ಸಚಿವ ಉಮೇಶ ಕತ್ತಿ ನಿಧನ: ಇಂದು ಬೆಳಗಾವಿ ಜಿಲ್ಲೆ ಶಾಲಾ -ಕಾಲೇಜು, ಸರ್ಕಾರಿ ಕಚೇರಿಗಳಿಗೆ ರಜೆ ಘೋಷಣೆ, ಸಂಜೆ 5 ಗಂಟೆಗೆ ಅಂತ್ಯಸಂಸ್ಕಾರ

ಬೆಂಗಳೂರು :ಸಚಿವ ಉಮೇಶ ಕತ್ತಿ ನಿಧನದ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಎಲ್ಲ ಶಾಲಾ- ಕಾಲೇಜು ಮತ್ತು ಸರ್ಕಾರಿ ಕಚೇರಿಗಳಿಗೆಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬುಧವಾರ ರಜೆ ಘೋಷಣೆ ಮಾಡಿದ್ದಾರೆ.
ಎಂ ಎಸ್ ರಾಮಯ್ಯ ಆಸ್ಪತ್ರೆಗೆ ಕತ್ತಿ ಉಮೇಶ್ ಕತ್ತಿ ಅವರ ಪ್ರಾರ್ಥಿವ ಶರೀರದ ದರ್ಶನ ಪಡೆದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಉಮೇಶ ಕತ್ತಿ ಅವರ ತಂದೆ ವಿಶ್ವನಾಥ ಕಟ್ಟಿ ಅಧಿವೇಶನದ ವೇಳೆಯೇ ಹೃದಯಾಘಾತದಿಂದ ಕುಸಿದುಬಿದ್ದು ಮೃತಪಟ್ಟಿದ್ದರು. ಉಮೇಶ ಕತ್ತಿ ಅವರು ಅತ್ಯಂತ ಕಿರಿಯ ವಯಸ್ಸಿನಲ್ಲೇ ಶಾಸಕರಾಗಿ ಆಯ್ಕೆಯಾಗಿದ್ದರು. ಅವರ ತಂದೆ ನಮ್ಮ ತಂದೆಯವರ ಜೊತೆ ಒಡನಾಟ ಹೊಂದಿದ್ದರು ಎಂದು ನೆನಪಿಸಿಕೊಂಡಿದ್ದಾರೆ.
ಬುಧವಾರ ಬೆಳಗ್ಗೆ ಪಾರ್ಥೀವ ಶರೀರವನ್ನು ಬೆಳಗಾವಿ ತೆಗೆದುಕೊಂಡು ಹೋಗಲಾಗುತ್ತದೆ. ಅಲ್ಲಿಂದ ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿಗೆ ತೆಗೆದುಕೊಂಡು ಹೋಗಿ ಸಂಜೆ 5 ಕ್ಕೆ ಅವರ ತೋಟದಲ್ಲಿ ಅಂತಿಮ ಸಂಸ್ಕಾರ ಮಾಡಲಾಗುವುದು ಎಂದು ಹೇಳಿದರು.
ಸಚಿವ ಉಮೇಶ್ ಕತ್ತಿ ನಿಧನದ ಸುದ್ದಿ ತಿಳಿದು ರಾಮಯ್ಯ ಆಸ್ಪತ್ರೆಗೆ ಭೇಟಿ ನೀಡಿದ ಸಿಎಂ ಬೊಮ್ಮಾಯಿ, ಬೆಲ್ಲದ ಬಾಗೇವಾಡಿಗೆ ಕೊಂಡೊಯ್ದು 5 ಗಂಟೆಗೆ ಅವರ ತೋಟದಲ್ಲಿ‌ ಅಂತಿಮ ವಿಧಿ ವಿಧಾನ ನಡೆಸಲಾಗುತ್ತೆ. ಸಕಲ ಸರ್ಕಾರಿ ಗೌರವಗಳನ್ನ ನೀಡಲು‌ ನಿರ್ಧರಿಸಿದ್ದೇವೆ. ಬುಧವಾರ ಬೆಳಗಾವಿ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜು, ಸರ್ಕಾರಿ ಕಚೇರಿಗಳಿಗೆ ರಜೆ ಎಂದು ಘೋಷಿಸಿದರು.

ಪ್ರಮುಖ ಸುದ್ದಿ :-   ಏಪ್ರಿಲ್‌ 28, 29 ರಂದು ಉತ್ತರ ಕರ್ನಾಟಕದಲ್ಲಿ ಪ್ರಧಾನಿ ಮೋದಿ ಭರ್ಜರಿ ಪ್ರಚಾರ : ಬೆಳಗಾವಿಯಲ್ಲಿ ತಂಗುವ ಸಾಧ್ಯತೆ

ಅರಣ್ಯ ಸಚಿವ ಉಮೇಶ್ ಕತ್ತಿ ಹೃಯಯಾಘಾತದಿಂದ ಬೆಂಗಳೂರಿನ ರಾಮಯ್ಯ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಉಮೇಶ್ ಕತ್ತಿ, ನಿನ್ನೆ(ಸೆಪ್ಟೆಂಬರ್ 7) ರಾತ್ರಿ 10 ಗಂಟೆ ಸುಮಾರಿಗೆ ತಮ್ಮ ನಿವಾಸದಲ್ಲಿ ಬಾತ್​ ರೂಮ್​ನಲ್ಲಿ ಕುಸಿದು ಬಿದ್ದಿದ್ದರು. ತಕ್ಷಣ ಎಂ.ಎಸ್‌. ರಾಮಯ್ಯ ಆಸ್ಪತ್ರೆಗೆ ದಾಖಲಿಸಿದರೂ ತೀವ್ರ ಹೃದಯಾಘಾತ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.ಅವರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

ಅಂತಿಮ ದರ್ಶನಕ್ಕೆ ವ್ಯವಸ್ಥೆ….
ಉಮೇಶ ಕತ್ತಿ ಅವರ ಸ್ವಗ್ರಾಮವಾದ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಹೊರವಲಯದಲ್ಲಿರುವ ವಿಶ್ವರಾಜ ಸಕ್ಕರೆ ಕಾರ್ಖಾನೆಯಲ್ಲಿ ಅಂತಿಮ ದರ್ಶನಕ್ಕೆ ಸಕಲ ಸಿದ್ಧತೆ ಮಾಡಲಾಗಿದ್ದು, ಇಂದು ಮಧ್ಯಾಹ್ನ 3 ಗಂಟೆ ವರೆಗೂ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

https://twitter.com/narendramodi/status/1567356643004006401?ref_src=twsrc%5Etfw%7Ctwcamp%5Etweetembed%7Ctwterm%5E1567356643004006401%7Ctwgr%5E28d63c984951d6fdb46c86a17f344d313d5f5223%7Ctwcon%5Es1_&ref_url=https%3A%2F%2Fkannadanewsnow.com%2Fkannada%2Fbreaking-news-pm-modi-condoles-the-death-of-minister-umesh-katti%2F

ಇಂದು ಬೆಳಗ್ಗೆ 8.10 ಗಂಟೆಗೆ ವಿಶೇಷ ವಿಮಾನದಲ್ಲಿ ಬೆಂಗಳೂರಿನಿಂದ ಬೆಳಗ್ಗೆ ಒಂಬತ್ತು ಗಂಟೆಗೆ ಬೆಳಗಾವಿಗೆ ಉಮೇಶ ಕತ್ತಿ ಮೃತದೇಹ ಆಗಮಿಸಲಿದೆ. 10:30ರ ವರೆಗೆ ಶಿವಬಸವನಗರದ ನಿವಾಸದ ಎದುರು ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಅಲ್ಲಿಂದ ಬೆಳಗಾವಿಯಿಂದ ಸಂಕೇಶ್ವರದ ಹಿರಣ್ಯಕೇಶಿ ಸಕ್ಕರೆ ಕಾರ್ಖಾನೆ ಎದುರು ಅಂತಿಮ ದರ್ಶನಕ್ಕೆ ವ್ಯವಸ್ಥೆ, ಬಳಿಕ 12 ಗಂಟೆಗೆ ಸ್ವಗ್ರಾಮ ಬೆಲ್ಲದ ಬಾಗೇವಾಡಿ ಗ್ರಾಮಕ್ಕೆ ಮೃತದೇಹವನ್ನು ಒಯ್ಯಲಾಗುತ್ತದೆ. 12ರಿಂದ ಸಂಜೆ ಐದು ಗಂಟೆ ವರೆಗೂ ಬೆಲ್ಲದ ಬಾಗೇವಾಡಿಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ. ಐದು ಗಂಟೆಗೆ ಉಮೇಶ್ ಕತ್ತಿಯವರ ಜಮೀನಿನಲ್ಲಿ ತಂದೆ ತಾಯಿಯ ಸಮಾಧಿ ಪಕ್ಕದಲ್ಲಿ ಅಂತ್ಯಸಂಸ್ಕಾರ ನೆರವೇರಲಿದೆ.

ಪ್ರಮುಖ ಸುದ್ದಿ :-   ಹುಕ್ಕಾ, ಹುಕ್ಕಾ ಬಾರ್‌ ನಿಷೇಧಿಸಿರುವ ರಾಜ್ಯ ಸರ್ಕಾರದ ಆದೇಶ ಎತ್ತಿ ಹಿಡಿದ ಹೈಕೋರ್ಟ್‌

 

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement