ತುಮಕೂರು ಪಾಲಿಕೆಯಲ್ಲಿ ಕಾಂಗ್ರೆಸ್-ಜೆಡಿಎಸ್ ದೋಸ್ತಿ : ಮೇಯರ್ ಕಾಂಗ್ರೆಸ್‌ ತೆಕ್ಕೆಗೆ, ಜೆಡಿಎಸ್‌ಗೆ ಉಪ ಮೇಯರ್ ಸ್ಥಾನ

ತುಮಕೂರು: ತುಮಕೂರು ಮಹಾನಗರ ಪಾಲಿಕೆಯ ಮೇಯರ್ ಹಾಗೂ ಉಪಮೇಯರ್ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡ ಹಿನ್ನೆಲೆಯಲ್ಲಿ ಮೇಯರ್ ಆಗಿ ಕಾಂಗ್ರೆಸ್ ಸದಸ್ಯೆ ಪ್ರಭಾವತಿ ಸುದೀಶ್ವರ ಅವಿರೋಧ ಆಯ್ಕೆಯಾಗಿದ್ದಾರೆ. ಮೇಯರ್‌ ಸ್ಥಾನಕ್ಕೆ ಇವರು ಮಾತ್ರ ನಾಮಪತ್ರ ಸಲ್ಲಿಸಿದ್ದ ಹಿನ್ನೆಲೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಘೋಷಿಸಲಾಯಿತು.

ಉಪಮೇಯರ್ ಆಗಿ ಜೆ.ಡಿ.ಎಸ್​ನ ಪಾಲಿಕೆ ಸದಸ್ಯ ನರಸಿಂಹಮೂರ್ತಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪ ಮೇಯರ್ ಸ್ಥಾನಕ್ಕೆ ಜೆಡಿಎಸ್- ಬಿಜೆಪಿ ನಡುವೆ ಪೈಪೋಟಿ ಏರ್ಪಟ್ಟಿತ್ತು. ಆದರೆ ಬಿಜೆಪಿಯಿಂದ ನಾಮಪತ್ರ ಸಲ್ಲಿಸಿದ್ದ ಮಲ್ಲಿಕಾರ್ಜುನ ಕೊನೆ ಕ್ಷಣದಲ್ಲಿ ಸ್ಪರ್ಧೆಯಿಂದ ಹಿಂದೆ ಸರಿದರು.
ಈ ಹಿನ್ನೆಲೆಯಲ್ಲಿ ಉಪಮೇಯರ್ ಆಗಿ ಜೆಡಿಎಸ್ ನರಸಿಂಹಮೂರ್ತಿ ಅವಿರೋಧ ಆಯ್ಕೆಯಾಗಿದ್ದಾರೆ ಎಂದು ಘೋಷಿಸಲಾಯಿತು. ಪ್ರಾದೇಶಿಕ ಆಯುಕ್ತ ಆಮ್ಲಾನ್ ಆದಿತ್ಯ ಬಿಸ್ವಾಸ್ ನೇತೃತ್ವದಲ್ಲಿ ಚುನಾವಣಾ ಪ್ರಕ್ರಿಯೆ ನಡೆಯಿತು

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಕುಮಟಾ : ಬಾಡದಲ್ಲಿ ಚಿರತೆ ದಾಳಿಗೆ ಇಬ್ಬರಿಗೆ ಗಾಯ ; ಮನೆಯೊಳಗೆ ನುಗ್ಗಿ ಅವಿತುಕೊಂಡ ಚಿರತೆ

ನಿಮ್ಮ ಕಾಮೆಂಟ್ ಬರೆಯಿರಿ

advertisement