ಉಮೇಶ ಕತ್ತಿ ನಿಧನಕ್ಕೆ ಪ್ರಧಾನಿ ಮೋದಿ, ಯಡಿಯೂರಪ್ಪ, ಸಿದ್ದರಾಮಯ್ಯ ಸೇರಿ ಗಣ್ಯರ ಸಂತಾಪ

ಬೆಂಗಳೂರು: ಅರಣ್ಯ ಸಚಿವ ಉಮೇಶ ಕತ್ತಿ ಮಂಗಳವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಉಮೇಶ ಕತ್ತಿ ಅವರು ಕರ್ನಾಟಕದ ಅಭಿವೃದ್ಧಿಗೆ ಉತ್ಕೃಷ್ಟ ಕೊಡುಗೆಗಳನ್ನು ನೀಡಿದ ಅನುಭವಿ ನಾಯಕರಾಗಿದ್ದರು. ಅವರ ನಿಧನದಿಂದ ನೋವಾಗಿದೆ. ಅವರ ಕುಟುಂಬಕ್ಕೆ ಮತ್ತು ಕಾರ್ಯಕರ್ತರಿಗೆ ದುಃಖ ತಡೆದುಕೊಳ್ಳವ ಶಕ್ತಿ ನೀಡಲಿ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಮಾಜಿ ಸಿಎಂ ಯಡಿಯೂರಪ್ಪ ಸಂತಾಪ
ಜನಪ್ರಿಯ ಶಾಸಕರು, ಅರಣ್ಯ, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್​ ಕತ್ತಿ ಅವರು ಹಠಾತ್ ವಿಧಿವಶರಾದ ಸುದ್ದಿ ತಿಳಿದು ಅತ್ಯಂತ ದುಃಖ ಮತ್ತು ಆಘಾತವಾಗಿದೆ. ಸುದೀರ್ಘ ಕಾಲ ಸಾರ್ವಜನಿಕ ಜೀವನದಲ್ಲಿ ಸೇವೆ ಸಲ್ಲಿಸಿದ್ದ ಹಿರಿಯ ನಾಯಕ ನಮ್ಮನ್ನಗಲಿರುವುದು ರಾಜ್ಯಕ್ಕೆ ದೊಡ್ದ ನಷ್ಟ ಎಂದು ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.
ಸಚಿವ ಉಮೇಶ್ ಕತ್ತಿ ಒಳ್ಳೆಯ ಸ್ನೇಹಿತರು. ತಮಾಷೆಯಾಗಿ ಮಾತನಾಡುವವರು. ಮೊದಲಿನಿಂದಲೂ ಕತ್ತಿಯವರಿಗೆ ಹೃದಯ ಸಂಬಂಧಿ ಸಮಸ್ಯೆ ಇತ್ತು. ಅವರ ತಂದೆಗೂ ಹೃದಯಾಘಾತವಾಗಿತ್ತು. ಆದರೆ ಉಮೇಶ್ ಕತ್ತಿಗೆ ಸಾಯುವಂಥ ವಯಸ್ಸಾಗಿರಲಿಲ್ಲ. ಕತ್ತಿಯವರ ಆತ್ಮಕ್ಕೆ ಶಾಂತಿ ಕೋರುತ್ತೇನೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಪ್ರಮುಖ ಸುದ್ದಿ :-   ವೀಡಿಯೊ...| ಹೆಗಲ ಮೇಲೆ ಕೈಹಾಕಿದ ಕಾಂಗ್ರೆಸ್​ ಮುಖಂಡನಿಗೆ ಕಪಾಳಕ್ಕೆ ಹೊಡೆದ ಡಿಸಿಎಂ ಡಿ.ಕೆ.ಶಿವಕುಮಾರ

ಪೇಜಾವರ ಶ್ರೀಗಳ ಸಂತಾಪ
ಸಚಿವ ಉಮೇಶ್ ಕತ್ತಿ ನಿಧನಕ್ಕೆ ಪೇಜಾವರ ಶ್ರೀ ಸಂತಾಪ ಸೂಚಿಸಿದ್ದಾರೆ. ಸಚಿವ ಉಮೇಶ್ ಕತ್ತಿ ಹಠಾತ್ ನಿಧನ ದುಃಖ ತಂದಿದೆ. ಉಮೇಶ್​ ಕತ್ತಿ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುವೆ ಎಂದು ಹೇಳಿದ್ದಾರೆ. ಕುಟುಂಬಸ್ಥರಿಗೆ ದುಃಖ ಸಹಿಸುವ ಶಕ್ತಿ ದೇವರು ನೀಡಲಿ ಎಂದು ಹೇಳಿದ್ದಾರೆ.

ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸಂತಾಪ:
ಉಮೇಶ್ ಕತ್ತಿ ಅವರ ನಿಧನದಿಂದ ತೀವ್ರ ಆಘಾತವಾಗಿದೆ. ಜನತಾ ಪರಿವಾರದ ಹಿರಿಯರಾಗಿದ್ದ ಕತ್ತಿ ಸ್ನೇಹಜೀವಿ ಆಗಿದ್ರು. ಅಲ್ಲದೇ ನೇರ ನುಡಿಯಿಂದ ಎಲ್ಲರ ಗೌರವಕ್ಕೆ ಪಾತ್ರರಾಗಿದ್ರು. ಉಮೇಶ್ ಕತ್ತಿ ಅವರ ಆತ್ಮಕ್ಕೆ ದೇವರು ಶಾಂತಿ ನೀಡಲಿ. ಕುಟುಂಬಸ್ಥರಿಗೆ ದುಃಖ ಭರಿಸುವ ಶಕ್ತಿ ದೇವರು ಕರುಣಿಸಲಿ ಎಂದು ಉಮೇಶ್ ಕತ್ತಿ ನಿಧನಕ್ಕೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್​ ಮೂಲಕ ಸಂತಾಪ ಸೂಚಿಸಿದ್ದಾರೆ.

ಪ್ರಮುಖ ಸುದ್ದಿ :-   ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಸಾವು

ಅರಣ್ಯ ಸಚಿವ ಉಮೇಶ್ ಕತ್ತಿ ಹೃಯಯಾಘಾತದಿಂದ ಬೆಂಗಳೂರಿನ ರಾಮಯ್ಯ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮೊ ನಿನ್ನೆ(ಸೆಪ್ಟೆಂಬರ್ 7) ರಾತ್ರಿ 10ಗಂಟೆ ಸುಮಾರಿಗೆ ತಮ್ಮ ನಿವಾಸದಲ್ಲಿದ್ದಾಗಲೇ ಬಾತ್​ ರೂಮ್​ನಲ್ಲಿ ಕುಸಿದು ಬಿದ್ದಿದ್ದರು. ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ರೂ ತೀವ್ರ ಹೃದಯಾಘಾತದಿಂದ ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ನಿಧನರಾದರು.
ಜನತಾದಳದಿಂದ ತಮ್ಮ ರಾಜಕೀಯ ಜೀವನ ಆರಂಭಿಸಿದ್ದ ಅವರು, ಬಳಿಕ ‌, ಜೆಡಿಎಸ್, ನಂತರ ಬಿಜೆಪಿಗೆ ಸೇರಿ ಒಟ್ಟು 8 ಬಾರಿ ಶಾಸಕರಾಗಿ ಆಯಕೆಯಾಗಿದ್ದರು. 5 ಬಾರಿ ಮಂತ್ರಿಯಾಗಿದ್ದ ಅವರು, ಸಕ್ಕರೆ, ಲೋಕೋಪಯೋಗಿ, ಬಂಧೀಖಾನೆ, ತೋಟಗಾರಿಕೆ, ಕೃಷಿ, ಅರಣ್ಯ ಆಹಾರ ಮತ್ತು ನಾಗರಿಕ ಪೂರೈಕೆ ಹೀಗೆ ಹಲವಾರು ಇಲಾಖೆಯ ಸಚಿವರಾಗಿದ್ದ ಕಾರ್ಯನಿರ್ವಹಿಸಿದ್ದಾರೆ.

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement