ಇಸ್ಲಾಂಗೆ ಮತಾಂತರವಾಗಿ ನನ್ನನ್ನು ಮದ್ವೆಯಾಗು, ಇಲ್ಲದಿದ್ರೆ ….: ವಿದ್ಯಾರ್ಥಿನಿಗೆ ಯುವಕನಿಂದ ಬೆದರಿಕೆ

ಭೋಪಾಲ್: ಮಧ್ಯಪ್ರದೇಶದಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬ 19 ವರ್ಷದ ನರ್ಸಿಂಗ್ ವಿದ್ಯಾರ್ಥಿನಿಯನ್ನು ಹಿಂಬಾಲಿಸಿ, ನಂತರ ಇಸ್ಲಾಂಗೆ ಮತಾಂತರಗೊಂಡು ಮದುವೆಯಾಗದಿದ್ದರೆ ಆಸಿಡ್ ದಾಳಿ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ.
22 ವರ್ಷದ ಮೋನು ಮನ್ಸೂರಿ ಎಂಬಾತ19 ವರ್ಷದ ನರ್ಸಿಂಗ್ ವಿದ್ಯಾರ್ಥಿನಿ ಅಡ್ಡಗಟ್ಟಿ ಆಕೆಯ ಮೇಲೆ ಹೂವಿನ ಮಳೆಗರೆದಿದ್ದಾನೆ. ಮಧ್ಯಪ್ರದೇಶದ ಖಾಂಡ್ವಾ ಜಿಲ್ಲೆಯಲ್ಲಿ ಈ ಘಟನೆ ವರದಿಯಾಗಿದೆ. ಈ ವರ್ಷದ ಜನವರಿಯಲ್ಲಿ ಆತ ಮತ್ತೊಬ್ಬ ಮಹಿಳೆಗೆ ಬೆದರಿಕೆ ಹಾಕಿದ್ದ. ಬಳಿಕ ಆತನಿಗೆ ಜಾಮೀನು ನೀಡಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಯುವತಿ ಮತ್ತು ಮೋನು ಮನ್ಸೂರಿ ಇಬ್ಬರೂ ಒಂದೇ ಗ್ರಾಮದ ನಿವಾಸಿಗಳು. ಹೇಗೋ ಆಕೆಯ ನಂಬರ್ ಪಡೆದು ತನ್ನ ಮದುವೆ ಪ್ರಸ್ತಾಪವನ್ನು ನಿರಾಕರಿಸಿದರೆ ಕೊಲೆ ಮಾಡುವುದಾಗಿ ವಾಟ್ಸಾಪ್ ನಲ್ಲಿ ಪಿಂಗ್ ಮಾಡಿದ್ದ ಎಂದು ನರ್ಸಿಂಗ್ ವಿದ್ಯಾರ್ಥಿನಿ ಪೊಲೀಸ್ ದೂರಿನಲ್ಲಿ ತಿಳಿಸಿದ್ದಾರೆ.

ಆತ  ಹಳ್ಳಿಯಿಂದ  ನಾನು  ಕಾಲೇಜಿಗೆ ಹೋಗುವಾಗ ಪ್ರತಿದಿನ ನನ್ನನ್ನು ಹಿಂಬಾಲಿಸುತ್ತಿದ್ದ, ನನ್ನ ಕೈ ಹಿಡಿದ ಮತ್ತು ನಾನು ಕೂಗಿಕೊಂಡೆ, ಆತ ನನ್ನ ಮೇಲೆ ಹೂ ಎಸೆದ ಮತ್ತು ನನ್ನನ್ನು ಕೊಲ್ಲುತ್ತೇನೆ ಎಂದು ಬೆದರಿಕೆ ಹಾಕಿದ ಎಂದು ಯುವತಿ ದೂರಿನಲ್ಲಿ ತಿಳಿಸಿದ್ದಾಳೆ. ಆತ ಬಂದೂಕು ಹಿಡಿದ ಫೋಟೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಕಳುಹಿಸಿದ ಎಂದು ಯುವತಿ ಸುದ್ದಿಗಾರರಿಗೆ ತಿಳಿಸಿದರು.
ಮೋನು ಮನ್ಸೂರಿಯನ್ನು ಮಧ್ಯಪ್ರದೇಶದ ಧಾರ್ಮಿಕ ಸ್ವಾತಂತ್ರ್ಯ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆಯ ಅಡಿಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಧ್ಯಪ್ರದೇಶದ ಕಾನೂನು ವಂಚನೆಯ ಮೂಲಕ ಧಾರ್ಮಿಕ ಮತಾಂತರವನ್ನು ಶಿಕ್ಷಿಸಲು ಪ್ರಯತ್ನಿಸುತ್ತದೆ, 10 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಬಹುದಾಗಿದೆ.
ಇಸ್ಲಾಂಗೆ ಮತಾಂತರಗೊಂಡು ಮದುವೆಯಾಗದಿದ್ದರೆ ಆಸಿಡ್ ದಾಳಿ ನಡೆಸುವುದಾಗಿ ಬೆದರಿಕೆ ಹಾಕಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.ಬಳಿಕ ಯುವತಿ ಹಿಂದೂ ಸಂಘಟನೆಯೊಂದರ ಸಹಾಯ ಪಡೆದು ಪೊಲೀಸರಿಗೆ ದೂರು ನೀಡಿದ್ದಾರೆ.

ಪ್ರಮುಖ ಸುದ್ದಿ :-   ನಟಿ ಸಿದ್ಧಾರ್ಥ- ನಟಿ ಅದಿತಿ ರಾವ್ ಮದುವೆ ಆಗಿಲ್ಲ : ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ; ಸ್ಪಷ್ಟನೆ ನೀಡಿದ ಅದಿತಿ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement