ಬೆಂಗಳೂರು-ಮೈಸೂರು ದಶಪಥ ರಸ್ತೆ ಕಾಮಗಾರಿ ಲೋಪ : ಕೇಂದ್ರ ಸಾರಿಗೆ ಸಚಿವ ಗಡ್ಕರಿ ಜೊತೆ ಸಿಎಂ ಬೊಮ್ಮಾಯಿ ಚರ್ಚೆ

ಬೆಂಗಳೂರು: ಮೈಸೂರು- ಬೆಂಗಳೂರು ದಶಪಥ ರಸ್ತೆ ಕಾಮಗಾರಿಯಲ್ಲಿ ನಡೆದಿದೆ ಎಂದು ಹೇಳಲಾದ ಲೋಪಗಳ ಕುರಿತು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರ ಜೊತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚರ್ಚೆ ನಡೆಸಿದರು.
ಅಧಿಕೃತ ಕಾರ್ಯಕ್ರಮದಲ್ಲಿ ಭಾಗಿಯಾಗಲು ಬೆಂಗಳೂರಿಗೆ ಬಂದಿದ್ದ ಸಚಿವ ಗಡ್ಕರಿ ಅವರನ್ನು ಖಾಸಗಿ ಹೊಟೇಲ್‍ನಲ್ಲಿ ಸುಮಾರು 20 ನಿಮಿಷಕ್ಕೂ ಹೆಚ್ಚು ಕಾಲ ಮಾತುಕತೆ ನಡೆಸಿದ್ದು, ಮೈಸೂರು-ಬೆಂಗಳೂರು ದಶಪಥ ರಸ್ತೆ ಕಾಮಗಾರಿ ಬಗ್ಗೆ ಕೇಳಿಬಂದ ದೂರುಗಳ ಬಗ್ಗೆ ಗಮನಕ್ಕೆ ತಂದರು
ಇತ್ತೀಚೆಗೆ ರಾಮನಗರ ಸುತ್ತಮುತ್ತ ಸುರಿದ ಭಾರೀ ಮಳೆಯಿಂದಾಗಿ ಬೆಂಗಳೂರು-ಮೈಸೂರು ರಸ್ತೆಯ ಇಕ್ಕೆಲಗಳಲ್ಲಿಯೂ ನೀರು ನಿಂತು ಪ್ರಯಾಣಿಕರು, ವಾಹನ ಸವಾರರು ಹಾಗೂ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗಿತ್ತು. ವಾಹನಗಳು ನೀರಿನಲ್ಲಿ ಮುಳುಗಿದ್ದವು. ರಸ್ತೆಯಲ್ಲಿ ನೀರು ನಿಲ್ಲಲು ದಶಪಥ ರಸ್ತೆಯ ಕಳಪೆ ಕಾಮಗಾರಿಯೇ ಕಾರಣ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತಿತರರು ಸರ್ಕಾರದ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದರು.

ಈ ಹಿನ್ನೆಲೆಯಲ್ಲಿ ಕೇಂದ್ರ ಸಾರಿಗೆ ಗಡ್ಕರಿ ಅವರನ್ನು ಭೇಟಿ ಮಾಡಿದ ಬೊಮ್ಮಾಯಿ ಅವರು ಯೋಜನೆಯ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದ್ದಾರೆ ಹಾಗೂ ಆದ ತೊಂದರೆಗಳ ಬಗ್ಗೆ ವಿವರಿಸಿದ್ದಾರೆ ಎನ್ನಲಾಗಿದೆ.
ಹೆದ್ದಾರಿ ನಿರ್ಮಾಣ ಮಾಡುವಾಗ ಮಾಡಿಕೊಂಡ ಒಪ್ಪಂದದಂತೆ ಗುಣಮಟ್ಟದ ಕಾಮಗಾರಿಯನ್ನು ನಡೆಸಿಲ್ಲ ಎಂಬ ಆರೋಪ ಕೇಳಿಬಂದಿದೆ. ಎಲ್ಲೆಂದರಲ್ಲಿ ಹಮ್ಸ್ ಅಳವಡಿಸಿರುವುದು , ಸರಿಯಾದ ಸರ್ವೀಸ್ ರಸ್ತೆಗಳನ್ನು ನಿರ್ಮಾಣ ಮಾಡದಿರುವುದು ಸೇರಿದಂತೆ ಹತ್ತಾರು ದೂರುಗಳು ಕೇಳಿಬಂದಿದೆ. ತಕ್ಷಣವೇ ಇದರ ಬಗ್ಗ ಸಮಗ್ರ ತನಿಖೆ ನಡೆಸಬೇಕು ಎಂದು ಒತ್ತಾಯ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕಳೆದ ವಾರ ಸುರಿದ ಭಾರೀ ಮಳೆಯಿಂದಾಗಿ ರಾಮನಗರ, ಚನ್ನಪಟ್ಟಣ ಹಾಗೂ ಸುತ್ತಮುತ್ತಲಿನ ಭಾಗದಲ್ಲಿ ಭಾರೀ ಮಳೆಯಾಗಿ ಹೈವೆಯಲ್ಲಿ ನೀರು ನಿಂತಿತ್ತು. ಇದು ಪ್ರತಿಪಕ್ಷ ಮತ್ತು ಬಿಜೆಪಿ ಸರ್ಕಾರದ ನಡುವೆ ಮಾತಿನ ಚಕಮಕಿಗೆ ಕಾರಣವಾಗಿತ್ತು.

ಪ್ರಮುಖ ಸುದ್ದಿ :-   ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ: ಮಗನಿಗೆ ಯಾವ ಶಿಕ್ಷೆ ಕೊಟ್ರೂ ಸ್ವಾಗತಿಸ್ತೇನೆ ಎಂದ ಕೊಲೆ ಆರೋಪಿ ಫಯಾಜ್‌ ತಂದೆ

3 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement