಕಗಳ ಸಂಖ್ಯೆಗನುಗುಣವಾಗಿ ಪ್ರತಿ ವಿಷಯಕ್ಕೆ ಗರಿಷ್ಠ 2 ಪ್ರಶಸ್ತಿಗಳನ್ನು ನೀಡಲಾಗುತ್ತದೆ. ಅಯ್ಕೆಯಾದ ಲೇಖಕರಿಗೆ 25 ಸಾವಿರ ರೂ.ಗಳ ನಗದು ಪುರಸ್ಕಾರ ಹಾಗೂ ಪ್ರಶಸ್ತಿ ಪತ್ರವನ್ನು ನೀಡಿ ಸನ್ಮಾನಿಸಲಾಗುತ್ತದೆ.
ಅರ್ಜಿ ನಮೂನೆ ಹಾಗೂ ಇತರ ಮಾಹಿತಿಗಾಗಿ ಅಕಾಡೆಮಿ ವೆಬ್ ಸೈಟ್ www.kstacademy.in ಹಾಗೂ ದೂರವಾಣಿ ಸಂಖ್ಯೆ 080 29721550, 29721549 ಸಂಪರ್ಕಿಸಿ, ಮಾಹಿತಿ ಪಡೆದುಕೊಳ್ಳಬಹುದು ಎಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎ.ಎಂ.ರಮೇಶ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಯಕ್ಷಗಾನದ ಖ್ಯಾತ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

5 / 5. 1

ಶೇರ್ ಮಾಡಿ :

  1. Shareef Chigalli

    ಶ್ರೇಷ್ಟ ಪುಸ್ತಕ ಪ್ರಶಸ್ತಿ ಫಲಿತಾಂಶದ ಬಗ್ಗೆ ಮಾಹಿತಿ ನೀಡಿ. 2023

ನಿಮ್ಮ ಕಾಮೆಂಟ್ ಬರೆಯಿರಿ

advertisement