ಕನ್ನಡದಲ್ಲಿ ಬರೆದ ಚೆಕ್‌ ಅಮಾನ್ಯ; ಎಸ್‌ಬಿಐಗೆ ₹85 ಸಾವಿರ ದಂಡ ವಿಧಿಸಿದ ಗ್ರಾಹಕರ ಆಯೋಗ

posted in: ರಾಜ್ಯ | 0

ಧಾರವಾಡ: ಚೆಕ್‌ನಲ್ಲಿ ಕನ್ನಡ ಭಾಷೆ ಬಳಸಿರುವುದಕ್ಕೆ ಅಮಾನ್ಯ ಮಾಡಿದ್ದ ಭಾರತೀಯ ಸ್ಟೇಟ್‌ ಬ್ಯಾಂಕ್‌ಗೆ ಧಾರವಾಡ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ದಂಡ ವಿಧಿಸಿದೆ.
ಧಾರವಾಡದ ಕಲ್ಯಾಣ ನಗರ ನಿವಾಸಿ, ಇಂಗ್ಲಿಷ್‌ ಪ್ರಾಧ್ಯಾಪಕರಾದ ವಾದಿರಾಚಾರ್ಯ ಇನಾಮಾದಾರ ಅವರ ಚೆಕ್‌ ಅನ್ನು ಅಮಾನ್ಯ ಮಾಡಿದ್ದ ಎಸ್‌ಬಿಐ ನಡೆಗೆ ಆಕ್ಷೇಪಿಸಿ ಸಲ್ಲಿಸಿದ್ದ ದೂರಿನ ವಿಚಾರಣೆ ನಡೆಸಿದ ಆಯೋಗದ ಅಧ್ಯಕ್ಷರಾದ ಈಶಪ್ಪ ಭೂತೆ, ಸದಸ್ಯರಾದ ವಿ ಎ ಬೋಳಶೆಟ್ಟಿ ಮತ್ತು ಪಿ ಸಿ ಹಿರೇಮಠ ಅವರ ನೇತೃತ್ವದ ಪೀಠ ಈ ಆದೇಶ ಮಾಡಿದೆ ಎಂದು ಬಾರ್‌ ಅಂಡ್‌ ಬೆಂಚ್‌ ವರದಿ ಮಾಡಿದೆ.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ವರದಿ ಪ್ರಕಾರ, ಚೆಕ್‌ನಲ್ಲಿ ಕನ್ನಡ ಭಾಷೆ ಬಳಸಿದ್ದನ್ನು ಅರ್ಥಮಾಡಿಕೊಳ್ಳದೇ ಮತ್ತು ಕನ್ನಡ ಭಾಷೆಯ ಬಗ್ಗೆ ತೀರಾ ಅಸಡ್ಡೆ ಹಾಗೂ ಹೊಣೆಗೇಡಿತನವನ್ನು ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲ್ಲೂಕಿನ ಭಾರತೀಯ ಸ್ಟೇಟ್‌ ಬ್ಯಾಂಕ್‌ (ಎಸ್‌ಬಿಐ) ಸಿಬ್ಬಂದಿ ಪ್ರದರ್ಶಿಸಿ, ದೂರುದಾರರ ಚೆಕ್‌ ಅಮಾನ್ಯ ಮಾಡಿರುವುದು ಖೇದಕರ ಸಂಗತಿ ಎಂದು ಧಾರವಾಡ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಆದೇಶದಲ್ಲಿ ಹೇಳಿದ್ದು, ಎಸ್‌ಬಿಐಗೆ ₹85,177 ದಂಡ ವಿಧಿಸಿದೆ.
₹85,177 ಅನ್ನು ಸೆಪ್ಟೆಂಬರ್‌ 1ರಿಂದ ಮುಂದಿನ ಒಂದು ತಿಂಗಳಲ್ಲಿ ಎಸ್‌ಬಿಐ ಪಾವತಿಸಬೇಕು. ಇಲ್ಲವಾದಲ್ಲಿ ಚೆಕ್‌ ಅಮಾನ್ಯ ಮಾಡಲಾದ 2020ರ ಸೆಪ್ಟೆಂಬರ್‌ 5ರಿಂದ ದಂಡದ ಹಣ ಪಾವತಿ ಮಾಡುವವರೆಗೆ ಶೇ. 8ರಷ್ಟು ಬಡ್ಡಿ ದರ ಸೇರಿ ಹಣವನ್ನು ಪಾವತಿಸಬೇಕು” ಎಂದು ಆಯೋಗ ಆದೇಶಿಸಿದೆ.

ಇಂದಿನ ಪ್ರಮುಖ ಸುದ್ದಿ :-   ದಸರಾ ಮೆರವಣಿಗೆ ವೇಳೆ ಪಾರಂಪರಿಕ ಮದರಸಾದಲ್ಲಿ ಪೂಜೆ, 9 ಜನರ ವಿರುದ್ಧ ಪ್ರಕರಣ ದಾಖಲು

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

5 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ

advertisement