ಅನಾರೋಗ್ಯದಿಂದ ಬಳಲುತ್ತಿರುವ ಹಿರಿಯ ನಟಿ ಲೀಲಾವತಿ: ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರ ಭೇಟಿ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಹಾಸಿಗೆ ಹಿಡಿದಿರುವ ನಟಿ ಲೀಲಾವತಿ ಅವರ ಯೋಗಕ್ಷೇಮ ವಿಚಾರಿಸಲು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾಮ ಹರೀಶ ಅವರ ನಿವಾಸಕ್ಕೆ ಭೇಟಿ ನೀಡಿದ್ದಾರೆ.
ಬಹುಭಾಷಾ ನಟಿ ಲೀಲಾವತಿ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದಾರೆ. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿರುವ ಲೀಲಾವತಿ ಅವರು ನೆಲಮಂಗಲದ ಅವರ ತೋಟದ ಮನೆಯಲ್ಲಿಯೇ ವೈದ್ಯರ ಸಲಹೆಯಂತೆ ಸೂಕ್ತ ಚಿಕಿತ್ಸೆಯ ಪಡೆದುಕೊಳ್ಳುತ್ತಿದ್ದಾರೆ. ಅವರ ನಿವಾಸಕ್ಕೆ ಭೇಟಿ ನೀಡಿದ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾಮ ಹರೀಶ ಅವರ ಯೋಗಕ್ಷೇಮ ವಿಚಾರಿಸಿದ್ದಾರೆ.
ಲೀಲಾವತಿ ಅವರ ಪುತ್ರ ವಿನೋದ ರಾಜಕುಮಾರ್ ಬಳಿ ನಟಿಯ ಆರೋಗ್ಯದ ಕುರಿತು ವಿಚಾರಿಸಿದ್ದಾರೆ.

5 / 5. 2

ಶೇರ್ ಮಾಡಿ :
ಪ್ರಮುಖ ಸುದ್ದಿ :-   ದಾರಿತಪ್ಪಿ ಮಹಾರಾಷ್ಟ್ರ ತಲುಪಿದ್ದ ಹಾವೇರಿ ಜಿಲ್ಲೆಯ ವೃದ್ಧೆ ; ಗೂಗಲ್‌ ಸರ್ಚ್‌, ಚಾಟ್‌ಜಿಪಿಟಿ ನೆರವಿನಿಂದ ಮರಳಿ ಮನೆಗೆ

ನಿಮ್ಮ ಕಾಮೆಂಟ್ ಬರೆಯಿರಿ

advertisement